< ಸಮುವೇಲನು - ಪ್ರಥಮ ಭಾಗ 15 >

1 ಸಮುವೇಲನು ಸೌಲನಿಗೆ, “ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವುದನ್ನು ಕೇಳು.
וַיֹּאמֶר שְׁמוּאֵל אֶל־שָׁאוּל אֹתִי שָׁלַח יְהוָה לִמְשָׁחֳךָ לְמֶלֶךְ עַל־עַמּוֹ עַל־יִשְׂרָאֵל וְעַתָּה שְׁמַע לְקוֹל דִּבְרֵי יְהוָֽה׃
2 ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.
כֹּה אָמַר יְהוָה צְבָאוֹת פָּקַדְתִּי אֵת אֲשֶׁר־עָשָׂה עֲמָלֵק לְיִשְׂרָאֵל אֲשֶׁר־שָׂם לוֹ בַּדֶּרֶךְ בַּעֲלֹתוֹ מִמִּצְרָֽיִם׃
3 ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.
עַתָּה לֵךְ וְהִכִּֽיתָה אֶת־עֲמָלֵק וְהַֽחֲרַמְתֶּם אֶת־כָּל־אֲשֶׁר־לוֹ וְלֹא תַחְמֹל עָלָיו וְהֵמַתָּה מֵאִישׁ עַד־אִשָּׁה מֵֽעֹלֵל וְעַד־יוֹנֵק מִשּׁוֹר וְעַד־שֶׂה מִגָּמָל וְעַד־חֲמֽוֹר׃
4 ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಜನರು ಇದ್ದರು.
וַיְשַׁמַּע שָׁאוּל אֶת־הָעָם וַֽיִּפְקְדֵם בַּטְּלָאִים מָאתַיִם אֶלֶף רַגְלִי וַעֲשֶׂרֶת אֲלָפִים אֶת־אִישׁ יְהוּדָֽה׃
5 ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.
וַיָּבֹא שָׁאוּל עַד־עִיר עֲמָלֵק וַיָּרֶב בַּנָּֽחַל׃
6 ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.
וַיֹּאמֶר שָׁאוּל אֶֽל־הַקֵּינִי לְכוּ סֻּרוּ רְדוּ מִתּוֹךְ עֲמָלֵקִי פֶּן־אֹֽסִפְךָ עִמּוֹ וְאַתָּה עָשִׂיתָה חֶסֶד עִם־כָּל־בְּנֵי יִשְׂרָאֵל בַּעֲלוֹתָם מִמִּצְרָיִם וַיָּסַר קֵינִי מִתּוֹךְ עֲמָלֵֽק׃
7 ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.
וַיַּךְ שָׁאוּל אֶת־עֲמָלֵק מֵֽחֲוִילָה בּוֹאֲךָ שׁוּר אֲשֶׁר עַל־פְּנֵי מִצְרָֽיִם׃
8 ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.
וַיִּתְפֹּשׂ אֶת־אֲגַג מֶֽלֶךְ־עֲמָלֵק חָי וְאֶת־כָּל־הָעָם הֶחֱרִים לְפִי־חָֽרֶב׃
9 ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.
וַיַּחְמֹל שָׁאוּל וְהָעָם עַל־אֲגָג וְעַל־מֵיטַב הַצֹּאן וְהַבָּקָר וְהַמִּשְׁנִים וְעַל־הַכָּרִים וְעַל־כָּל־הַטּוֹב וְלֹא אָבוּ הַחֲרִימָם וְכָל־הַמְּלָאכָה נְמִבְזָה וְנָמֵס אֹתָהּ הֶחֱרִֽימוּ׃
10 ೧೦ ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು.
וַֽיְהִי דְּבַר־יְהוָה אֶל־שְׁמוּאֵל לֵאמֹֽר׃
11 ೧೧ ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.
נִחַמְתִּי כִּֽי־הִמְלַכְתִּי אֶת־שָׁאוּל לְמֶלֶךְ כִּֽי־שָׁב מֵאַֽחֲרַי וְאֶת־דְּבָרַי לֹא הֵקִים וַיִּחַר לִשְׁמוּאֵל וַיִּזְעַק אֶל־יְהוָה כָּל־הַלָּֽיְלָה׃
12 ೧೨ ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ
וַיַּשְׁכֵּם שְׁמוּאֵל לִקְרַאת שָׁאוּל בַּבֹּקֶר וַיֻּגַּד לִשְׁמוּאֵל לֵאמֹר בָּֽא־שָׁאוּל הַכַּרְמֶלָה וְהִנֵּה מַצִּיב לוֹ יָד וַיִּסֹּב וַֽיַּעֲבֹר וַיֵּרֶד הַגִּלְגָּֽל׃
13 ೧೩ ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.
וַיָּבֹא שְׁמוּאֵל אֶל־שָׁאוּל וַיֹּאמֶר לוֹ שָׁאוּל בָּרוּךְ אַתָּה לַֽיהוָה הֲקִימֹתִי אֶת־דְּבַר יְהוָֽה׃
14 ೧೪ ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ” ಎನ್ನಲು
וַיֹּאמֶר שְׁמוּאֵל וּמֶה קֽוֹל־הַצֹּאן הַזֶּה בְּאָזְנָי וְקוֹל הַבָּקָר אֲשֶׁר אָנֹכִי שֹׁמֵֽעַ׃
15 ೧೫ ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.
וַיֹּאמֶר שָׁאוּל מֵעֲמָלֵקִי הֱבִיאוּם אֲשֶׁר חָמַל הָעָם עַל־מֵיטַב הַצֹּאן וְהַבָּקָר לְמַעַן זְבֹחַ לַיהוָה אֱלֹהֶיךָ וְאֶת־הַיּוֹתֵר הֶחֱרַֽמְנוּ׃
16 ೧೬ ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು.
וַיֹּאמֶר שְׁמוּאֵל אֶל־שָׁאוּל הֶרֶף וְאַגִּידָה לְּךָ אֵת אֲשֶׁר דִּבֶּר יְהוָה אֵלַי הַלָּיְלָה ויאמרו וַיֹּאמֶר לוֹ דַּבֵּֽר׃
17 ೧೭ ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.
וַיֹּאמֶר שְׁמוּאֵל הֲלוֹא אִם־קָטֹן אַתָּה בְּעֵינֶיךָ רֹאשׁ שִׁבְטֵי יִשְׂרָאֵל אָתָּה וַיִּמְשָׁחֲךָ יְהוָה לְמֶלֶךְ עַל־יִשְׂרָאֵֽל׃
18 ೧೮ ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು.
וַיִּשְׁלָחֲךָ יְהוָה בְּדָרֶךְ וַיֹּאמֶר לֵךְ וְהַחֲרַמְתָּה אֶת־הַֽחַטָּאִים אֶת־עֲמָלֵק וְנִלְחַמְתָּ בוֹ עַד כַּלּוֹתָם אֹתָֽם׃
19 ೧೯ ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.
וְלָמָּה לֹא־שָׁמַעְתָּ בְּקוֹל יְהוָה וַתַּעַט אֶל־הַשָּׁלָל וַתַּעַשׂ הָרַע בְּעֵינֵי יְהוָֽה׃
20 ೨೦ ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.
וַיֹּאמֶר שָׁאוּל אֶל־שְׁמוּאֵל אֲשֶׁר שָׁמַעְתִּי בְּקוֹל יְהוָה וָאֵלֵךְ בַּדֶּרֶךְ אֲשֶׁר־שְׁלָחַנִי יְהוָה וָאָבִיא אֶת־אֲגַג מֶלֶךְ עֲמָלֵק וְאֶת־עֲמָלֵק הֶחֱרַֽמְתִּי׃
21 ೨೧ ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು.
וַיִּקַּח הָעָם מֵהַשָּׁלָל צֹאן וּבָקָר רֵאשִׁית הַחֵרֶם לִזְבֹּחַ לַֽיהוָה אֱלֹהֶיךָ בַּגִּלְגָּֽל׃
22 ೨೨ ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.
וַיֹּאמֶר שְׁמוּאֵל הַחֵפֶץ לַֽיהוָה בְּעֹלוֹת וּזְבָחִים כִּשְׁמֹעַ בְּקוֹל יְהוָה הִנֵּה שְׁמֹעַ מִזֶּבַח טוֹב לְהַקְשִׁיב מֵחֵלֶב אֵילֽ͏ִים׃
23 ೨೩ ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
כִּי חַטַּאת־קֶסֶם מֶרִי וְאָוֶן וּתְרָפִים הַפְצַר יַעַן מָאַסְתָּ אֶת־דְּבַר יְהוָה וַיִּמְאָסְךָ מִמֶּֽלֶךְ׃
24 ೨೪ ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
וַיֹּאמֶר שָׁאוּל אֶל־שְׁמוּאֵל חָטָאתִי כִּֽי־עָבַרְתִּי אֶת־פִּֽי־יְהוָה וְאֶת־דְּבָרֶיךָ כִּי יָרֵאתִי אֶת־הָעָם וָאֶשְׁמַע בְּקוֹלָֽם׃
25 ೨೫ ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಅವನನ್ನು ಬೇಡಿಕೊಂಡನು.
וְעַתָּה שָׂא נָא אֶת־חַטָּאתִי וְשׁוּב עִמִּי וְאֶֽשְׁתַּחֲוֶה לַֽיהוָֽה׃
26 ೨೬ ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು
וַיֹּאמֶר שְׁמוּאֵל אֶל־שָׁאוּל לֹא אָשׁוּב עִמָּךְ כִּי מָאַסְתָּה אֶת־דְּבַר יְהוָה וַיִּמְאָסְךָ יְהוָה מִהְיוֹת מֶלֶךְ עַל־יִשְׂרָאֵֽל׃
27 ೨೭ ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.
וַיִּסֹּב שְׁמוּאֵל לָלֶכֶת וַיַּחֲזֵק בִּכְנַף־מְעִילוֹ וַיִּקָּרַֽע׃
28 ೨೮ ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.
וַיֹּאמֶר אֵלָיו שְׁמוּאֵל קָרַע יְהוָה אֶֽת־מַמְלְכוּת יִשְׂרָאֵל מֵעָלֶיךָ הַיּוֹם וּנְתָנָהּ לְרֵעֲךָ הַטּוֹב מִמֶּֽךָּ׃
29 ೨೯ ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.
וְגַם נֵצַח יִשְׂרָאֵל לֹא יְשַׁקֵּר וְלֹא יִנָּחֵם כִּי לֹא אָדָם הוּא לְהִנָּחֵֽם׃
30 ೩೦ ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.
וַיֹּאמֶר חָטָאתִי עַתָּה כַּבְּדֵנִי נָא נֶגֶד זִקְנֵֽי־עַמִּי וְנֶגֶד יִשְׂרָאֵל וְשׁוּב עִמִּי וְהִֽשְׁתַּחֲוֵיתִי לַֽיהוָה אֱלֹהֶֽיךָ׃
31 ೩೧ ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು. ಆಗ ಸೌಲನು ದೇವರನ್ನು ಆರಾಧಿಸಿದನು.
וַיָּשָׁב שְׁמוּאֵל אַחֲרֵי שָׁאוּל וַיִּשְׁתַּחוּ שָׁאוּל לַֽיהוָֽה׃
32 ೩೨ ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.
וַיֹּאמֶר שְׁמוּאֵל הַגִּישׁוּ אֵלַי אֶת־אֲגַג מֶלֶךְ עֲמָלֵק וַיֵּלֶךְ אֵלָיו אֲגַג מַעֲדַנֹּת וַיֹּאמֶר אֲגָג אָכֵן סָר מַר־הַמָּֽוֶת׃
33 ೩೩ ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.
וַיֹּאמֶר שְׁמוּאֵל כַּאֲשֶׁר שִׁכְּלָה נָשִׁים חַרְבֶּךָ כֵּן־תִּשְׁכַּל מִנָּשִׁים אִמֶּךָ וַיְשַׁסֵּף שְׁמוּאֵל אֶת־אֲגָג לִפְנֵי יְהוָה בַּגִּלְגָּֽל׃
34 ೩೪ ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.
וַיֵּלֶךְ שְׁמוּאֵל הָרָמָתָה וְשָׁאוּל עָלָה אֶל־בֵּיתוֹ גִּבְעַת שָׁאֽוּל׃
35 ೩೫ ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.
וְלֹא־יָסַף שְׁמוּאֵל לִרְאוֹת אֶת־שָׁאוּל עַד־יוֹם מוֹתוֹ כִּֽי־הִתְאַבֵּל שְׁמוּאֵל אֶל־שָׁאוּל וַיהוָה נִחָם כִּֽי־הִמְלִיךְ אֶת־שָׁאוּל עַל־יִשְׂרָאֵֽל׃

< ಸಮುವೇಲನು - ಪ್ರಥಮ ಭಾಗ 15 >