< ಪೇತ್ರನು ಬರೆದ ಮೊದಲನೆಯ ಪತ್ರಿಕೆ 1 >

1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
Պետրոս՝ Յիսուս Քրիստոսի առաքեալ, Պոնտոսի, Գաղատիայի, Կապադովկիայի, Ասիայի ու Բիւթանիայի մէջ ցրուած գաղթականներուն,
2 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
որոնք ընտրուած են Հայր Աստուծոյ կանխագիտութեան համաձայն՝ Հոգիին սրբացումով, Յիսուս Քրիստոսի հնազանդութեան եւ արիւնին սրսկումին համար. շնորհք ու խաղաղութիւն թող շատնան ձեր վրայ:
3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
Օրհնեա՜լ ըլլայ Աստուած, մեր Տէրոջ՝ Յիսուս Քրիստոսի Հայրը, որ իր առատ ողորմութեան համաձայն վերստին ծնաւ մեզ կենարար յոյսի մը համար՝ Յիսուս Քրիստոսի մեռելներէն յարութեամբ,
4 ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.
եւ անեղծանելի, անարատ ու անթառամ ժառանգութեան մը համար՝ որ երկինքը վերապահուած է ձեզի:
5 ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
Դուք Աստուծոյ զօրութեամբ ու հաւատքով պահպանուած էք փրկութեան համար, որ պատրաստ է յայտնուելու վերջին ատենը.
6 ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
ուստի ցնծացէ՛ք անով, թէպէտ հիմա՝ քիչ մը ատեն, եթէ պէտք ըլլայ, կը տրտմիք բազմազան փորձութիւններով,
7 ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
որպէսզի ձեր հաւատքին փորձը (որ կորստական ոսկիէն շատ աւելի պատուական է, թէպէտ ան կը փորձարկուի կրակով, ) գտնուի գովեստով, պատիւով եւ փառքով՝ Յիսուս Քրիստոսի յայտնութեան ատենը:
8 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
Դուք կը սիրէք զայն՝ չտեսած. կը հաւատաք անոր՝ թէպէտ հիմա չէք տեսներ զայն, եւ կը ցնծաք անպատմելի ու փառաւոր ուրախութեամբ,
9
ստանալով ձեր անձերուն փրկութիւնը՝ որպէս վախճանը ձեր հաւատքին:
10 ೧೦ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
Այդ փրկութիւնը փնտռեցին եւ զննեցին մարգարէները, որոնք մարգարէացան ձեզի սահմանուած շնորհքին մասին:
11 ೧೧ ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
Կը զննէին թէ ի՛նչ կամ ինչպիսի՛ ատեն կը բացայայտէր իրենց մէջ եղած Քրիստոսի Հոգին, երբ կանխաւ կը վկայէր Քրիստոսի չարչարանքներուն եւ անոնց հետեւող փառքին մասին:
12 ೧೨ ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
Անոնց յայտնուեցաւ թէ ո՛չ թէ իրե՛նց՝ հապա մեզի՛ կը սպասարկէին այն բաները, որոնք հիմա հաղորդուեցան ձեզի անո՛նց միջոցով՝ որ աւետարանեցին ձեզի երկինքէն ղրկուած Սուրբ Հոգիով: Այդ բաներո՛ւն է որ հրեշտակները կը ցանկան ակնկառոյց նայիլ:
13 ೧೩ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
Ուստի գօտեպնդեցէ՛ք ձեր միտքին մէջքը, զգա՛ստ եղէք, ու կատարե՛լապէս յուսացէք այն շնորհքին՝ որ պիտի տրուի ձեզի Յիսուս Քրիստոսի յայտնութեան ատենը:
14 ೧೪ ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
Հնազանդ զաւակներու պէս՝ մի՛ համակերպիք ձեր անգիտութեան ատենուան նախկին ցանկութիւններուն:
15 ೧೫ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
Հապա, ինչպէս ձեզ կանչողը սուրբ է, դո՛ւք ալ սո՛ւրբ եղէք ձեր ամբողջ վարքին մէջ:
16 ೧೬ ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.
Որովհետեւ գրուած է. «Սո՛ւրբ եղէք, քանի որ ես սուրբ եմ»:
17 ೧೭ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
Եթէ Հայր կը կոչէք ա՛ն՝ որ առանց աչառութեան կը դատէ իւրաքանչիւրին արարքին համեմատ, երկիւղածութեա՛մբ ընթացէք հոս՝ ձեր պանդխտութեան ժամանակ:
18 ೧೮ ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
Որովհետեւ դուք գիտէք թէ ո՛չ թէ ապականացու արծաթով կամ ոսկիով ազատագրուեցաք ձեր հայրերէն աւանդուած փուճ վարքէն,
19 ೧೯ ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
հապա Քրիստոսի պատուական արիւնով՝ որպէս անարատ եւ անբիծ գառի մը արիւնը:
20 ೨೦ ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
Արդարեւ ան նախապէս ճանչցուած էր՝ աշխարհի հիմնադրութենէն առաջ, բայց այս վերջին ժամանակները երեւցաւ ձեզի համար:
21 ೨೧ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
Անոր միջոցով հաւատացիք Աստուծոյ, որ մեռելներէն յարուցանեց զայն եւ փառաւորեց զայն, որպէսզի ձեր հաւատքն ու յոյսը ըլլան Աստուծոյ վրայ:
22 ೨೨ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
Մաքուր սիրտով՝ ջերմեռանդութեա՛մբ սիրեցէք զիրար, քանի որ մաքրագործեցիք ձեր անձերը անկեղծ եղբայրսիրութեան համար՝ ճշմարտութեան հնազանդելով Հոգիին միջոցով,
23 ೨೩ ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. (aiōn g165)
ու վերստին ծնած ըլլալով՝ ո՛չ թէ ապականացու հունտէն, հապա՝ անապականէն - Աստուծոյ խօսքով՝ որ կ՚ապրի ու կը մնայ յաւիտեան: (aiōn g165)
24 ೨೪ ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
Արդարեւ «ամէն մարմին խոտի պէս է, ու մարդուն ամբողջ փառքը՝ խոտի ծաղիկի պէս. խոտը կը չորնայ եւ անոր ծաղիկը կը թափի,
25 ೨೫ ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. (aiōn g165)
բայց Տէրոջ խօսքը կը մնայ յաւիտեան»: Եւ ա՛յս խօսքն է՝ որ աւետարանուեցաւ ձեզի: (aiōn g165)

< ಪೇತ್ರನು ಬರೆದ ಮೊದಲನೆಯ ಪತ್ರಿಕೆ 1 >