< ಸಮುವೇಲನು - ಪ್ರಥಮ ಭಾಗ 13 >

1 ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು.
Сын единаго лета Саул, егда нача царствовати, и два лета царствова над Израилем.
2 ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.
И избра себе Саул три тысящы мужей от мужей Израилевых, и быша с Саулом две тысящы в Махмасе и в горе Вефили, и тысяща беша со Ионафаном в Гаваи Вениаминове: и останок людий отпусти коегождо во своя селения.
3 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.
И порази Ионафан насива иноплеменника иже в холме. И услышаша иноплеменницы, и Саул воструби трубою во всю землю, глаголя: отвергошася раби.
4 ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.
И слыша весь Израиль глаголющих, яко порази Саул насива иноплеменника, и омерзе Израиль во иноплеменницех. И собрашася людие вслед Саула в Галгалех.
5 ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.
И иноплеменницы собрашася на брань на Израиля: и приидоша на Израиля тридесять тысящ колесниц и шесть тысящ конник и множество людий, яко песок иже при мори: и шедше ополчишася в Махмасе противу Вефорону на юг.
6 ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.
И видеша мужие Израилевы, яко не могоша противу стати, и скрышася людие в вертепех и в оградех и в камениих и в пропастех и во рвах:
7 ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.
и преходяще преидоша Иордан в землю Гадову и Галаадску. И Саул бяше еще в Галгалех, и вси людие ужасошася, иже бяху с ним.
8 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
И ждаше седмь дний по свидетелству, якоже рече Самуил, и не прииде Самуил в Галгалы: и разсеяшася людие его от него.
9 ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.
И рече Саул: приведите, яко да сотворю всесожжение и мирная. И вознесе всесожжение.
10 ೧೦ ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು
И бысть егда соверши вознося всесожжение, и се, Самуил прииде: и Саул изыде на сретение ему благословитися им.
11 ೧೧ ಸಮುವೇಲನು ಅವನನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು.
И рече Самуил: что сотворил еси? И рече Саул: видех, яко отидоша людие от мене, и ты не пришел еси, якоже определил еси свидетелством дний, иноплеменницы же собрашася в Махмас,
12 ೧೨ ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.
и рех: ныне приидут иноплеменницы ко мне в Галгалы, и лица Господня не умолих: и не удержахся, и вознесох всесожжение.
13 ೧೩ ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.
И рече Самуил к Саулу: безумие бысть тебе, понеже не сохранил еси заповеди моея, юже заповеда ти Господь: яко ныне уготовал бы Господь царство твое во Израили до века:
14 ೧೪ ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
и ныне царство твое не станет тебе, и изыщет Господь Себе человека по сердцу Своему, и повелит ему Господь властелину быти над людьми Своими, яко не сохранил еси, елика заповеда тебе Господь.
15 ೧೫ ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು.
И воста Самуил и иде от Галгал в путь свой: и останок людий идоша вслед Саула на сретение людем ратным. Имже приходящым от Галгал в Гаваю Вениаминову, и сочте Саул люди обретшыяся с ним яко шесть сот мужей.
16 ೧೬ ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.
Саул же и Ионафан сын его и людие обретшиися с ними седоша в Гаваи Вениаминове и плакашася: иноплеменницы же ополчишася в Махмасе.
17 ೧೭ ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‌ ನಾಡಿಗೂ,
И изыдоша губящии от села иноплеменников тремя началы: начало едино зрящее путь Гофера на землю Совалю:
18 ೧೮ ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.
и начало едино зрящее путь Вефоронь: и начало едино зрящее путь Гаваи, клонящийся к Гаисавим пустыни.
19 ೧೯ ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
И ковачь железа не обреташеся во всей земли Израилеве, яко реша иноплеменницы, да не сотворят Еврее меча и копия.
20 ೨೦ ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.
И хождаху вси сынове Израилевы в землю иноплеменничу ковати кийждо своя косы и орудия своя, и кийждо секиры своя и серпы своя.
21 ೨೧ ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು.
И притупишася вся орудия приспевшей жатве, секиры и серпы, поправления же има не бысть.
22 ೨೨ ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.
И бысть во дни брани Махмасския, и не обретеся меча и копия в руках всех людий, иже с Саулом и со Ионафаном: точию у Саула и Ионафана сына его.
23 ೨೩ ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.
И изыдоша от стана иноплеменнича об ону страну Махмаса.

< ಸಮುವೇಲನು - ಪ್ರಥಮ ಭಾಗ 13 >