< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 13 >

1 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.
Though I speak with the tongues of men and of angels, and have not charity, I am become as sounding brass, or a tinkling cymbal.
2 ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
And though I have the gift of prophecy, and understand all mysteries, and all knowledge; and though I have all faith, so that I could remove mountains, and have not charity, I am nothing.
3 ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
And though I bestow all my goods to feed the poor, and though I give my body to be burned, and have not charity, it profiteth me nothing.
4 ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
Charity suffereth long, and is kind; charity envieth not; charity vaunteth not itself, is not puffed up,
5 ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
Doth not behave itself unseemly, seeketh not its own, is not easily provoked, thinketh no evil;
6 ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ.
Rejoiceth not in iniquity, but rejoiceth in the truth;
7 ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
Beareth all things, believeth all things, hopeth all things, endureth all things.
8 ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
Charity never faileth: but whether there are prophecies, they shall be done away; whether there are tongues, they shall cease; whether there is knowledge, it shall vanish away.
9 ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ.
For we know in part, and we prophesy in part.
10 ೧೦ ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು.
But when that which is perfect is come, then that which is in part shall be done away.
11 ೧೧ ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
When I was a child, I spoke as a child, I understood as a child, I thought as a child: but when I became a man, I put away childish things.
12 ೧೨ ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
For now we see in a mirror, darkly; but then face to face: now I know in part; but then shall I know even as also I am known.
13 ೧೩ ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.
And now abideth faith, hope, charity, these three; but the greatest of these is charity.

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 13 >