< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 16 >

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.
I KA makahiki kanakolukumamaono o ke aupuni o Asa, pii mai la o Baasa ke alii o ka Iseraela, e ku e i ka Iuda, a kukulu iho la oia ia Rama, me ka manao, aole e puka iwaho kekahi, aole e komo iloko kekahi io Asa la ke alii o ka Iuda.
2 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ
Alaila lawe ae la o Asa i ke kala a me ke gula mai loko mai o ka waihona waiwai o ka hale o Iehova, a me ka hale o ke alii, a hoouna aku la oia io Bene-hadada la, i ke alii o Suria, i kona noho ana ma Damaseko, i aku la,
3 ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.
He berita no mawaena o'u a me oe, a mawaena o ko'u makua, a me kou makua; eia hoi, ke hoouka aku nei au ia oe i ke kala a me ke gula, e hooki oe i kau berita me Baasa ke alii o ka Iseraela, i hele ia mai o'u aku nei.
4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.
A hoolohe o Bene-hadada i ka Asa, ka ke alii, a hoouna mai la oia i na luna o na koa ona e ku e i na kulanakauhalo o ka Iseraela; a Iuku iho la lakou ia Iiona, a me Dana, a me Abelamaima, a me na kulanakauhale waiho ukana a pau o Napetali.
5 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.
A lohe iho la o Baasa, haalele ia i kona kukulu ana ia Rama, a hooki iho la ia i kana hana.
6 ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
Alakai ae la o Asa i ka Inda a pau, halihali mai la lakou i na pohaku o Rama, a me na laau olaila, i ka mea a Baasa i kukulu ai; a kukulu iho la oia me ia mau mea ia Geba a me Mizepa.
7 ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
Ia manawa, hele mai la o Hanani ke kaula io Asa la, i ke alii o ka Iuda, olelo mai la ia ia, No kou hilinai ana i ke alii o Suria, aole hoi i hilinai ia Iehova i kou Akua, no ia mea, e pakele ka poe koa o ke alii o Suria mai kou lima aku.
8 ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
O ko Aitiopa a me ka Luba, aole anei he nui loa lakou me na hale kaa, a me na holohololio he lehulehu? Aka, i kou hilinai ana ia Iehova, haawi mai oia ia lakou iloko o kou lima.
9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
No ka mea, e holoholo ana na maka o Iehova ma ka honua a pau e hoike ana i kona mau a i ka poe i pono ia ia ko lakou naau: ua hana naaupo oe i keia mea; a ma keia hope aku e kauaia ana oe.
10 ೧೦ ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
Alaila, huhu o Asa i ke kaula, a hoolei oia ia ia iloko o ka hale paahao; no ka mea, ua wela kona huhu ia ia no keia mea: a ia manawa hoi hookaumaha o Asa i kekahi poe kanaka.
11 ೧೧ ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.
Aia hoi, o na mea a Asa i hana'i, ka mua, a me ka hope, ua kakauia ia mau mea iloko o ka palapala o na'lii o ka luda a me ka Iseraela.
12 ೧೨ ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
A i ka makahiki kanakolukumamaiwa o kona aupuni, loaa iho la ia Asa ka mai ma kona mau wawae, a pii iluna kona mai; a i kona wa mai, aole ia i imi ia Iehova, aka, i ka poe kahuna lapaau.
13 ೧೩ ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು.
A hiamoe iho la o Asa me kona poe kupuna, a make ia i ka makahiki kanahakumamakahi o kona noho alii ana.
14 ೧೪ ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
A kanu lakou ia ia iloko o kona lua kahi ana i eli ai nona iho, ma ke kulanakauhale o Davida, a waiho lakou ia ia iloko o kona wahi moe, kahi i piha ai i na mea ala, a me na mea miko i hoomakaukauia ma ke akamai o na kahuna lapaau, a pupuhi aku lakou i ke ahi nona a nui loa.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 16 >