< ಸಮುವೇಲನು - ಪ್ರಥಮ ಭಾಗ 9 >

1 ಬೆನ್ಯಾಮೀನ್ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.
И бе муж от сынов Вениаминовых, емуже имя Кис, сын Авиилов, сына Иаредова, сына Вахирова, сына Афекова, сына мужа Иеминеова, муж силен крепостию.
2 ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.
И сему бе сын, имя ему Саул, добровеличен, муж благ: и не бе в сынех Израилевых благ паче его, от рамен и выше высок паче всех людий.
3 ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು.
И заблудиша ослята Киса отца Саулова. И рече Кис к Саулу сыну своему: возми с собою единаго от отрок, и воставше идите и поищите ослят.
4 ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.
И проидоша гору Ефремлю, и проидоша землю Селха, и не обретоша: и проидоша землю Сегалимлю, и не бе: и проидоша землю Иаминю, и не обретоша.
5 ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು
И пришедшым им в землю Сифову, и рече Саул ко отроку своему иже с ним: гряди и возвратимся, да не како отец мой оставя ослята, печется о нас.
6 ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು.
И рече ему отрок: се, зде человек Божий во граде сем, и человек славен: все еже аще речет приходящым к нему, будет им: и ныне пойдем тамо, да возвестит нам путь наш, имже пойдем.
7 ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು
И рече Саул отроку своему иже с ним: се, пойдем, и что принесем к человеку Божию? Яко хлебы оскудеша от вретищ наших, и ктому несть у нас, еже внести к человеку Божию от имения нашего.
8 ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು.
И приложи отрок отвещати Саулу и рече: се, обретается в руце моей четвертая часть сикля сребра, и даси человеку Божию, и возвестит нам путь наш.
9 (ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)
Прежде бо во Израили сице глаголаше кийждо, егда кто идяше вопрошати Бога: гряди, да идем к прозорливцу: яко пророка нарицаху людие прежде прозорливцем.
10 ೧೦ ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು.
И рече Саул отроку своему: добр глагол твой: гряди, да идем. И идоша во град, идеже бе человек Божий.
11 ೧೧ ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;
Восходящым же им на восход града, и се, обретоша девиц изшедших почерпсти воды, и реша им: есть ли зде прозорливец?
12 ೧೨ ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.
И отвещаша им девицы, глаголющя: есть, се пред лицем вашим: ныне же потщитеся, яко дне ради грядет во град, яко жертва днесь людем в ваме:
13 ೧೩ ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.
и егда внидете во град, тако обрящете его во граде, прежде неже взыти ему в ваму ясти: яко не имут ясти людие, дондеже внидет сей, яко той благословит жертву, и по сих ядят страннии: и ныне взыдите, яко дне ради обрящете его.
14 ೧೪ ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು.
И взыдоша во град. Имже входящым среди града, и се, Самуил изыде во сретение им, еже взыти в ваму.
15 ೧೫ ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ,
И Господь откры во ухо Самуилу днем единым прежде пришествия к нему Сауля, глаголя:
16 ೧೬ “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.
якоже время сие, утро послю к тебе мужа от племене Вениаминова, и да помажеши его царя над людьми Моими Израилем, и спасет люди Моя от руки иноплеменничи: яко призрех на смирение людий Моих, яко взыде вопль их ко Мне.
17 ೧೭ ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.
И виде Самуил Саула, и Господь рече к нему: се, человек, о немже рекох ти: сей будет в людех Моих царствовати.
18 ೧೮ ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?” ಎನ್ನಲು ಸಮುವೇಲನು, “ನಾನೇ ಆ ದರ್ಶಿ.
И приближися Саул к Самуилу посреде града и рече: возвести ми, который дом прозорливца.
19 ೧೯ ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.
И отвеща Самуил Саулу и рече: аз сам есмь: взыди предо мною в ваму, и яждь со мною днесь, и отпущу тя заутра, и вся яже в сердцы твоем возвещу ти:
20 ೨೦ ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.
и о ослятех твоих заблудивших днесь третий день, не помышляй в сердцы своем о них, ибо обретошася: и кому красная Израилева? Не тебе ли и дому отца твоего?
21 ೨೧ ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು.
И отвеща Саул и рече: не сын ли есмь аз мужа иеминеа, меншаго скиптра племене Израилева? И племене малейшаго от всего скиптра Вениаминова? И отечество мое меншее паче всех отечеств Вениаминовых? И вскую глаголал еси ко мне по глаголу сему?
22 ೨೨ ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,
И поят Самуил Саула и отрока его, и введе я во обиталище, и даде им тамо место в первых званых, яко в седмидесяти мужех.
23 ೨೩ “ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು” ಅಂದನು.
И рече Самуил повару: даждь ми часть, юже дах ти, и о нейже рех ти положити ю у себе.
24 ೨೪ ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.
И взя повар плече, и предложи е Саулови. И рече Самуил Саулу: се, избыток, предложи пред ся и яждь, яко во свидетелство предложися тебе паче иных, прикоснися. И яде Саул с Самуилом в той день.
25 ೨೫ ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.
И сниде от вамы во град, и постлаша Саулови на горнице, и спа.
26 ೨೬ ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ
И бысть егда приближашеся утро, и воззва Самуил Саула на горнице, и рече: востани, и отпущу тя. И воста Саул, и изыде сам и Самуил вон.
27 ೨೭ ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು.
Имже исходящым в часть града, и рече Самуил к Саулу: рцы юноши, да предидет пред нами: а ты стани якоже днесь, и слышан сотворю тебе глаголгол Божий.

< ಸಮುವೇಲನು - ಪ್ರಥಮ ಭಾಗ 9 >