< ಸಮುವೇಲನು - ಪ್ರಥಮ ಭಾಗ 11 >

1 ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
Und Nahas, der Ammoniter, zog herauf und belagerte Jabes-Gilead. Und alle Männer von Jabes sprachen zu Nahas: Mache einen Bund mit uns, so wollen wir dir dienen.
2 ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.
Aber Nahas, der Ammoniter, sprach zu ihnen: Unter dieser Bedingung will ich einen Bund mit euch machen, daß ich euch allen das rechte Auge aussteche und damit eine Schmach auf ganz Israel lege.
3 ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
Und die Ältesten von Jabes sprachen zu ihm: Laß uns sieben Tage, und wir wollen Boten in alle Grenzen Israels senden; und wenn niemand ist, der uns rettet, so wollen wir zu dir hinausgehen.
4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
Und die Boten kamen nach Gibea-Saul und redeten diese Worte zu den Ohren des Volkes. Und das ganze Volk erhob seine Stimme und weinte.
5 ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
Und siehe, Saul kam hinter den Rindern her vom Felde, und Saul sprach: Was ist dem Volke, daß sie weinen? Und sie erzählten ihm die Worte der Männer von Jabes.
6 ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
Da geriet der Geist Gottes über Saul, als er diese Worte hörte, und sein Zorn entbrannte sehr.
7 ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
Und er nahm ein Joch Rinder und zerstückte sie, und er sandte die Stücke durch Boten in alle Grenzen Israels und ließ sagen: Wer nicht auszieht hinter Saul und hinter Samuel her, dessen Rindern wird also getan werden! Da fiel der Schrecken Jehovas auf das Volk, und sie zogen aus wie ein Mann.
8 ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
Und er musterte sie zu Besek; und es waren der Kinder Israel 300000, und der Männer von Juda 30000.
9 ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
Und sie sprachen zu den Boten, die gekommen waren: So sollt ihr zu den Männern von Jabes-Gilead sagen: Morgen, wenn die Sonne heiß wird, wird euch Rettung werden. Und die Boten kamen und berichteten es den Männern von Jabes, und sie freuten sich.
10 ೧೦ ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
Und die Männer von Jabes sprachen: Morgen werden wir zu euch hinausgehen, und ihr möget uns tun nach allem, was gut ist in euren Augen.
11 ೧೧ ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
Und es geschah am anderen Tage, da stellte Saul das Volk in drei Haufen; und sie kamen mitten in das Lager bei der Morgenwache und schlugen Ammon bis zum Heißwerden des Tages; und die Übriggebliebenen wurden zerstreut, und es blieben unter ihnen nicht zwei beisammen.
12 ೧೨ ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
Da sprach das Volk zu Samuel: Wer ist es, der gesagt hat: Sollte Saul über uns regieren? Gebet die Männer her, daß wir sie töten!
13 ೧೩ ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
Aber Saul sprach: Niemand soll an diesem Tage getötet werden, denn heute hat Jehova Rettung geschafft in Israel!
14 ೧೪ ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
Und Samuel sprach zu dem Volke: Kommt laßt uns nach Gilgal gehen und daselbst das Königtum erneuern.
15 ೧೫ ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.
Und das ganze Volk zog nach Gilgal, und sie machten daselbst Saul zum König vor Jehova, zu Gilgal; und sie schlachteten daselbst Friedensopfer vor Jehova. Und Saul und alle Männer von Israel freuten sich daselbst gar sehr.

< ಸಮುವೇಲನು - ಪ್ರಥಮ ಭಾಗ 11 >