< ಸಮುವೇಲನು - ಪ್ರಥಮ ಭಾಗ 28 >

1 ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನಲು ದಾವೀದನು,
সেই দিনের পলেষ্টীয়রা ইস্রায়েলের সঙ্গে সংগ্রাম করার উদ্দেশ্যে যুদ্ধের জন্য নিজেদের সৈন্যদল সংগ্রহ করল। আর আখীশ দায়ূদকে বললেন, “নিশ্চয় জানবে, তোমাকে ও তোমার লোকদেরকে সৈন্যদলে যুক্ত করে আমার সঙ্গে যেতে হবে।”
2 “ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು.
দায়ূদ আখীশকে বললেন, “ভাল, আপনার এই দাস কি করতে পারে, তা আপনি জানতে পারেন।” আখীশ দায়ূদকে বললেন, “ভাল, আমি তোমাকে সারাজীবন মাথা রক্ষক হিসাবে নিযুক্ত করব।”
3 ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.
তখন শমূয়েল মারা গিয়েছিলেন এবং সমস্ত ইস্রায়েল তাঁর জন্য শোক করেছিল এবং রামায়, তাঁর নিজের নগরে, তাকে কবর দিয়েছিল। আর শৌল ভূতুড়ে ও গুণীদেরকে দেশ থেকে দূর করে দিয়েছিলেন।
4 ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.
পরে পলেষ্টীয়রা জড়ো হল এবং এসে শূনেমে শিবির স্থাপন করল, আর শৌল সমস্ত ইস্রায়েলকে জড়ো করে গিলবোয়ে শিবির স্থাপন করলেন।
5 ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.
কিন্তু শৌল পলেষ্টীয়দের সৈন্য দেখে ভয় পেলেন, তার খুব হৃদয় কেঁপে উঠল।
6 ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
তখন শৌল সদাপ্রভুর কাছে জিজ্ঞাসা করলেন, কিন্তু সদাপ্রভু তাকে উত্তর দিলেন না; স্বপ্ন দিয়েও না, ঊরীম দিয়েও না, ভাববাদীদের দিয়েও না।
7 ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.
তখন শৌল নিজের দাসদেরকে বললেন, “আমার জন্য একটি ভূতুড়ে স্ত্রীলোকের খোঁজ কর; আমি তার কাছে গিয়ে জিজ্ঞাসা করব।” তার দাসরা বলল, “দেখুন, ঐনদোরে একটি ভূতুড়ে স্ত্রী লোক আছে।”
8 ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು
তখন শৌল ছদ্মবেশ ধরলেন, অন্য বস্ত্র পরলেন ও দুই জন পুরুষকে সঙ্গে নিয়ে যাত্রা করলেন এবং রাতে সেই স্ত্রী লোকটার কাছে এসে বললেন, “অনুরোধ করি, তুমি আমার জন্য ভূতের দ্বারা মন্ত্র পড়ে, যার নাম আমি তোমাকে বলব, তাকে উঠিয়ে আন।”
9 ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು.
সেই স্ত্রী লোক তাকে বলল, “দেখ, শৌল যা করেছেন, তিনি যে ভূতুড়েদেরকে ও গুণীদেরকে দেশের মধ্যে থেকে উচ্ছিন্ন করেছেন, তা তুমি জানো; অতএব আমাকে হত্যা করতে আমার প্রাণের বিরুদ্ধে কেন ফাঁদ পাতছ?”
10 ೧೦ ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.
১০তখন শৌল তার কাছে সদাপ্রভুর দিব্যি করে বললেন, “জীবন্ত সদাপ্রভুর দিব্যি, এজন্য তোমার উপরে দোষ আসবে না।”
11 ೧೧ ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.
১১তখন সেই স্ত্রী লোক জিজ্ঞাসা করল, “আমি তোমার কাছে কাকে উঠিয়ে আনব?” তিনি বললেন, “শমূয়েলকে উঠিয়ে আন।”
12 ೧೨ ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು.
১২পরে সেই স্ত্রী লোক শমূয়েলকে দেখতে পেয়ে উচ্চস্বরে কাঁদতে লাগল; আর সেই স্ত্রী লোক শৌলকে বলল, “আপনি কেন আমাকে প্রতারণা করলেন? আপনি শৌল।”
13 ೧೩ ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಲು, “ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ” ಎಂದು ಉತ್ತರ ಕೊಟ್ಟಳು.
১৩রাজা তাকে বললেন, “ভয় নেই; তুমি কি দেখছ?” স্ত্রী লোকটা শৌলকে বলল, “আমি দেখছি, দেবতা ভূমি থেকে উঠে আসছেন।”
14 ೧೪ ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.
১৪শৌল জিজ্ঞাসা করলেন, “তার আকার কেমন?” সে বলল, “একজন বৃদ্ধ উঠছেন, তিনি পোশাকে আবৃত।” তাতে শৌল বুঝতে পারলেন, তিনি শমূয়েল, আর মাথা নত করে ভূমিতে নীচু হয়ে প্রার্থনা করলেন।
15 ೧೫ ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.
১৫পরে শমূয়েল শৌলকে বললেন, “কি জন্য আমাকে উঠিয়ে কষ্ট দিলে?” শৌল বললেন, “আমি মহা সঙ্কটে পড়েছি, পলেষ্টীয়রা আমার বিরুদ্ধে যুদ্ধ করছে, ঈশ্বরও আমাকে ত্যাগ করেছেন, আমাকে আর উত্তর দেন না, ভাববাদীদের মাধ্যমেও না, স্বপ্ন দিয়েও না। অতএব আমার যা কর্তব্য, তা আমাকে জানানোর জন্য আপনাকে ডাকলাম।”
16 ೧೬ ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?
১৬শমূয়েল বললেন, “যখন সদাপ্রভু তোমাকে ত্যাগ করে তোমার বিপক্ষ হয়েছেন, তখন আমাকে কেন জিজ্ঞাসা কর?
17 ೧೭ ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.
১৭সদাপ্রভু আমার মাধ্যমে যেমন বলেছেন, সেই রকম আপনার জন্য করলেন; ফলতঃ সদাপ্রভু তোমার হাত থেকে রাজ্য টেনে ছিঁড়েছেন ও তোমার প্রতিবাসী, দায়ূদকে দিয়েছেন।
18 ೧೮ ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.
১৮যেহেতু তুমি সদাপ্রভুর রবে কান দেওনি এবং অমালেকের প্রতি তার প্রচণ্ড রাগ সফল করনি, এই জন্য আজ সদাপ্রভু এইরকম করলেন।
19 ೧೯ ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು.
১৯আর সদাপ্রভু তোমার সঙ্গে ইস্রায়েলকেও পলেষ্টীয়দের হাতে সমর্পণ করবেন। কাল তোমার ও তোমার পুত্ররা আমার সঙ্গী হবে; আর সদাপ্রভু ইস্রায়েলের সৈন্যদলকেও পলেষ্টীয়দের হাতে সমর্পণ করবেন।”
20 ೨೦ ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.
২০শৌল তখনই ভূমিতে লম্বা হয়ে পড়লেন; শমূয়েলের কথায় তিনি খুব ভয় পেলেন এবং সমস্ত দিন-রাত অনাহারে থাকাতে তিনি শক্তিহীন হয়ে পড়েছিলেন।
21 ೨೧ ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.
২১পরে সেই স্ত্রী লোক শৌলের কাছে এসে তাকে খুবই চিন্তিত দেখে, বললেন, “দেখুন, আপনার দাসী আমি আপনার কথা রেখেছি, আপনি আমাকে যা বলেছিলেন, প্রাণ হাতে করে আপনার সেই কথা রেখেছি।
22 ೨೨ ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು.
২২অতএব অনুরোধ করি, এখন আপনিও এই দাসীর কথা রাখুন; আমি আপনার সামনে কিছু খাবার রাখি, আপনি ভোজন করুন, তা হলে পথে চলবার দিন শক্তি পাবেন।”
23 ೨೩ ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.
২৩কিন্তু তিনি অসম্মত হয়ে বললেন, “আমি ভোজন করব না,” তবুও তার দাসরা ও সেই স্ত্রী লোকটি আগ্রহ করে অনুরোধ করলে তিনি তাদের কথা শুনে ভূমি থেকে উঠে খাটে বসলেন।
24 ೨೪ ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.
২৪তখন সেই স্ত্রী লোকের গৃহে একটা মোটাসোটা গোবত্স ছিল, আর সে তাড়াতাড়ি সেটি মারল এবং সূজী নিয়ে ঠেসে তাড়ীশূন্য রুটি তৈরী করল।
25 ೨೫ ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.
২৫পরে শৌলের ও তার দাসদের সামনে তা আনল, আর তারা ভোজন করলেন; পরে সেই রাতে উঠে চলে গেলেন।

< ಸಮುವೇಲನು - ಪ್ರಥಮ ಭಾಗ 28 >