< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 3 >

1 ಆದುದರಿಂದ ನಾನು ಇನ್ನು ತಾಳಲಾರದೆ ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ,
Затова когато не можахме вече да търпим намерихме за добре да останем сами в Атина;
2 ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.
и изпратихме Тимотея нашия брат и Божий служител в Христовото благовестие, да ви, да ви утвърди и да ви утеши във вярата ви,
3 ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.
та да се не колебае никой от тия скърби; защото вие знаете, че на това сме определени.
4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.
Защото, когато бяхме при вас, казахме ви предварително, че има да претърпим беди; което и стана, както знаете.
5 ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.
И по тая причина, когато не можах да търпя, пратих да узнаят за вярата ви, да не би да ви е изкусил изкусителят, и трудът ни да бъде напразно.
6 ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.
А когато Тимотей дойде още сега при нас, та ни донесе добри вести за вярата и любовта ви, и че имате всякога добри спомени за нас и желаете да ни видите, както и ние вас,
7 ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.
тогава, братя, при всичката наша нужда и скръб, утешихме се за вас поради вярата ви;
8 ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.
понеже ние сега живеем, ако вие стоите твърдо в Господа.
9 ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?
Защото как можем достатъчно да благодарим на Бога за вас поради всичката радост, с която се радваме за вас пред нашия Бог?
10 ೧೦ ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.
Нощем и денем се молим преусърдно да видим лицето ви и да допълним това, което не достига на вярата ви.
11 ೧೧ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.
А сам нашият Бог и Отец и нашият Господ Исус дано оправи пътя към вас.
12 ೧೨ ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.
И Господ да ви направи да растете и да преизобилвате в любов един към друг и към всичките, както и ние преизобилваме към вас,
13 ೧೩ ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.
за да утвърди сърцата ви непорочни в светост пред нашия Бог и Отец при пришествието на нашия Господ Исус с всичките Негови светии.

< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 3 >