< ಅರಸುಗಳು - ಪ್ರಥಮ ಭಾಗ 14 >

1 ಆ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.
בָּעֵ֣ת הַהִ֔יא חָלָ֖ה אֲבִיָּ֥ה בֶן־יָרָבְעָֽם׃
2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.
וַיֹּ֨אמֶר יָרָבְעָ֜ם לְאִשְׁתֹּ֗ו ק֤וּמִי נָא֙ וְהִשְׁתַּנִּ֔ית וְלֹ֣א יֵֽדְע֔וּ כִּי־אַתִּי (אַ֖תְּ) אֵ֣שֶׁת יָרָבְעָ֑ם וְהָלַ֣כְתְּ שִׁלֹ֗ה הִנֵּה־שָׁם֙ אֲחִיָּ֣ה הַנָּבִ֔יא הֽוּא־דִבֶּ֥ר עָלַ֛י לְמֶ֖לֶךְ עַל־הָעָ֥ם הַזֶּֽה׃
3 ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು.
וְלָקַ֣חַתְּ בְּ֠יָדֵךְ עֲשָׂרָ֨ה לֶ֧חֶם וְנִקֻּדִ֛ים וּבַקְבֻּ֥ק דְּבַ֖שׁ וּבָ֣את אֵלָ֑יו ה֚וּא יַגִּ֣יד לָ֔ךְ מַה־יִּֽהְיֶ֖ה לַנָּֽעַר׃
4 ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.
וַתַּ֤עַשׂ כֵּן֙ אֵ֣שֶׁת יָרָבְעָ֔ם וַתָּ֙קָם֙ וַתֵּ֣לֶךְ שִׁלֹ֔ה וַתָּבֹ֖א בֵּ֣ית אֲחִיָּ֑ה וַאֲחִיָּ֙הוּ֙ לֹֽא־יָכֹ֣ל לִרְאֹ֔ות כִּ֛י קָ֥מוּ עֵינָ֖יו מִשֵּׂיבֹֽו׃ ס
5 ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು” ಎಂದು ತಿಳಿಸಿದ್ದನು.
וַיהוָ֞ה אָמַ֣ר אֶל־אֲחִיָּ֗הוּ הִנֵּ֣ה אֵ֣שֶׁת יָרָבְעָ֡ם בָּאָ֣ה לִדְרֹשׁ֩ דָּבָ֨ר מֵעִמְּךָ֤ אֶל־בְּנָהּ֙ כִּֽי־חֹלֶ֣ה ה֔וּא כָּזֹ֥ה וְכָזֶ֖ה תְּדַבֵּ֣ר אֵלֶ֑יהָ וִיהִ֣י כְבֹאָ֔הּ וְהִ֖יא מִתְנַכֵּרָֽה׃
6 ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನು ಆಕೆಯ ಕಾಲು ಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.
וַיְהִי֩ כִשְׁמֹ֨עַ אֲחִיָּ֜הוּ אֶת־קֹ֤ול רַגְלֶ֙יהָ֙ בָּאָ֣ה בַפֶּ֔תַח וַיֹּ֕אמֶר בֹּ֖אִי אֵ֣שֶׁת יָרָבְעָ֑ם לָ֣מָּה זֶּ֗ה אַ֚תְּ מִתְנַכֵּרָ֔ה וְאָ֣נֹכִ֔י שָׁל֥וּחַ אֵלַ֖יִךְ קָשָֽׁה׃
7 ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.
לְכִ֞י אִמְרִ֣י לְיָרָבְעָ֗ם כֹּֽה־אָמַ֤ר יְהוָה֙ אֱלֹהֵ֣י יִשְׂרָאֵ֔ל יַ֛עַן אֲשֶׁ֥ר הֲרִימֹתִ֖יךָ מִתֹּ֣וךְ הָעָ֑ם וָאֶתֶּנְךָ֣ נָגִ֔יד עַ֖ל עַמִּ֥י יִשְׂרָאֵֽל׃
8 ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.
וָאֶקְרַ֤ע אֶת־הַמַּמְלָכָה֙ מִבֵּ֣ית דָּוִ֔ד וָאֶתְּנֶ֖הָ לָ֑ךְ וְלֹֽא־הָיִ֜יתָ כְּעַבְדִּ֣י דָוִ֗ד אֲשֶׁר֩ שָׁמַ֨ר מִצְוֹתַ֜י וַאֲשֶׁר־הָלַ֤ךְ אַחֲרַי֙ בְּכָל־לְבָבֹ֔ו לַעֲשֹׂ֕ות רַ֖ק הַיָּשָׁ֥ר בְּעֵינָֽי׃
9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.
וַתָּ֣רַע לַעֲשֹׂ֔ות מִכֹּ֖ל אֲשֶׁר־הָי֣וּ לְפָנֶ֑יךָ וַתֵּ֡לֶךְ וַתַּעֲשֶׂה־לְּךָ֩ אֱלֹהִ֨ים אֲחֵרִ֤ים וּמַסֵּכֹות֙ לְהַכְעִיסֵ֔נִי וְאֹתִ֥י הִשְׁלַ֖כְתָּ אַחֲרֵ֥י גַוֶּֽךָ׃ ס
10 ೧೦ ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.
לָכֵ֗ן הִנְנִ֨י מֵבִ֤יא רָעָה֙ אֶל־בֵּ֣ית יָרָבְעָ֔ם וְהִכְרַתִּ֤י לְיָֽרָבְעָם֙ מַשְׁתִּ֣ין בְּקִ֔יר עָצ֥וּר וְעָז֖וּב בְּיִשְׂרָאֵ֑ל וּבִֽעַרְתִּי֙ אַחֲרֵ֣י בֵית־יָרָבְעָ֔ם כַּאֲשֶׁ֛ר יְבַעֵ֥ר הַגָּלָ֖ל עַד־תֻּמֹּֽו׃
11 ೧೧ ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.
הַמֵּ֨ת לְיָֽרָבְעָ֤ם בָּעִיר֙ יֹאכְל֣וּ הַכְּלָבִ֔ים וְהַמֵּת֙ בַּשָּׂדֶ֔ה יֹאכְל֖וּ עֹ֣וף הַשָּׁמָ֑יִם כִּ֥י יְהוָ֖ה דִּבֵּֽר׃
12 ೧೨ ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.
וְאַ֥תְּ ק֖וּמִי לְכִ֣י לְבֵיתֵ֑ךְ בְּבֹאָ֥ה רַגְלַ֛יִךְ הָעִ֖ירָה וּמֵ֥ת הַיָּֽלֶד׃
13 ೧೩ ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.
וְסָֽפְדוּ־לֹ֤ו כָל־יִשְׂרָאֵל֙ וְקָבְר֣וּ אֹתֹ֔ו כִּֽי־זֶ֣ה לְבַדֹּ֔ו יָבֹ֥א לְיָרָבְעָ֖ם אֶל־קָ֑בֶר יַ֣עַן נִמְצָא־בֹ֞ו דָּבָ֣ר טֹ֗וב אֶל־יְהוָ֛ה אֱלֹהֵ֥י יִשְׂרָאֵ֖ל בְּבֵ֥ית יָרָבְעָֽם׃
14 ೧೪ ಯೆಹೋವನು ಇಸ್ರಾಯೇಲರನ್ನು ಆಳಲು ಬೇರೊಬ್ಬ ಅರಸನನ್ನು ನೇಮಿಸುವನು. ಅವನು ಕೂಡಲೇ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವದೋ?
וְהֵקִים֩ יְהוָ֨ה לֹ֥ו מֶ֙לֶךְ֙ עַל־יִשְׂרָאֵ֔ל אֲשֶׁ֥ר יַכְרִ֛ית אֶת־בֵּ֥ית יָרָבְעָ֖ם זֶ֣ה הַיֹּ֑ום וּמֶ֖ה גַּם־עָֽתָּה׃
15 ೧೫ ಯೆಹೋವನು ಇಸ್ರಾಯೇಲರನ್ನು ಹೊಡೆಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದ್ದರಿಂದ ಆತನು ಅವರನ್ನು ಅವರ ಪೂರ್ವಿಕರಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದುರಿಸಿಬಿಡುವನು.
וְהִכָּ֨ה יְהוָ֜ה אֶת־יִשְׂרָאֵ֗ל כַּאֲשֶׁ֨ר יָנ֣וּד הַקָּנֶה֮ בַּמַּיִם֒ וְנָתַ֣שׁ אֶת־יִשְׂרָאֵ֗ל מֵ֠עַל הָאֲדָמָ֨ה הַטֹּובָ֤ה הַזֹּאת֙ אֲשֶׁ֤ר נָתַן֙ לַאֲבֹ֣ותֵיהֶ֔ם וְזֵרָ֖ם מֵעֵ֣בֶר לַנָּהָ֑ר יַ֗עַן אֲשֶׁ֤ר עָשׂוּ֙ אֶת־אֲשֵׁ֣רֵיהֶ֔ם מַכְעִיסִ֖ים אֶת־יְהוָֽה׃
16 ೧೬ ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.
וְיִתֵּ֖ן אֶת־יִשְׂרָאֵ֑ל בִּגְלַ֞ל חַטֹּ֤אות יָֽרָבְעָם֙ אֲשֶׁ֣ר חָטָ֔א וַאֲשֶׁ֥ר הֶחֱטִ֖יא אֶת־יִשְׂרָאֵֽל׃
17 ೧೭ ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೇ ಹುಡುಗನು ಸತ್ತನು.
וַתָּ֙קָם֙ אֵ֣שֶׁת יָרָבְעָ֔ם וַתֵּ֖לֶךְ וַתָּבֹ֣א תִרְצָ֑תָה הִ֛יא בָּאָ֥ה בְסַף־הַבַּ֖יִת וְהַנַּ֥עַר מֵֽת׃
18 ೧೮ ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.
וַיִּקְבְּר֥וּ אֹתֹ֛ו וַיִּסְפְּדוּ־לֹ֖ו כָּל־יִשְׂרָאֵ֑ל כִּדְבַ֤ר יְהוָה֙ אֲשֶׁ֣ר דִּבֶּ֔ר בְּיַד־עַבְדֹּ֖ו אֲחִיָּ֥הוּ הַנָּבִֽיא׃
19 ೧೯ ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
וְיֶ֙תֶר֙ דִּבְרֵ֣י יָֽרָבְעָ֔ם אֲשֶׁ֥ר נִלְחַ֖ם וַאֲשֶׁ֣ר מָלָ֑ךְ הִנָּ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יִשְׂרָאֵֽל׃
20 ೨೦ ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.
וְהַיָּמִים֙ אֲשֶׁ֣ר מָלַ֣ךְ יָרָבְעָ֔ם עֶשְׂרִ֥ים וּשְׁתַּ֖יִם שָׁנָ֑ה וַיִּשְׁכַּב֙ עִם־אֲבֹתָ֔יו וַיִּמְלֹ֛ךְ נָדָ֥ב בְּנֹ֖ו תַּחְתָּֽיו׃ פ
21 ೨೧ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
וּרְחַבְעָם֙ בֶּן־שְׁלֹמֹ֔ה מָלַ֖ךְ בִּֽיהוּדָ֑ה בֶּן־אַרְבָּעִ֣ים וְאַחַ֣ת שָׁנָה֩ רְחַבְעָ֨ם בְּמָלְכֹ֜ו וּֽשֲׁבַ֨ע עֶשְׂרֵ֥ה שָׁנָ֣ה ׀ מָלַ֣ךְ בִּירוּשָׁלַ֗͏ִם הָ֠עִיר אֲשֶׁר־בָּחַ֨ר יְהוָ֜ה לָשׂ֨וּם אֶת־שְׁמֹ֥ו שָׁם֙ מִכֹּל֙ שִׁבְטֵ֣י יִשְׂרָאֵ֔ל וְשֵׁ֣ם אִמֹּ֔ו נַעֲמָ֖ה הָעַמֹּנִֽית׃
22 ೨೨ ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.
וַיַּ֧עַשׂ יְהוּדָ֛ה הָרַ֖ע בְּעֵינֵ֣י יְהוָ֑ה וַיְקַנְא֣וּ אֹתֹ֗ו מִכֹּל֙ אֲשֶׁ֣ר עָשׂ֣וּ אֲבֹתָ֔ם בְּחַטֹּאתָ֖ם אֲשֶׁ֥ר חָטָֽאוּ׃
23 ೨೩ ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.
וַיִּבְנ֨וּ גַם־הֵ֧מָּה לָהֶ֛ם בָּמֹ֥ות וּמַצֵּבֹ֖ות וַאֲשֵׁרִ֑ים עַ֚ל כָּל־גִּבְעָ֣ה גְבֹהָ֔ה וְתַ֖חַת כָּל־עֵ֥ץ רַעֲנָֽן׃
24 ೨೪ ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.
וְגַם־קָדֵ֖שׁ הָיָ֣ה בָאָ֑רֶץ עָשׂ֗וּ כְּכֹל֙ הַתֹּועֲבֹ֣ת הַגֹּויִ֔ם אֲשֶׁר֙ הֹורִ֣ישׁ יְהוָ֔ה מִפְּנֵ֖י בְּנֵ֥י יִשְׂרָאֵֽל׃ פ
25 ೨೫ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರುದ್ಧವಾಗಿ ದಂಡೆತ್ತಿ ಬಂದನು.
וַיְהִ֛י בַּשָּׁנָ֥ה הַחֲמִישִׁ֖ית לַמֶּ֣לֶךְ רְחַבְעָ֑ם עָלָ֛ה שׁוּשַׁק (שִׁישַׁ֥ק) מֶֽלֶךְ־מִצְרַ֖יִם עַל־יְרוּשָׁלָֽ͏ִם׃
26 ೨೬ ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
וַיִּקַּ֞ח אֶת־אֹצְרֹ֣ות בֵּית־יְהוָ֗ה וְאֶת־אֹֽוצְרֹות֙ בֵּ֣ית הַמֶּ֔לֶךְ וְאֶת־הַכֹּ֖ל לָקָ֑ח וַיִּקַּח֙ אֶת־כָּל־מָגִנֵּ֣י הַזָּהָ֔ב אֲשֶׁ֥ר עָשָׂ֖ה שְׁלֹמֹֽה׃
27 ೨೭ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.
וַיַּ֨עַשׂ הַמֶּ֤לֶךְ רְחַבְעָם֙ תַּחְתָּ֔ם מָגִנֵּ֖י נְחֹ֑שֶׁת וְהִפְקִ֗יד עַל־יַד֙ שָׂרֵ֣י הָרָצִ֔ים הַשֹּׁ֣מְרִ֔ים פֶּ֖תַח בֵּ֥ית הַמֶּֽלֶךְ׃
28 ೨೮ ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.
וַיְהִ֛י מִדֵּי־בֹ֥א הַמֶּ֖לֶךְ בֵּ֣ית יְהוָ֑ה יִשָּׂאוּם֙ הָֽרָצִ֔ים וֶהֱשִׁיב֖וּם אֶל־תָּ֥א הָרָצִֽים׃
29 ೨೯ ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
וְיֶ֛תֶר דִּבְרֵ֥י רְחַבְעָ֖ם וְכָל־אֲשֶׁ֣ר עָשָׂ֑ה הֲלֹא־הֵ֣מָּה כְתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יְהוּדָֽה׃
30 ೩೦ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
וּמִלְחָמָ֨ה הָיְתָ֧ה בֵין־רְחַבְעָ֛ם וּבֵ֥ין יָרָבְעָ֖ם כָּל־הַיָּמִֽים׃
31 ೩೧ ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.
וַיִּשְׁכַּ֨ב רְחַבְעָ֜ם עִם־אֲבֹתָ֗יו וַיִּקָּבֵ֤ר עִם־אֲבֹתָיו֙ בְּעִ֣יר דָּוִ֔ד וְשֵׁ֣ם אִמֹּ֔ו נַעֲמָ֖ה הָעַמֹּנִ֑ית וַיִּמְלֹ֛ךְ אֲבִיָּ֥ם בְּנֹ֖ו תַּחְתָּֽיו׃ פ

< ಅರಸುಗಳು - ಪ್ರಥಮ ಭಾಗ 14 >