< ಸಮುವೇಲನು - ಪ್ರಥಮ ಭಾಗ 23 >

1 ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆ ಎಂಬ ವರ್ತಮಾನವು ದಾವೀದನಿಗೆ ಮುಟ್ಟಲು
و به داود خبر داده، گفتند: «اینک فلسطینیان با قعیله جنگ می‌کنند وخرمنها را غارت می‌نماید.»۱
2 ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.
و داود از خداوندسوال کرده، گفت: «آیا بروم و این فلسطینیان راشکست دهم.» خداوند به داود گفت: «برو وفلسطینیان را شکست داده، قعیله را خلاص کن.»۲
3 ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಾಗ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕೆ ಕೆಯೀಲಕ್ಕೆ ಹೋದರೆ ಅಲ್ಲಿ ಇನ್ನೂ ಹೆಚ್ಚು ಭಯ ಉಂಟಾಗುತ್ತದೆ” ಅಂದರು.
و مردمان داود وی را گفتند: «اینک اینجا دریهودا می‌ترسیم پس چند مرتبه زیاده اگر به مقابله لشکرهای فلسطینیان به قعیله برویم.»۳
4 ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
و داود بار دیگر از خداوند سوال نمود وخداوند او را جواب داده، گفت: «برخیز به قعیله برو زیرا که من فلسطینیان را به‌دست تو خواهم داد.»۴
5 ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.
و داود با مردانش به قعیله رفتند و بافلسطینیان جنگ کرده، مواشی ایشان را بردند، وایشان را به کشتار عظیمی کشتند. پس داودساکنان قعیله را نجات داد.۵
6 ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,
و هنگامی که ابیاتار بن اخیملک نزد داود به قعیله فرار کرد، ایفود را در دست خود آورد.۶
7 ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,
وبه شاول خبر دادند که داود به قعیله آمده است وشاول گفت: «خدا او را به‌دست من سپرده است، زیرا به شهری که دروازه‌ها و پشت بندها داردداخل شده، محبوس گشته است.»۷
8 ಕೆಯೀಲದಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹಿಡಿಯಲು ಹೋಗುವುದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.
و شاول جمیع قوم را برای جنگ طلبید تا به قعیله فرودشده، داود و مردانش را محاصره نماید.۸
9 ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.
و چون داود دانست که شاول شرارت رابرای او اندیشیده است، به ابیاتار کاهن گفت: «ایفود را نزدیک بیاور،۹
10 ೧೦ ಆಗ ದಾವೀದನು, “ಇಸ್ರಾಯೇಲ್ಯರ ದೇವರಾದ ಯೆಹೋವನೇ ಸೌಲನು ಕೆಯೀಲಕ್ಕೆ ಬಂದು ನನ್ನ ನಿಮಿತ್ತವಾಗಿ ಪಟ್ಟಣವನ್ನು ಹಾಳು ಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು.
و داود گفت: «ای یهوه، خدای اسرائیل، بنده ات شنیده است که شاول عزیمت دارد که به قعیله بیاید تا به‌خاطر من شهررا خراب کند.۱۰
11 ೧೧ ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲರ ದೇವರಾದ ಯೆಹೋವನೇ ಈ ವಿಷಯದಲ್ಲಿ ಉತ್ತರ ದಯಪಾಲಿಸು” ಎಂದು ಪ್ರಾರ್ಥಿಸಲು ಅವನು ಬರುವನೆಂಬುದಾಗಿ ಯೆಹೋವನಿಂದ ಉತ್ತರ ಸಿಕ್ಕಿತು.
آیا اهل قعیله مرا به‌دست اوتسلیم خواهند نمود؟ و آیا شاول چنانکه بنده ات شنیده است، خواهد آمد؟ ای یهوه، خدای اسرائیل، مسالت آنکه بنده خود را خبر دهی.» خداوند گفت که او خواهد آمد.۱۱
12 ೧೨ ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು.
داود گفت: «آیا اهل قعیله مرا و کسان مرا به‌دست شاول تسلیم خواهند نمود؟» خداوند گفت که «تسلیم خواهند نمود.»۱۲
13 ೧೩ ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು.
پس داود و مردانش که تخمین ششصد نفربودند، برخاسته، از قعیله بیرون رفتند و هر جایی که توانستند بروند، رفتند. و چون به شاول خبردادند که داود از قعیله فرار کرده است، از بیرون رفتن بازایستاد.۱۳
14 ೧೪ ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.
و داود در بیابان در ملاذهانشست و در کوهی در بیابان زیف توقف نمود. وشاول همه روزه او را می‌طلبید لیکن خداوند او رابه‌دستش تسلیم ننمود.۱۴
15 ೧೫ ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.
و داود دید که شاول به قصد جان او بیرون آمده است و داود در بیابان زیف در جنگل ساکن بود.۱۵
16 ೧೬ ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,
و یوناتان، پسر شاول، به جنگل آمده، دست او را به خدا تقویت نمود.۱۶
17 ೧೭ ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.
و او را گفت: «مترس زیرا که دست پدر من، شاول تو را نخواهدجست، و تو بر اسرائیل پادشاه خواهی شد، و من دومین تو خواهم بود و پدرم شاول نیز این رامی داند.»۱۷
18 ೧೮ ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.
و هر دوی ایشان به حضور خداوندعهد بستند و داود به جنگل برگشت و یوناتان به خانه خود رفت.۱۸
19 ೧೯ ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.
و زیفیان نزد شاول به جبعه آمده، گفتند: «آیا داود در ملاذهای جنگل در کوه حخیله که به طرف جنوب بیابان است، خود را نزد ما پنهان نکرده است؟۱۹
20 ೨೦ ಅರಸನು ತನ್ನ ಇಚ್ಛೆಯಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ. ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು” ಎಂದು ಹೇಳಿದರು.
پس‌ای پادشاه چنانکه دلت کمال آرزو برای آمدن دارد بیا و تکلیف ما این است که او را به‌دست پادشاه تسلیم نماییم.»۲۰
21 ೨೧ ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.
شاول گفت: «شما از جانب خداوند مبارک باشید چونکه بر من دلسوزی نمودید.۲۱
22 ೨೨ ನೀವು ದಯವಿಟ್ಟು ಹೋಗಿ ಅವನು ಅಡಗಿಕೊಂಡಿರುವ ಸ್ಥಳವನ್ನು, ಅಲ್ಲಿ ಅವನನ್ನು ಕಂಡವರನ್ನೂ ಸೂಕ್ಷ್ಮವಾಗಿ ವಿಚಾರಿಸಿ, ತಿಳಿದುಕೊಳ್ಳಿರಿ. ಅವನು ಬಹು ಯುಕ್ತಿವಂತನೆಂದು ಕೇಳಿದ್ದೇನೆ.
پس بروید و بیشتر تحقیق نموده، جایی را که آمد ورفت می‌کند ببینید و بفهمید، و دیگر اینکه کیست که او را در آنجا دیده است، زیرا به من گفته شد که بسیار با مکر رفتار می‌کند.۲۲
23 ೨೩ ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.
پس ببینید و جمیع مکانهای مخفی را که خود را در آنها پنهان می‌کندبدانید و حقیقت حال را به من باز رسانید تا با شمابیایم و اگر در این زمین باشد او را از جمیع هزاره های یهودا پیدا خواهم کرد.»۲۳
24 ೨೪ ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಅರಾಬ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು.
پس برخاسته، پیش روی شاول به زیف رفتند.۲۴
25 ೨೫ ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ತಲುಪಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.
و شاول و مردان اوبه تفحص او رفتند و چون داود را خبر دادند، اونزد صخره فرود آمده، در بیابان معون ساکن شد وشاول چون این را شنید، داود را در بیابان معون تعاقب نمود.۲۵
26 ೨೬ ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.
و شاول به یک طرف کوه می‌رفت و داود و کسانش به طرف دیگر کوه، و داودمی شتافت که از حضور شاول بگریزد و شاول ومردانش داود و کسانش را احاطه نمودند تا ایشان را بگیرند.۲۶
27 ೨೭ ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು.
اما قاصدی نزد شاول آمده، گفت: «بشتاب و بیا زیرا که فلسطینیان به زمین حمله آورده‌اند.۲۷
28 ೨೮ ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಆದುದರಿಂದ ಆ ಬೆಟ್ಟಕ್ಕೆ “ಮಕ್ಹೆಲೋಕೆತ್” ಎಂದರೆ “ಪಾರಾದ ಬಂಡೆ” ಎಂದು ಹೆಸರಾಯಿತು.
پس شاول از تعاقب نمودن داود برگشته، به مقابله فلسطینیان رفت، بنابراین آن مکان را صخره محلقوت نامیدند.۲۸
29 ೨೯ ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.
و داود ازآنجا برآمده، در ملاذهای عین جدی ساکن شد.۲۹

< ಸಮುವೇಲನು - ಪ್ರಥಮ ಭಾಗ 23 >