< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 1 >

1 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.
Павел, Сила и Тимотей до солунската църква в Бога Отца и Господа Исуса Христа: Благодат и мир да бъде на вас.
2 ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
Всякота благодарим на Бога за всички ви и ви споменаваме в молитвите си,
3
като си спомняме непрестанно пред нашия Бог и Отец вашата работа с вяра и труд, с любов и твърда надежда в нашия Господ Исус Христос.
4 ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು.
Понеже знаем, възлюбени от Бога, братя, че Той ви е избрал;
5 ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.
защото нашето благовествуване между вас не беше само с думи, но и със сила, със Светия Дух и с голяма увереност; както и знаете, какви се показахме помежду си заради вас.
6 ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.
И вие станахте подражатели на нас и на Господа, като, зарад много скърби, приехте словото с радост, която е от Светия Дух;
7 ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.
така щото станахте пример на всички вярващи в Македония и в Аханя.
8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.
Защото не само се прогласи Господното слово от вас в Македония и Аханя, но се разчу навсякъде и вашата вяра в Бога, така щото ние нямаме нужда да казваме нещо за нея.
9 ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ
Защото сами те оповестяват за нас какъв достъп имахме при вас, и как сте се обърнали от идоли към Бога, за да служите на жив и истинен Бог.
10 ೧೦ ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
и да очаквате Неговия Син от небесата, същия Исус, Когото въскреси от мъртвите, Който ни избавя от идещия гняв.

< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 1 >