< ಸಮುವೇಲನು - ಪ್ರಥಮ ಭಾಗ 18 >

1 ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.
וַיְהִ֗י כְּכַלֹּתוֹ֙ לְדַבֵּ֣ר אֶל־שָׁא֔וּל וְנֶ֙פֶשׁ֙ יְה֣וֹנָתָ֔ן נִקְשְׁרָ֖ה בְּנֶ֣פֶשׁ דָּוִ֑ד ויאהבו יְהוֹנָתָ֖ן כְּנַפְשֽׁוֹ׃
2 ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು.
וַיִּקָּחֵ֥הוּ שָׁא֖וּל בַּיּ֣וֹם הַה֑וּא וְלֹ֣א נְתָנ֔וֹ לָשׁ֖וּב בֵּ֥ית אָבִֽיו׃
3 ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.
וַיִּכְרֹ֧ת יְהוֹנָתָ֛ן וְדָוִ֖ד בְּרִ֑ית בְּאַהֲבָת֥וֹ אֹת֖וֹ כְּנַפְשֽׁוֹ׃
4 ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.
וַיִּתְפַּשֵּׁ֣ט יְהוֹנָתָ֗ן אֶֽת־הַמְּעִיל֙ אֲשֶׁ֣ר עָלָ֔יו וַֽיִּתְּנֵ֖הוּ לְדָוִ֑ד וּמַדָּ֕יו וְעַד־חַרְבּ֥וֹ וְעַד־קַשְׁתּ֖וֹ וְעַד־חֲגֹרֽוֹ׃
5 ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.
וַיֵּצֵ֨א דָוִ֜ד בְּכֹל֩ אֲשֶׁ֨ר יִשְׁלָחֶ֤נּוּ שָׁאוּל֙ יַשְׂכִּ֔יל וַיְשִׂמֵ֣הוּ שָׁא֔וּל עַ֖ל אַנְשֵׁ֣י הַמִּלְחָמָ֑ה וַיִּיטַב֙ בְּעֵינֵ֣י כָל־הָעָ֔ם וְגַ֕ם בְּעֵינֵ֖י עַבְדֵ֥י שָׁאֽוּל׃ פ
6 ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.
וַיְהִ֣י בְּבוֹאָ֗ם בְּשׁ֤וּב דָּוִד֙ מֵהַכּ֣וֹת אֶת־הַפְּלִשְׁתִּ֔י וַתֵּצֶ֨אנָה הַנָּשִׁ֜ים מִכָּל־עָרֵ֤י יִשְׂרָאֵל֙ לשור וְהַמְּחֹל֔וֹת לִקְרַ֖את שָׁא֣וּל הַמֶּ֑לֶךְ בְּתֻפִּ֥ים בְּשִׂמְחָ֖ה וּבְשָׁלִשִֽׁים׃
7 ಅವರು ಹಾಡುತ್ತಾ, ಕೊಂಡಾಡುತ್ತಾ, “ಸೌಲನು ಸಾವಿರ ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದರು.
וַֽתַּעֲנֶ֛ינָה הַנָּשִׁ֥ים הַֽמְשַׂחֲק֖וֹת וַתֹּאמַ֑רְןָ הִכָּ֤ה שָׁאוּל֙ באלפו וְדָוִ֖ד בְּרִבְבֹתָֽיו׃
8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು
וַיִּ֨חַר לְשָׁא֜וּל מְאֹ֗ד וַיֵּ֤רַע בְּעֵינָיו֙ הַדָּבָ֣ר הַזֶּ֔ה וַיֹּ֗אמֶר נָתְנ֤וּ לְדָוִד֙ רְבָב֔וֹת וְלִ֥י נָתְנ֖וּ הָאֲלָפִ֑ים וְע֥וֹד ל֖וֹ אַ֥ךְ הַמְּלוּכָֽה׃
9 ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು.
וַיְהִ֥י שָׁא֖וּל עון אֶת־דָּוִ֑ד מֵהַיּ֥וֹם הַה֖וּא וָהָֽלְאָה׃ ס
10 ೧೦ ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.
וַיְהִ֣י מִֽמָּחֳרָ֗ת וַתִּצְלַ֣ח רוּחַ֩ אֱלֹהִ֨ים ׀ רָעָ֤ה ׀ אֶל־שָׁאוּל֙ וַיִּתְנַבֵּ֣א בְתוֹךְ־הַבַּ֔יִת וְדָוִ֛ד מְנַגֵּ֥ן בְּיָד֖וֹ כְּי֣וֹם ׀ בְּי֑וֹם וְהַחֲנִ֖ית בְּיַד־שָׁאֽוּל׃
11 ೧೧ ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.
וַיָּ֤טֶל שָׁאוּל֙ אֶֽת־הַחֲנִ֔ית וַיֹּ֕אמֶר אַכֶּ֥ה בְדָוִ֖ד וּבַקִּ֑יר וַיִּסֹּ֥ב דָּוִ֛ד מִפָּנָ֖יו פַּעֲמָֽיִם׃
12 ೧೨ ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,
וַיִּרָ֥א שָׁא֖וּל מִלִּפְנֵ֣י דָוִ֑ד כִּֽי־הָיָ֤ה יְהוָה֙ עִמּ֔וֹ וּמֵעִ֥ם שָׁא֖וּל סָֽר׃
13 ೧೩ ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.
וַיְסִרֵ֤הוּ שָׁאוּל֙ מֵֽעִמּ֔וֹ וַיְשִׂמֵ֥הוּ ל֖וֹ שַׂר־אָ֑לֶף וַיֵּצֵ֥א וַיָּבֹ֖א לִפְנֵ֥י הָעָֽם׃ פ
14 ೧೪ ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.
וַיְהִ֥י דָוִ֛ד לְכָל־דָּרְכָ֖ו מַשְׂכִּ֑יל וַֽיהוָ֖ה עִמּֽוֹ׃
15 ೧೫ ಇದನ್ನು ನೋಡಿ ಸೌಲನು ದಾವೀದನಿಗೆ ಬಹಳವಾಗಿ ಹೆದರಿಕೊಂಡನು.
וַיַּ֣רְא שָׁא֔וּל אֲשֶׁר־ה֖וּא מַשְׂכִּ֣יל מְאֹ֑ד וַיָּ֖גָר מִפָּנָֽיו׃
16 ೧೬ ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.
וְכָל־יִשְׂרָאֵל֙ וִיהוּדָ֔ה אֹהֵ֖ב אֶת־דָּוִ֑ד כִּֽי־ה֛וּא יוֹצֵ֥א וָבָ֖א לִפְנֵיהֶֽם׃ פ
17 ೧೭ ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.
וַיֹּ֨אמֶר שָׁא֜וּל אֶל־דָּוִ֗ד הִנֵּה֩ בִתִּ֨י הַגְּדוֹלָ֤ה מֵרַב֙ אֹתָהּ֙ אֶתֶּן־לְךָ֣ לְאִשָּׁ֔ה אַ֚ךְ הֱיֵה־לִּ֣י לְבֶן־חַ֔יִל וְהִלָּחֵ֖ם מִלְחֲמ֣וֹת יְהוָ֑ה וְשָׁא֣וּל אָמַ֗ר אַל־תְּהִ֤י יָדִי֙ בּ֔וֹ וּתְהִי־ב֖וֹ יַד־פְּלִשְׁתִּֽים׃ ס
18 ೧೮ ಅದಕ್ಕೆ ದಾವೀದನು “ಅರಸನ ಅಳಿಯನಾಗುವುದಕ್ಕೆ ನಾನು ಎಷ್ಟರವನು? ಇಸ್ರಾಯೇಲರಲ್ಲಿ ನನ್ನ ತಂದೆಯ ಕುಟುಂಬವೂ ಸಮಾನವೇ?” ಎಂದನು.
וַיֹּ֨אמֶר דָּוִ֜ד אֶל־שָׁא֗וּל מִ֤י אָֽנֹכִי֙ וּמִ֣י חַיַּ֔י מִשְׁפַּ֥חַת אָבִ֖י בְּיִשְׂרָאֵ֑ל כִּֽי־אֶהְיֶ֥ה חָתָ֖ן לַמֶּֽלֶךְ׃
19 ೧೯ ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು.
וַיְהִ֗י בְּעֵ֥ת תֵּ֛ת אֶת־מֵרַ֥ב בַּת־שָׁא֖וּל לְדָוִ֑ד וְהִ֧יא נִתְּנָ֛ה לְעַדְרִיאֵ֥ל הַמְּחֹלָתִ֖י לְאִשָּֽׁה׃
20 ೨೦ ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.
וַתֶּאֱהַ֛ב מִיכַ֥ל בַּת־שָׁא֖וּל אֶת־דָּוִ֑ד וַיַּגִּ֣דוּ לְשָׁא֔וּל וַיִּשַׁ֥ר הַדָּבָ֖ר בְּעֵינָֽיו׃
21 ೨೧ ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.
וַיֹּ֨אמֶר שָׁא֜וּל אֶתְּנֶ֤נָּה לּוֹ֙ וּתְהִי־ל֣וֹ לְמוֹקֵ֔שׁ וּתְהִי־ב֖וֹ יַד־פְּלִשְׁתִּ֑ים וַיֹּ֤אמֶר שָׁאוּל֙ אֶל־דָּוִ֔ד בִּשְׁתַּ֛יִם תִּתְחַתֵּ֥ן בִּ֖י הַיּֽוֹם׃
22 ೨೨ ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು.
וַיְצַ֨ו שָׁא֜וּל אֶת־עֲבָדָ֗ו דַּבְּר֨וּ אֶל־דָּוִ֤ד בַּלָּט֙ לֵאמֹ֔ר הִנֵּ֨ה חָפֵ֤ץ בְּךָ֙ הַמֶּ֔לֶךְ וְכָל־עֲבָדָ֖יו אֲהֵב֑וּךָ וְעַתָּ֖ה הִתְחַתֵּ֥ן בַּמֶּֽלֶךְ׃
23 ೨೩ ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, “ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೆನಲ್ಲಾ” ಎಂದು ಉತ್ತರ ಕೊಟ್ಟನು.
וַֽיְדַבְּר֞וּ עַבְדֵ֤י שָׁאוּל֙ בְּאָזְנֵ֣י דָוִ֔ד אֶת־הַדְּבָרִ֖ים הָאֵ֑לֶּה וַיֹּ֣אמֶר דָּוִ֗ד הַֽנְקַלָּ֤ה בְעֵֽינֵיכֶם֙ הִתְחַתֵּ֣ן בַּמֶּ֔לֶךְ וְאָנֹכִ֖י אִֽישׁ־רָ֥שׁ וְנִקְלֶֽה׃
24 ೨೪ ಸೇವಕರು ದಾವೀದನ ಮಾತುಗಳನ್ನು ಸೌಲನಿಗೆ ತಿಳಿಸಿದರು.
וַיַּגִּ֜דוּ עַבְדֵ֥י שָׁא֛וּל ל֖וֹ לֵאמֹ֑ר כַּדְּבָרִ֥ים הָאֵ֖לֶּה דִּבֶּ֥ר דָּוִֽד׃ פ
25 ೨೫ ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.
וַיֹּ֨אמֶר שָׁא֜וּל כֹּֽה־תֹאמְר֣וּ לְדָוִ֗ד אֵֽין־חֵ֤פֶץ לַמֶּ֙לֶךְ֙ בְּמֹ֔הַר כִּ֗י בְּמֵאָה֙ עָרְל֣וֹת פְּלִשְׁתִּ֔ים לְהִנָּקֵ֖ם בְּאֹיְבֵ֣י הַמֶּ֑לֶךְ וְשָׁא֣וּל חָשַׁ֔ב לְהַפִּ֥יל אֶת־דָּוִ֖ד בְּיַד־פְּלִשְׁתִּֽים׃
26 ೨೬ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ,
וַיַּגִּ֨דוּ עֲבָדָ֤יו לְדָוִד֙ אֶת־הַדְּבָרִ֣ים הָאֵ֔לֶּה וַיִּשַׁ֤ר הַדָּבָר֙ בְּעֵינֵ֣י דָוִ֔ד לְהִתְחַתֵּ֖ן בַּמֶּ֑לֶךְ וְלֹ֥א מָלְא֖וּ הַיָּמִֽים׃
27 ೨೭ ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.
וַיָּ֨קָם דָּוִ֜ד וַיֵּ֣לֶךְ ׀ ה֣וּא וַאֲנָשָׁ֗יו וַיַּ֣ךְ בַּפְּלִשְׁתִּים֮ מָאתַ֣יִם אִישׁ֒ וַיָּבֵ֤א דָוִד֙ אֶת־עָרְלֹ֣תֵיהֶ֔ם וַיְמַלְא֣וּם לַמֶּ֔לֶךְ לְהִתְחַתֵּ֖ן בַּמֶּ֑לֶךְ וַיִּתֶּן־ל֥וֹ שָׁא֛וּל אֶת־מִיכַ֥ל בִּתּ֖וֹ לְאִשָּֽׁה׃ ס
28 ೨೮ ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,
וַיַּ֤רְא שָׁאוּל֙ וַיֵּ֔דַע כִּ֥י יְהוָ֖ה עִם־דָּוִ֑ד וּמִיכַ֥ל בַּת־שָׁא֖וּל אֲהֵבַֽתְהוּ׃
29 ೨೯ ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.
וַיֹּ֣אסֶף שָׁא֗וּל לֵרֹ֛א מִפְּנֵ֥י דָוִ֖ד ע֑וֹד וַיְהִ֥י שָׁא֛וּל אֹיֵ֥ב אֶת־דָּוִ֖ד כָּל־הַיָּמִֽים׃ ס
30 ೩೦ ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು.
וַיֵּצְא֖וּ שָׂרֵ֣י פְלִשְׁתִּ֑ים וַיְהִ֣י ׀ מִדֵּ֣י צֵאתָ֗ם שָׂכַ֤ל דָּוִד֙ מִכֹּל֙ עַבְדֵ֣י שָׁא֔וּל וַיִּיקַ֥ר שְׁמ֖וֹ מְאֹֽד׃ ס

< ಸಮುವೇಲನು - ಪ್ರಥಮ ಭಾಗ 18 >