< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 15 >

1 ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.
Още, братя, напомнювам ви благовестието, което ви проповядвах, което приехте, в което стоите,
2 ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.
чрез което се и спасявате, ако го държите според както съм ви го благовестил,
3 ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;
Защото първо ви предадох онова, което приех, че Христос умря за греховете ни според писанията;
4 ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.
че бе погребан; че биде възкресен на третия ден според писанията;
5 ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು.
и че се яви на Кифа, после на дванадесетте,
6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.
че след това се яви на повече от петстотин братя наведнъж, от които повечето и досега са живи, а някои починаха;
7 ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು.
че после се яви на Якова, тогава на всички апостоли;
8 ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು.
а най-после от всички яви се на мене, като на някой изверг.
9 ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
Защото аз съм най-нищожният от апостолите, който не съм достоен и апостол да се нарека защото гоних Божията църква,
10 ೧೦ ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.
Но с Божията благодат съм каквото съм; и дадената на мене Негова благодат не бе напразно, но трудих се повече от всички тях,
11 ೧೧ ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ.
И тъй, било че аз се трудих повече, било че те, така проповядвахме и те и аз, и вие така сте повярвали.
12 ೧೨ ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?
Ако се проповядва, че Христос е възкресен от мъртвите, как казват някои между вас, че няма възкресение на мъртвите?
13 ೧೩ ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ.
Ако няма възкресение на мъртвите, то нито Христос е бил възкресен;
14 ೧೪ ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.
и ако Христос не е бил възкресен, то празна е нашата проповед, празна е нашата вяра.
15 ೧೫ ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.
При това, ние се намираме лъжесвидетели Божии; защото свидетелствувахме за Бога, че е възкресил Христа, Когото не е възкресил, ако е тъй, че мъртвите не възкресяват;
16 ೧೬ ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.
защото, ако мъртвите не се възкресяват, то нито Христос е бил възкресен;
17 ೧೭ ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
и ако Христос не е бил възкресен, суетна е вашата вяря, вие сте още в греховете си.
18 ೧೮ ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.
Тогава и тия, които са починали в Христа, са погинали.
19 ೧೯ ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ.
Ако само в тоя живот се надяваме на Христа, то от всичките човеци ние сме най-много за съжаление.
20 ೨೦ ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.
Но сега Христос е бил възкесен, първият плод на починалите.
21 ೨೧ ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.
Понеже, както чрез човека дойде смъртта, така чрез човека дойде възкресението на мъртвите.
22 ೨೨ ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
Защото, както в Адама всички умират, така и в Христа всички ще оживеят.
23 ೨೩ ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.
Но всеки на своя ред: Христос първия плод, после, при пришествието на Христа, тия, които са Негови;
24 ೨೪ ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.
Тогава ще бъде краят, когато ще предаде царството на Бога и Отца, след като унищожи всяко началство и всяка власт и сила.
25 ೨೫ ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.
Защото Той трябва да царува, докато положи всички врагове под нозете Си.
26 ೨೬ ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.
И смъртта, най-последен враг, и тя ще бъде унищожена,
27 ೨೭ “ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.
защото Бог "е покорил всичко под нозете Му" А когато ще е казъл, че всичко е вече покорено, (с явно изключение на Този, Който Му е покорил всичко),
28 ೨೮ ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
когато казвам, ще Му е било покорено всичко, тогава и Сам Синът ще покори Този, Който Му е покорил всичко, за да бъде Бог все във все.
29 ೨೯ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.
Иначе, какво ще правят тия, които се кръщават заради мъртвите? Ако мъртвите никак не се възкресяват, защо и ще се кръщават заради тях?
30 ೩೦ ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?
Защо и ние се излагаме на бедствия всеки час?
31 ೩೧ ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
Братя, с похвалата, с която се гордея за вас в Христа Исуса нашия Господ, аз всеки ден умирам.
32 ೩೨ ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
Ако, по човешки казано, съм се борил с зверовете в Ефес, какво ме ползува? Ако мъртвите не се възкресяват "нека ядем и пием, защото утре ще умрем".
33 ೩೩ ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”
Не се мамете. "Лошите другари покваряват добрите нрави".
34 ೩೪ ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
Отрезнявайте към правдата. и не съгрешавайте, защото някои от вас не познават Бога. Това казвам, за да ви направя да се засрамите.
35 ೩೫ “ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.
Но някой ще рече; Как се възкресяват мъртвите? и с какво тяло ще дойдат?
36 ೩೬ ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ.
Безумецо, това което ти сееш, не оживявя, ако не умира.
37 ೩೭ ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.
И когато го сееш, не посяваш тялото, което ще изникне, а голо зърно, каквото се случи, пшенично или някое друго;
38 ೩೮ ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ.
но Бог му дава тяло, каквото му е угодно, и на всяко семе собственото му тяло.
39 ೩೯ ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ.
Всяка плът не е еднаква; но друга е плътта на човеците, а друга на животните, друга пък на птиците и друга на рибите.
40 ೪೦ ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ.
Има и небесни тела и земни тела, друга е, обаче, славата на небесните, друга на земните.
41 ೪೧ ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.
Друг е блясъкът на слънцето, друг на луната и друг блясъкът на звездите; па и звезда от звезда се различава по блясъка.
42 ೪೨ ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.
Така е и възкресението на мъртвите. Тялото се сее в тление, възкръсва в нетление;
43 ೪೩ ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು;
сее се в безчестие, възкръсва в слава; сее се в немощ, възкръсва в сила;
44 ೪೪ ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ.
сее се одушевено тяло, възкръсва духовно тяло. Ако има одушевено тяло, то има и духовно тяло.
45 ೪೫ “ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.
Така е и писано: Първият човек Адам "стана жива душа", а последният Адам стана животворещ дух.
46 ೪೬ ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು.
Обаче, не е първо духовното, а одушевеното, и после духовното.
47 ೪೭ ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.
Първият човек е от земята, пръстен; вторият човек е от небето.
48 ೪೮ ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ.
Какъвто е пръстният, такива са и пръстните; и какъвто е небесният, такива са и небесните.
49 ೪೯ ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
И както сме се облекли в образа на пръстния, ще се облечем и в образа на небесния.
50 ೫೦ ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.
А това казвам, братя, че плът и кръв не могат да наследят Божието царство, нито тленното наследява нетлението.
51 ೫೧ ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.
Ето, една тайна ви казвам: Не всички ще починем, но всички ще се изменим,
52 ೫೨ ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.
в една минута, в миг на око, при последната тръба; защото тя ще затръби, и мъртвите ще възкръснат нетленни, и ние ще се изменим.
53 ೫೩ ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.
Защото това тленното трябва да се облече в нетление, и това смъртното да се облече в безсмъртие.
54 ೫೪ ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
А когато това тленното се облече в безсмъртие, тогава ще се сбъдне писаното слово: "Погълната биде смъртта победоносно".
55 ೫೫ “ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” (Hadēs g86)
О смърте, где ти е победата? О смърте, где ти е жилото? (Hadēs g86)
56 ೫೬ ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.
Жилото на смъртта е грехът, и силата на греха е законът;
57 ೫೭ ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
но благодарение Богу, Който ни дава победа чрез нашия Господ Исус Христос.
58 ೫೮ ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
Затова възлюбени мои братя, бъдете твърди, непоколебими, и преизобилвайте всякога в Господното дело, понеже знаете, че в Господа трудът ви не е празден.

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 15 >