< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 5 >

1 ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.
А за годините и времената братя, няма нужда да се пише;
2 ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
защото вие добре знаете, че Господният ден ще дойде като крадец нощем.
3 “ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
Когато казват: Мир и безопасност! тогава ще ги постигне внезапно погубление, като болките на непразна жена, и никак няма да избягнат.
4 ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.
Но вие, братя, не сте в тъмнина, та да ви постигне оня ден като крадец.
5 ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
Защото вие всички сте синове на светлината, синове на деня: не сме от нощтта, нито от тъмнината.
6 ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
И тъй, да не спим, както другите, но да бъдем будни и трезвени.
7 ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.
Защото, които спят, нощем спят, и които се опиват, нощем се опиват;
8 ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
а ние, като сме от деня, нека бъдем трезвени и нека облечем за бронен нагръдник вяра и любов и да турим за шлем надежда и спасение.
9 ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
Защото Бог ни е определил не на гняв, но да получим спасение чрез нашия Господ Исус Христос,
10 ೧೦ ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.
Който умря за нас, тъй щото, било че сме живи, или че сме починали, да живеем заедно с Него.
11 ೧೧ ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
Затова насърчавайте се един друг, както и правите.
12 ೧೨ ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
И молим ви, братя, да признавате тия, които се трудят между вас, като ваши настойници в Господа, и ваши увещатели,
13 ೧೩ ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.
и да ги почитате твърде много с любов заради делото им. Живейте мирно помежду си.
14 ೧೪ ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
Молим ви още, братя, увещавайте безчинните, насърчавайте малодушните, поддържайте слабите, бъдете търпеливи към всички.
15 ೧೫ ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
Внимавайте, никой да не връща никому зло за зло; но всякога търсете добро един на друг и на всичките.
16 ೧೬ ಯಾವಾಗಲೂ ಸಂತೋಷಿಸಿರಿ,
Винаги се радвайте.
17 ೧೭ ಎಡೆಬಿಡದೆ ಪ್ರಾರ್ಥನೆಮಾಡಿರಿ,
Непрестанно се молете.
18 ೧೮ ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
За всичко благодарете, защото това е Божията воля за вас в Христа Исуса.
19 ೧೯ ಪವಿತ್ರಾತ್ಮನನ್ನು ನಂದಿಸಬೇಡಿ,
Духа не угасвайте.
20 ೨೦ ಪ್ರವಾದನೆಗಳನ್ನು ಹಿನೈಸಬೇಡಿರಿ.
Пророчества не презирайте.
21 ೨೧ ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
Всичко изпитвайте, дръжте доброто.
22 ೨೨ ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
Въздържайте се от всякакво зло.
23 ೨೩ ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
А сам Бог на мира да ви освети напълно; и дано се запазят непокътнати духа, душата и тялото ви без порок, до пришествието на нашия Господ Исус Христос.
24 ೨೪ ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
Верен е Оня, Който ви призовава, и ще извърши това.
25 ೨೫ ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
Братя, молете се за нас.
26 ೨೬ ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.
Поздравете всички братя със света целувка.
27 ೨೭ ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ.
Заклевам ви в Господа да се прочете това послание на всичките (свети) братя.
28 ೨೮ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
Благодатта на нашия Господ Исус Христос да бъде с вас. [Амин].

< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 5 >