< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 20 >

1 ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.
A poslije toga sinovi Moavovi i sinovi Amonovi i s njima koji žive meðu sinovima Amonovijem, doðoše da vojuju na Josafata.
2 ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.
I doðoše te javiše Josafatu govoreæi: ide na te veliko mnoštvo ispreko mora, iz Sirije; i eno ih u Asason-Tamaru, a to je En-Gad.
3 ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.
A Josafat se uplaši, i obrati lice svoje da traži Gospoda, i oglasi post po svoj zemlji Judinoj.
4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.
I skupiše se svi sinovi Judini da traže Gospoda, i iz svijeh gradova Judinijeh doðoše da traže Gospoda.
5 ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,
Tada stade Josafat u zboru Judinu i Jerusalimskom u domu Gospodnjem pred trijemom novijem,
6 “ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?
I reèe: Gospode Bože otaca naših! nijesi li ti Bog na nebu i vladaš svijem carstvima narodnijem? nije li u tvojoj ruci moæ i sila da ti niko ne može odoljeti?
7 ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?
Nijesi li ti, Bože naš, odagnao stanovnike ove zemlje ispred naroda svojega Izrailja, i dao je navijek sjemenu Avrama prijatelja svojega?
8 ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.
Te se naseliše u njoj, i sagradiše ti u njoj svetinju za ime tvoje govoreæi:
9 ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.
Kad nas zadesi kako zlo, maè osvetni ili pomor ili glad, staæemo pred ovijem domom i pred tobom, jer je ime tvoje u ovom domu, i vapiæemo tebi u nevolji svojoj, usliši i izbavi.
10 ೧೦ ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.
A sad evo, sinovi Amonovi i Moavovi i oni iz gore Sira, kroz koje nijesi dao sinovima Izrailjevijem proæi kad iðahu iz zemlje Misirske, nego ih obidoše i ne istrijebiše;
11 ೧೧ ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.
A evo, oni nam vraæaju došavši da nas istjeraju iz našljedstva tvojega, koje si nam predao.
12 ೧೨ ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.
Bože naš, zar im neæeš suditi? jer u nama nema snage da se opremo tome mnoštvu velikom, koje ide na nas, niti mi znamo što bismo èinili, nego su oèi naše uprte u te.
13 ೧೩ ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.
A svi sinovi Judini stajahu pred Gospodom i djeca njihova, žene njihove i sinovi njihovi.
14 ೧೪ ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.
Tada siðe duh Gospodnji usred zbora na Jazila sina Zaharije sina Venaje sina Jeila sina Matanijina, Levita izmeðu sinova Asafovijeh,
15 ೧೫ ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.
I reèe: slušajte, svi sinovi Judini i Jerusalimljani, i ti care Josafate, ovako vam veli Gospod: ne bojte se i ne plašite se toga mnoštva velikoga, jer nije vaš rat nego Božji.
16 ೧೬ ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
Sjutra izidite na njih; oni æe poæi uz brdo Zis, i naæi æete ih nakraj potoka prema pustinji Jeruilu.
17 ೧೭ ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.
Ne treba vi da se bijete u ovom boju; postavite se, stojte pa gledajte kako æe vas izbaviti Gospod, Judo i Jerusalime! ne bojte se i ne plašite se, sjutra izidite pred njih, i Gospod æe biti s vama.
18 ೧೮ ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.
Tada se Josafat savi licem k zemlji, i svi Judejci i Jerusalimljani padoše pred Gospodom, i pokloniše se Gospodu.
19 ೧೯ ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.
A Leviti od sinova Katovijeh i sinova Korejevijeh ustaše, te hvališe Gospoda Boga Izrailjeva glasom veoma visokim.
20 ೨೦ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.
A ujutru ustavši rano izidoše u pustinju Tekujsku; a kad izlažahu, stade Josafat i reèe: èujte me, Judejci i Jerusalimljani: vjerujte Gospodu Bogu svojemu i biæete jaki, vjerujte prorocima njegovijem i biæete sreæni.
21 ೨೧ ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.
I tako dogovoriv se s narodom postavi pjevaèe Gospodnje da hvale svetu krasotu iduæi pred vojskom i govoreæi: hvalite Gospoda, jer je dovijeka milost njegova.
22 ೨೨ ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
A kad poèeše pjesmu i hvalu, obrati Gospod zasjedu na sinove Amonove i sinove Moavove i na one iz gore Sira, koji izidoše na Judu, te se razbiše.
23 ೨೩ ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
Jer sinovi Amonovi i sinovi Moavovi ustaše na one iz gore Sira da ih pobiju i potru; i kad pobiše one iz gore Sira, udariše jedni na druge, te se potrše.
24 ೨೪ ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.
A kad Juda doðe do stražare prema pustinji, i pogleda na mnoštvo, a to mrtva tjelesa leže po zemlji, i nijedan ne bješe ostao živ.
25 ೨೫ ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.
Zato doðe Josafat sa narodom svojim da pokupe plijen; i naðoše kod njih mnogo blaga i dragocjenijeh nakita na mrtvacima, i naplijeniše da veæ ne mogoše nositi; tri dana kupiše plijen, jer ga bješe mnogo.
26 ೨೬ ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.
A èetvrti dan skupiše se u dolini blagoslovnoj, jer ondje blagosloviše Gospoda; zato se prozva mjesto dolina blagoslovna do danas.
27 ೨೭ ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.
Potom okrenuše svi Judejci i Jerusalimljani i Josafat pred njima da se vrate u Jerusalim s veseljem, jer ih oveseli Gospod neprijateljima njihovijem.
28 ೨೮ ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.
I doðoše u Jerusalim sa psaltirima i guslama i trubama u dom Gospodnji.
29 ೨೯ ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.
I strah Božji doðe na sva carstva zemaljska kad èuše da je Gospod vojevao na neprijatelje Izrailjeve.
30 ೩೦ ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.
I tako se smiri carstvo Josafatovo, jer mu Bog njegov dade mir otsvuda.
31 ೩೧ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
I carovaše Josafat nad Judom; trideset i pet godina bijaše mu kad poèe carovati; i carova dvadeset i pet godina u Jerusalimu. Materi mu bješe ime Azuva, kæi Silejeva.
32 ೩೨ ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
I hoðaše putem oca svojega Ase, niti zaðe s njega, èineæi što je pravo pred Gospodom.
33 ೩೩ ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.
Ali visine ne biše oborene, jer još ne bješe narod upravio srca svojega k Bogu otaca svojih.
34 ೩೪ ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.
A ostala djela Josafatova prva i pošljednja, eno zapisana su u knjizi Juja sina Ananijeva, koja je stavljena u knjigu o carevima Izrailjevijem.
35 ೩೫ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು.
Potom združi se Josafat car Judin s Ohozijom carem Izrailjevijem, koji èinjaše bezakonja.
36 ೩೬ ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು.
A združi se s njim zato da naèine laðe da idu u Tarsis; i naèiniše laðe u Esion-Gaveru.
37 ೩೭ ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
Tada prorokova Elijezer sin Dodavin iz Marise za Josafata govoreæi: što si se združio s Ohozijom, zato Gospod razmetnu djela tvoja. I razbiše se laðe i ne mogoše iæi u Tarsis.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 20 >