< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 13 >

1 ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,
בִּשְׁנַת שְׁמוֹנֶה עֶשְׂרֵה לַמֶּלֶךְ יָרָבְעָם וַיִּמְלֹךְ אֲבִיָּה עַל־יְהוּדָֽה׃
2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.
שָׁלוֹשׁ שָׁנִים מָלַךְ בִּירוּשָׁלִַם וְשֵׁם אִמּוֹ מִיכָיָהוּ בַת־אוּרִיאֵל מִן־גִּבְעָה וּמִלְחָמָה הָיְתָה בֵּין אֲבִיָּה וּבֵין יָרָבְעָֽם׃
3 ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.
וַיֶּאְסֹר אֲבִיָּה אֶת־הַמִּלְחָמָה בְּחַיִל גִּבּוֹרֵי מִלְחָמָה אַרְבַּע־מֵאוֹת אֶלֶף אִישׁ בָּחוּר וְיָרָבְעָם עָרַךְ עִמּוֹ מִלְחָמָה בִּשְׁמוֹנֶה מֵאוֹת אֶלֶף אִישׁ בָּחוּר גִּבּוֹר חָֽיִל׃
4 ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.
וַיָּקָם אֲבִיָּה מֵעַל לְהַר צְמָרַיִם אֲשֶׁר בְּהַר אֶפְרָיִם וַיֹּאמֶר שְׁמָעוּנִי יָרָבְעָם וְכָל־יִשְׂרָאֵֽל׃
5 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?
הֲלֹא לָכֶם לָדַעַת כִּי יְהוָה ׀ אֱלֹהֵי יִשְׂרָאֵל נָתַן מַמְלָכָה לְדָוִיד עַל־יִשְׂרָאֵל לְעוֹלָם לוֹ וּלְבָנָיו בְּרִית מֶֽלַח׃
6 ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು.
וַיָּקָם יָרָבְעָם בֶּן־נְבָט עֶבֶד שְׁלֹמֹה בֶן־דָּוִיד וַיִּמְרֹד עַל־אֲדֹנָֽיו׃
7 ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.
וַיִּקָּבְצוּ עָלָיו אֲנָשִׁים רֵקִים בְּנֵי בְלִיַּעַל וַיִּֽתְאַמְּצוּ עַל־רְחַבְעָם בֶּן־שְׁלֹמֹה וּרְחַבְעָם הָיָה נַעַר וְרַךְ־לֵבָב וְלֹא הִתְחַזַּק לִפְנֵיהֶֽם׃
8 ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
וְעַתָּה ׀ אַתֶּם אֹֽמְרִים לְהִתְחַזֵּק לִפְנֵי מַמְלֶכֶת יְהוָה בְּיַד בְּנֵי דָוִיד וְאַתֶּם הָמוֹן רָב וְעִמָּכֶם עֶגְלֵי זָהָב אֲשֶׁר עָשָׂה לָכֶם יָרָבְעָם לֵאלֹהִֽים׃
9 ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.
הֲלֹא הִדַּחְתֶּם אֶת־כֹּהֲנֵי יְהוָה אֶת־בְּנֵי אַהֲרֹן וְהַלְוִיִּם וַתַּעֲשׂוּ לָכֶם כֹּהֲנִים כְּעַמֵּי הָאֲרָצוֹת כָּל־הַבָּא לְמַלֵּא יָדוֹ בְּפַר בֶּן־בָּקָר וְאֵילִם שִׁבְעָה וְהָיָה כֹהֵן לְלֹא אֱלֹהִֽים׃
10 ೧೦ ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.
וַאֲנַחְנוּ יְהוָה אֱלֹהֵינוּ וְלֹא עֲזַבְנֻהוּ וְכֹהֲנִים מְשָׁרְתִים לַֽיהוָה בְּנֵי אַהֲרֹן וְהַלְוִיִּם בַּמְלָֽאכֶת׃
11 ೧೧ ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
וּמַקְטִרִים לַיהוָה עֹלוֹת בַּבֹּֽקֶר־בַּבֹּקֶר וּבָעֶֽרֶב־בָּעֶרֶב וּקְטֹֽרֶת־סַמִּים וּמַעֲרֶכֶת לֶחֶם עַל־הַשֻּׁלְחָן הַטָּהוֹר וּמְנוֹרַת הַזָּהָב וְנֵרֹתֶיהָ לְבָעֵר בָּעֶרֶב בָּעֶרֶב כִּֽי־שֹׁמְרִים אֲנַחְנוּ אֶת־מִשְׁמֶרֶת יְהוָה אֱלֹהֵינוּ וְאַתֶּם עֲזַבְתֶּם אֹתֽוֹ׃
12 ೧೨ ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.
וְהִנֵּה עִמָּנוּ בָרֹאשׁ הָאֱלֹהִים ׀ וְכֹהֲנָיו וַחֲצֹצְרוֹת הַתְּרוּעָה לְהָרִיעַ עֲלֵיכֶם בְּנֵי יִשְׂרָאֵל אַל־תִּלָּֽחֲמוּ עִם־יְהוָה אֱלֹהֵֽי־אֲבֹתֵיכֶם כִּי־לֹא תַצְלִֽיחוּ׃
13 ೧೩ ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.
וְיָֽרָבְעָם הֵסֵב אֶת־הַמַּאְרָב לָבוֹא מֵֽאַחֲרֵיהֶם וַיִּֽהְיוּ לִפְנֵי יְהוּדָה וְהַמַּאְרָב מֵאַחֲרֵיהֶֽם׃
14 ೧೪ ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.
וַיִּפְנוּ יְהוּדָה וְהִנֵּה לָהֶם הַמִּלְחָמָה פָּנִים וְאָחוֹר וַֽיִּצְעֲקוּ לַיהוָה וְהַכֹּהֲנִים מחצצרים מַחְצְרִים בַּחֲצֹצְרֽוֹת׃
15 ೧೫ ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.
וַיָּרִיעוּ אִישׁ יְהוּדָה וַיְהִי בְּהָרִיעַ אִישׁ יְהוּדָה וְהָאֱלֹהִים נָגַף אֶת־יָֽרָבְעָם וְכָל־יִשְׂרָאֵל לִפְנֵי אֲבִיָּה וִיהוּדָֽה׃
16 ೧೬ ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.
וַיָּנוּסוּ בְנֵי־יִשְׂרָאֵל מִפְּנֵי יְהוּדָה וַיִּתְּנֵם אֱלֹהִים בְּיָדָֽם׃
17 ೧೭ ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.
וַיַּכּוּ בָהֶם אֲבִיָּה וְעַמּוֹ מַכָּה רַבָּה וַיִּפְּלוּ חֲלָלִים מִיִּשְׂרָאֵל חֲמֵשׁ־מֵאוֹת אֶלֶף אִישׁ בָּחֽוּר׃
18 ೧೮ ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.
וַיִּכָּנְעוּ בְנֵי־יִשְׂרָאֵל בָּעֵת הַהִיא וַיֶּֽאֶמְצוּ בְּנֵי יְהוּדָה כִּי נִשְׁעֲנוּ עַל־יְהוָה אֱלֹהֵי אֲבוֹתֵיהֶֽם׃
19 ೧೯ ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
וַיִּרְדֹּף אֲבִיָּה אַחֲרֵי יָרָבְעָם וַיִּלְכֹּד מִמֶּנּוּ עָרִים אֶת־בֵּֽית־אֵל וְאֶת־בְּנוֹתֶיהָ וְאֶת־יְשָׁנָה וְאֶת־בְּנוֹתֶיהָ וְאֶת־עפרון עֶפְרַיִן וּבְנֹתֶֽיהָ׃
20 ೨೦ ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.
וְלֹֽא־עָצַר כֹּֽחַ־יָרָבְעָם עוֹד בִּימֵי אֲבִיָּהוּ וַיִּגְּפֵהוּ יְהוָה וַיָּמֹֽת׃
21 ೨೧ ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
וַיִּתְחַזֵּק אֲבִיָּהוּ וַיִּשָּׂא־לוֹ נָשִׁים אַרְבַּע עֶשְׂרֵה וַיּוֹלֶד עֶשְׂרִים וּשְׁנַיִם בָּנִים וְשֵׁשׁ עֶשְׂרֵה בָּנֽוֹת׃
22 ೨೨ ಅಬೀಯನ ಉಳಿದ‍ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.
וְיֶתֶר דִּבְרֵי אֲבִיָּה וּדְרָכָיו וּדְבָרָיו כְּתוּבִים בְּמִדְרַשׁ הַנָּבִיא עִדּֽוֹ׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 13 >