< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 18 >

1 ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.
여호사밧이 부귀와 영광이 극하였고 아합으로 더불어 연혼하였더라
2 ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.
두어해 후에 저가 사마리아에 내려가서 아합에게 나아갔더니 아합이 저와 종자를 위하여 우양을 많이 잡고 함께 가서 길르앗 라못 치기를 권하더라
3 ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.
이스라엘 왕 아합이 유다 왕 여호사밧에게 이르되 `당신은 나와 함께 길르앗 라못으로 가시겠느뇨?' 대답하되 '나는 당신과 일반이요 내 백성은 당신의 백성과 일반이니 당신과 함께 싸우리이다'
4 ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು.
여호사밧이 또 이스라엘 왕에게 이르되 `청컨대 먼저 여호와의 말씀이 어떠하신지 물어 보소서'
5 ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
이스라엘 왕이 이에 선지자 사백인을 모으고 저희에게 이르되 `우리가 길르앗 라못에 가서 싸우랴 말랴' 저희가 가로되 '올라 가소서 하나님이 그 성을 왕의 손에 붙이시리이다'
6 ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು.
여호사밧이 가로되 `이 외에 우리가 물을 만한 여호와의 선지자가 여기 있지 아니하니이까?'
7 ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.
이스라엘 왕이 여호사밧에게 이르되 `오히려 이믈라의 아들 미가야 한 사람이 있으니 저로 말미암아 여호와께 물을 수 있으나 저는 내게 대하여 길한 일은 예언하지 아니하고 항상 흉한 일만 예언하기로 내가 저를 미워하나이다' 여호사밧이 가로되 '왕은 그런 말씀을 마소서'
8 ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
이스라엘 왕이 한 내시를 불러 이르되 `이믈라의 아들 미가야로 속히 오게 하라' 하니라
9 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.
이스라엘 왕과 유다 왕 여호사밧이 왕복을 입고 사마리아 성문 어귀 광장에서 각기 보좌에 앉았고 모든 선지자가 그 앞에서 예언을 하는데
10 ೧೦ ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.
그나아나의 아들 시드기야는 철로 뿔들을 만들어 가지고 말하되 `여호와의 말씀이 왕이 이것들로 아람 사람을 찔러 진멸하리라 하셨다' 하고
11 ೧೧ ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
모든 선지자도 그와 같이 예언하여 이르기를 `길르앗 라못으로 올라가서 승리를 얻으소서 여호와께서 그 성을 왕의 손에 붙이시리이다' 하더라
12 ೧೨ ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.
미가야를 부르러 간 사자가 일러 가로되 `선지자들의 말이 여출일구하여 왕에게 길하게 하니 청컨대 당신의 말도 저희 중 한 사람처럼 길하게 하소서'
13 ೧೩ ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
미가야가 가로되 `여호와의 사심을 가리켜 맹세하노니 내 하나님의 말씀하시는 것 곧 그것을 내가 말하리라' 하고
14 ೧೪ ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.
이에 왕에게 이르니 왕이 저에게 이르되 `미가야야 우리가 길르앗 라못으로 싸우러 가랴' 가로되 '올라가서 승리를 얻으소서 저희가 왕의 손에 붙인 바 되리이다'
15 ೧೫ ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು
왕이 저에게 이르되 `여호와의 이름으로 진실한 것만 말하라고 내가 몇번이나 너로 맹세케 하여야 하겠느냐?'
16 ೧೬ ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.
저가 가로되 `내가 보니 온 이스라엘이 목자 없는 양 같이 산에 흩어졌는데 여호와의 말씀이 이 무리가 주인이 없으니 각각 평안히 그 집으로 돌아갈 것이니라 하셨나이다'
17 ೧೭ ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
이스라엘 왕이 여호사밧에게 이르되 `저 사람이 내게 대하여 길한 것을 예언하지 아니하고 흉한 것만 예언하겠다고 당신에게 말씀하지 아니하였나이까?'
18 ೧೮ ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.
미가야가 가로되 `그런즉 왕은 여호와의 말씀을 들으소서 내가 보니 여호와께서 그 보좌에 앉으셨고 하늘의 만군이 그 좌우편에 모시고 섰는데
19 ೧೯ ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
여호와께서 말씀하시기를 누가 이스라엘 왕 아합을 꾀어 저로 길르앗 라못에 올라가서 죽게 할꼬 하시니 하나는 이렇게 하겠다 하고 하나는 저렇게 하겠다 하였는데
20 ೨೦ ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,
한 영(靈)이 나아와 여호와 앞에 서서 말하되 내가 저를 꾀이겠나이다 여호와께서 저에게 이르시되 어떻게 하겠느냐?
21 ೨೧ ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.
가로되 내가 나가서 거짓말하는 영이 되어 그 모든 선지자의 입에 있겠나이다 여호와께서 가라사대 너는 꾀이겠고 또 이루리라 나가서 그리하라 하셨은즉
22 ೨೨ ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
이제 여호와께서 거짓말하는 영을 왕의 이 모든 선지자의 입에 넣으셨고 또 여호와께서 왕에게 대하여 화를 말씀하셨나이다'
23 ೨೩ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.
그나아나의 아들 시드기야가 가까이 와서 미가야의 뺨을 치며 이르되 `여호와의 영이 나를 떠나 어디로 말미암아 가서 네게 말씀 하더냐?'
24 ೨೪ ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು.
미가야가 가로되 `네가 골방에 들어가서 숨는 그 날에 보리라'
25 ೨೫ ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.
이스라엘 왕이 가로되 `미가야를 잡아 부윤 아몬과 왕자 요아스에게로 끌고 돌아가서
26 ೨೬ ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
말하기를 왕의 말씀이 이 놈을 옥에 가두고 내가 평안히 돌아올때까지 고생의 떡과 고생의 물로 먹이라' 하라
27 ೨೭ ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.
미가야가 가로되 `왕이 참으로 평안히 돌아오시게 될진대 여호와께서 나로 말씀하지 아니하셨으리이다' 또 가로되 '너희 백성들아 다 들을지어다!' 하니라
28 ೨೮ ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.
이스라엘 왕과 유다 왕 여호사밧이 길르앗 라못으로 올라가니라
29 ೨೯ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.
이스라엘 왕이 여호사밧에게 이르되 `나는 변장하고 군중으로 들어가려 하노니 당신은 왕복을 입으소서' 하고 이스라엘 왕이 변장하고 둘이 군중으로 들어가니라
30 ೩೦ ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.
아람 왕이 그 병거 장관들에게 이미 명하여 이르기를 `너희는 작은 자나 큰 자나 더불어 싸우지 말고 오직 이스라엘 왕과 싸우라' 한지라
31 ೩೧ ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
병거의 장관들이 여호사밧을 보고 이르되 `이가 이스라엘 왕이라' 하고 돌이켜 저와 싸우려 한즉 여호사밧이 소리를 지르매 여호와께서 저를 도우시며 하나님이 저희를 감동시키사 저를 떠나가게 하신지라
32 ೩೨ ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು.
병거의 장관들이 저가 이스라엘 왕이 아님을 보고 쫓기를 그치고 돌이켰더라
33 ೩೩ ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
한 사람이 우연히 활을 당기어 이스라엘 왕의 갑옷 솔기를 쏜지라 왕이 그 병거 모는 자에게 이르되 '내가 부상하였으니 네 손을 돌이켜 나로 군중에서 나가게 하라' 하였으나
34 ೩೪ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.
이 날의 전쟁이 맹렬하였으므로 이스라엘 왕이 병거에서 스스로 부지하며 저녁때까지 아람 사람을 막다가 해가 질 즈음에 죽었더라

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 18 >