< ಸಮುವೇಲನು - ಪ್ರಥಮ ಭಾಗ 7 >

1 ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.
Los hombres de Quiriat Jearim vinieron y tomaron el arca de Yahvé, y la llevaron a la casa de Abinadab en la colina, y consagraron a Eleazar, su hijo, para que guardara el arca de Yahvé.
2 ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.
Desde el día en que el arca permaneció en Quiriat Jearim, el tiempo se prolongó, pues fueron veinte años; y toda la casa de Israel se lamentaba en pos de Yahvé.
3 ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.
Samuel habló a toda la casa de Israel, diciendo: “Si volvéis a Yahvé de todo corazón, quitad de en medio los dioses extranjeros y el Astarot, y dirigid vuestro corazón a Yahvé, y servidle sólo a él; y él os librará de la mano de los filisteos.”
4 ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು.
Entonces los hijos de Israel eliminaron a los baales y a Astarot, y sólo sirvieron a Yahvé.
5 ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.
Samuel dijo: “Reúnan a todo Israel en Mizpa, y yo oraré a Yahvé por ustedes.”
6 ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
Se reunieron en Mizpa, sacaron agua y la derramaron ante Yahvé, y ese día ayunaron y dijeron allí: “Hemos pecado contra Yahvé.” Samuel juzgó a los hijos de Israel en Mizpa.
7 ಇಸ್ರಾಯೇಲ್ಯರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆ ಎಂದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲರು ಬಹಳವಾಗಿ ಭಯಪಟ್ಟು ಸಮುವೇಲನಿಗೆ,
Cuando los filisteos oyeron que los hijos de Israel estaban reunidos en Mizpa, los señores de los filisteos subieron contra Israel. Cuando los hijos de Israel lo oyeron, tuvieron miedo de los filisteos.
8 “ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.
Los hijos de Israel dijeron a Samuel: “No dejes de clamar por nosotros a Yahvé, nuestro Dios, para que nos salve de la mano de los filisteos.”
9 ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.
Samuel tomó un cordero lechal y lo ofreció en holocausto a Yahvé. Samuel clamó a Yahvé por Israel, y Yahvé le respondió.
10 ೧೦ ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.
Mientras Samuel ofrecía el holocausto, los filisteos se acercaron para combatir contra Israel; pero aquel día Yahvé tronó con gran estruendo sobre los filisteos y los confundió, y fueron derribados ante Israel.
11 ೧೧ ಇಸ್ರಾಯೇಲ್ಯರಾದರೋ ಮಿಚ್ಪೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.
Los hombres de Israel salieron de Mizpa y persiguieron a los filisteos, y los golpearon hasta que llegaron debajo de Bet Kar.
12 ೧೨ ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.
Entonces Samuel tomó una piedra y la puso entre Mizpa y Shen, y la llamó Ebenezer, diciendo: “El Señor nos ha ayudado hasta ahora.”
13 ೧೩ ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.
Así los filisteos fueron sometidos y dejaron de entrar en la frontera de Israel. La mano de Yahvé estuvo contra los filisteos todos los días de Samuel.
14 ೧೪ ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.
Las ciudades que los filisteos habían arrebatado a Israel fueron devueltas a éste, desde Ecrón hasta Gat, e Israel recuperó su frontera de manos de los filisteos. Hubo paz entre Israel y los amorreos.
15 ೧೫ ಸಮುವೇಲನು ಜೀವದಿಂದ ಇರುವವರೆಗೆ ಇಸ್ರಾಯೇಲರಿಗೆ ನ್ಯಾಯತೀರಿಸುತ್ತಿದ್ದನು.
Samuel juzgó a Israel todos los días de su vida.
16 ೧೬ ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.
Iba de año en año en un circuito a Betel, Gilgal y Mizpa, y juzgaba a Israel en todos esos lugares.
17 ೧೭ ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.
Su regreso fue a Ramá, porque allí estaba su casa, y allí juzgó a Israel; y allí construyó un altar a Yahvé.

< ಸಮುವೇಲನು - ಪ್ರಥಮ ಭಾಗ 7 >