< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 9 >

1 ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?
Surely I am free? Surely I am an apostle Surely Jesus (Christ *K) the Lord of us have I seen? Surely the work of mine you yourselves are in [the] Lord?
2 ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.
If to others not I am an apostle, yet at least to you I am; the for seal (of my *N+kO) apostleship you yourselves are in [the] Lord.
3 ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ,
My defense to those me myself examining is this:
4 ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?
certainly surely we have [the] right to eat and to drink?
5 ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?
certainly surely we have authority a sister a wife to take about as also the other apostles and the brothers of the Lord and Cephas?
6 ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?
Or only I myself and Barnabas not have permission not to work?
7 ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?
who serves as a soldier at [his] own expense at any time? Who plants a vineyard and (from *k) (the fruit *N+kO) of it not does eat? Or who shepherds a flock and from the milk of the flock not does drink?
8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?
Not according to man these things do I speak? Or also the law these things (not *N+kO) says?
9 “ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?
In for the of Moses law it has been written: Not you will muzzle an ox treading out grain. Surely not for the oxen is there care with God?
10 ೧೦ ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.
Or because of us entirely is He speaking? For sake of us for it was written because ought in hope the [one] plowing to plow, and the [one] threshing (of the hope of him *K) in hope ([that he] *no) is to partake.
11 ೧೧ ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?
If we ourselves among you spiritual things sowed, [is it] a great thing if we ourselves from you material things will reap?
12 ೧೨ ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.
If others of the over you authority partake, surely more we ourselves? But not we did use right this, Instead all things we bear so that not any hindrance we may place to the gospel of Christ.
13 ೧೩ ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?
Surely you know that those in the sacred [things] working (the [things] *no) of the temple eat? those at the altar attending at the altar partake?
14 ೧೪ ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.
So also the Lord has prescribed to those the gospel proclaiming from the gospel to live.
15 ೧೫ ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.
I myself however (not *no) (have used *N+kO) not any of these; Neither have I written now these things that thus it may become with me myself; good for me rather to die than the boasting of mine (so that *K) (no [one] will make void. *N+kO)
16 ೧೬ ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!
If for I shall evangelise, nothing there is to me boasting; necessity for me is laid upon; Woe (however *N+kO) to me be if not (I shall evangelise. *N+kO)
17 ೧೭ ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.
If for willingly this I do, a reward I have; if however unwillingly, a stewardship I have been entrusted with.
18 ೧೮ ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.
What then (of me *N+kO) is the reward? That in evangelising free of charge I may offer the gospel (of the Christ *K) so as not to use up the right of me in the gospel.
19 ೧೯ ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.
Free for being from all to all myself I became servant so that the more I may gain;
20 ೨೦ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.
And I became to the Jews like a Jew so that Jews I may win; To those under [the] Law as under [the] law (not being myself *NO) under [the] law so that those under [the] law I may win;
21 ೨೧ ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.
To those outside [the] Law like outside [the] Law — not being outside [the] law (of God *N+kO) but under [the] law (of Christ — *N+kO) so that I may win (those *no) outside [the] Law.
22 ೨೨ ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.
I became to the weak (as *K) weak that the weak I may win; The [things] to all I have become all so that by all means some I may save.
23 ೨೩ ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.
(All [things] *N+KO) now I do on account of the gospel that a fellow partaker with it I may become.
24 ೨೪ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
Surely you know that those in a race course running all indeed run, one however receives the prize? Thus do run that you may grasp [it].
25 ೨೫ ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.
Everyone now who is striving in all things controls himself; they indeed then that a perishable crown they may receive, we ourselves however an imperishable.
26 ೨೬ ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.
I myself therefore thus run as not uncertainly, so I fight as not [the] air beating;
27 ೨೭ ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
But I batter my body and bring [it] into servitude, lest perhaps to others having preached myself disqualified I may be.

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 9 >