< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 25 >

1 ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳ್ವಿಕೆ ಮಾಡಿದನು. ಯೆರೂಸಲೇಮಿನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ.
בֶּן־עֶשְׂרִים וְחָמֵשׁ שָׁנָה מָלַךְ אֲמַצְיָהוּ וְעֶשְׂרִים וָתֵשַׁע שָׁנָה מָלַךְ בִּירוּשָׁלָ͏ִם וְשֵׁם אִמּוֹ יְהוֹעַדָּן מִירוּשָׁלָֽיִם׃
2 ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.
וַיַּעַשׂ הַיָּשָׁר בְּעֵינֵי יְהוָה רַק לֹא בְּלֵבָב שָׁלֵֽם׃
3 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.
וַיְהִי כַּאֲשֶׁר חָזְקָה הַמַּמְלָכָה עָלָיו וַֽיַּהֲרֹג אֶת־עֲבָדָיו הַמַּכִּים אֶת־הַמֶּלֶךְ אָבִֽיו׃
4 ಆದರೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
וְאֶת־בְּנֵיהֶם לֹא הֵמִית כִּי כַכָּתוּב בַּתּוֹרָה בְּסֵפֶר מֹשֶׁה אֲשֶׁר־צִוָּה יְהוָה לֵאמֹר לֹא־יָמוּתוּ אָבוֹת עַל־בָּנִים וּבָנִים לֹא־יָמוּתוּ עַל־אָבוֹת כִּי אִישׁ בְּחֶטְאוֹ יָמֽוּתוּ׃
5 ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.
וַיִּקְבֹּץ אֲמַצְיָהוּ אֶת־יְהוּדָה וַיַּֽעֲמִידֵם לְבֵית־אָבוֹת לְשָׂרֵי הָאֲלָפִים וּלְשָׂרֵי הַמֵּאוֹת לְכָל־יְהוּדָה וּבִנְיָמִן וַֽיִּפְקְדֵם לְמִבֶּן עֶשְׂרִים שָׁנָה וָמַעְלָה וַיִּמְצָאֵם שְׁלֹשׁ־מֵאוֹת אֶלֶף בָּחוּר יוֹצֵא צָבָא אֹחֵז רֹמַח וְצִנָּֽה׃
6 ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.
וַיִּשְׂכֹּר מִיִּשְׂרָאֵל מֵאָה אֶלֶף גִּבּוֹר חָיִל בְּמֵאָה כִכַּר־כָּֽסֶף׃
7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.
וְאִישׁ הָאֱלֹהִים בָּא אֵלָיו לֵאמֹר הַמֶּלֶךְ אַל־יָבֹא עִמְּךָ צְבָא יִשְׂרָאֵל כִּי אֵין יְהוָה עִם־יִשְׂרָאֵל כֹּל בְּנֵי אֶפְרָֽיִם׃
8 ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.
כִּי אִם־בֹּא אַתָּה עֲשֵׂה חֲזַק לַמִּלְחָמָה יַכְשִֽׁילְךָ הָֽאֱלֹהִים לִפְנֵי אוֹיֵב כִּי יֶשׁ־כֹּחַ בֵּאלֹהִים לַעְזוֹר וּלְהַכְשִֽׁיל׃
9 ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು” ಎಂದನು.
וַיֹּאמֶר אֲמַצְיָהוּ לְאִישׁ הָאֱלֹהִים וּמַֽה־לַּעֲשׂוֹת לִמְאַת הַכִּכָּר אֲשֶׁר נָתַתִּי לִגְדוּד יִשְׂרָאֵל וַיֹּאמֶר אִישׁ הָֽאֱלֹהִים יֵשׁ לַֽיהוָה לָתֶת לְךָ הַרְבֵּה מִזֶּֽה׃
10 ೧೦ ಆಗ ಅಮಚ್ಯನು ಎಫ್ರಾಯೀಮ್ಯ ರಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು.
וַיַּבְדִּילֵם אֲמַצְיָהוּ לְהַגְּדוּד אֲשֶׁר־בָּא אֵלָיו מֵֽאֶפְרַיִם לָלֶכֶת לִמְקוֹמָם וַיִּחַר אַפָּם מְאֹד בִּֽיהוּדָה וַיָּשׁוּבוּ לִמְקוֹמָם בָּחֳרִי־אָֽף׃
11 ೧೧ ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.
וַאֲמַצְיָהוּ הִתְחַזַּק וַיִּנְהַג אֶת־עַמּוֹ וַיֵּלֶךְ גֵּיא הַמֶּלַח וַיַּךְ אֶת־בְּנֵי־שֵׂעִיר עֲשֶׂרֶת אֲלָפִֽים׃
12 ೧೨ ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.
וַעֲשֶׂרֶת אֲלָפִים חַיִּים שָׁבוּ בְּנֵי יְהוּדָה וַיְבִיאוּם לְרֹאשׁ הַסָּלַע וַיַּשְׁלִיכוּם מֵֽרֹאשׁ־הַסֶּלַע וְכֻלָּם נִבְקָֽעוּ׃
13 ೧೩ ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು
וּבְנֵי הַגְּדוּד אֲשֶׁר הֵשִׁיב אֲמַצְיָהוּ מִלֶּכֶת עִמּוֹ לַמִּלְחָמָה וַֽיִּפְשְׁטוּ בְּעָרֵי יְהוּדָה מִשֹּׁמְרוֹן וְעַד־בֵּית חוֹרוֹן וַיַּכּוּ מֵהֶם שְׁלֹשֶׁת אֲלָפִים וַיָּבֹזּוּ בִּזָּה רַבָּֽה׃
14 ೧೪ ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.
וַיְהִי אַחֲרֵי בוֹא אֲמַצְיָהוּ מֵֽהַכּוֹת אֶת־אֲדוֹמִים וַיָּבֵא אֶת־אֱלֹהֵי בְּנֵי שֵׂעִיר וַיַּֽעֲמִידֵם לוֹ לֵאלֹהִים וְלִפְנֵיהֶם יִֽשְׁתַּחֲוֶה וְלָהֶם יְקַטֵּֽר׃
15 ೧೫ ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.
וַיִּֽחַר־אַף יְהוָה בַּאֲמַצְיָהוּ וַיִּשְׁלַח אֵלָיו נָבִיא וַיֹּאמֶר לוֹ לָמָּה דָרַשְׁתָּ אֶת־אֱלֹהֵי הָעָם אֲשֶׁר לֹא־הִצִּילוּ אֶת־עַמָּם מִיָּדֶֽךָ׃
16 ೧೬ ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.
וַיְהִי ׀ בְּדַבְּרוֹ אֵלָיו וַיֹּאמֶר לוֹ הַלְיוֹעֵץ לַמֶּלֶךְ נְתַנּוּךָ חֲדַל־לְךָ לָמָּה יַכּוּךָ וַיֶּחְדַּל הַנָּבִיא וַיֹּאמֶר יָדַעְתִּי כִּֽי־יָעַץ אֱלֹהִים לְהַשְׁחִיתֶךָ כִּֽי־עָשִׂיתָ זֹּאת וְלֹא שָׁמַעְתָּ לַעֲצָתִֽי׃
17 ೧೭ ಅನಂತರ ಯೆಹೂದದ ಅರಸನಾದ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ” ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು.
וַיִּוָּעַץ אֲמַצְיָהוּ מֶלֶךְ יְהוּדָה וַיִּשְׁלַח אֶל־יוֹאָשׁ בֶּן־יְהוֹאָחָז בֶּן־יֵהוּא מֶלֶךְ יִשְׂרָאֵל לֵאמֹר לך לְכָה נִתְרָאֶה פָנִֽים׃
18 ೧೮ ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು.
וַיִּשְׁלַח יוֹאָשׁ מֶֽלֶךְ־יִשְׂרָאֵל אֶל־אֲמַצְיָהוּ מֶֽלֶךְ־יְהוּדָה לֵאמֹר הַחוֹחַ אֲשֶׁר בַּלְּבָנוֹן שָׁלַח אֶל־הָאֶרֶז אֲשֶׁר בַּלְּבָנוֹן לֵאמֹר תְּנָֽה־אֶת־בִּתְּךָ לִבְנִי לְאִשָּׁה וַֽתַּעֲבֹר חַיַּת הַשָּׂדֶה אֲשֶׁר בַּלְּבָנוֹן וַתִּרְמֹס אֶת־הַחֽוֹחַ׃
19 ೧೯ ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.
אָמַרְתָּ הִנֵּה הִכִּיתָ אֶת־אֱדוֹם וּנְשָׂאֲךָ לִבְּךָ לְהַכְבִּיד עַתָּה שְׁבָה בְּבֵיתֶךָ לָמָּה תִתְגָּרֶה בְּרָעָה וְנָפַלְתָּ אַתָּה וִיהוּדָה עִמָּֽךְ׃
20 ೨೦ ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು.
וְלֹא־שָׁמַע אֲמַצְיָהוּ כִּי מֵהָֽאֱלֹהִים הִיא לְמַעַן תִּתָּם בְּיָד כִּי דָֽרְשׁוּ אֵת אֱלֹהֵי אֱדֽוֹם׃
21 ೨೧ ಇಸ್ರಾಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
וַיַּעַל יוֹאָשׁ מֶֽלֶךְ־יִשְׂרָאֵל וַיִּתְרָאוּ פָנִים הוּא וַאֲמַצְיָהוּ מֶֽלֶךְ־יְהוּדָה בְּבֵית שֶׁמֶשׁ אֲשֶׁר לִיהוּדָֽה׃
22 ೨೨ ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
וַיִּנָּגֶף יְהוּדָה לִפְנֵי יִשְׂרָאֵל וַיָּנֻסוּ אִישׁ לְאֹהָלָֽיו׃
23 ೨೩ ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,
וְאֵת אֲמַצְיָהוּ מֶֽלֶךְ־יְהוּדָה בֶּן־יוֹאָשׁ בֶּן־יְהוֹאָחָז תָּפַשׂ יוֹאָשׁ מֶֽלֶךְ־יִשְׂרָאֵל בְּבֵית שָׁמֶשׁ וַיְבִיאֵהוּ יְרוּשָׁלִַם וַיִּפְרֹץ בְּחוֹמַת יְרוּשָׁלִַם מִשַּׁעַר אֶפְרַיִם עַד־שַׁעַר הַפּוֹנֶה אַרְבַּע מֵאוֹת אַמָּֽה׃
24 ೨೪ ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನು, ಪಾತ್ರೆಗಳನ್ನು, ಅರಸನ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನು ತೆಗೆದುಕೊಂಡು, ಹೊಣೆಗಾರರಾದ ಕೆಲವರನ್ನು ಸೆರೆ ಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
וְכָֽל־הַזָּהָב וְהַכֶּסֶף וְאֵת כָּל־הַכֵּלִים הַנִּמְצְאִים בְּבֵית־הָאֱלֹהִים עִם־עֹבֵד אֱדוֹם וְאֶת־אֹצְרוֹת בֵּית הַמֶּלֶךְ וְאֵת בְּנֵי הַתַּֽעֲרֻבוֹת וַיָּשָׁב שֹׁמְרֽוֹן׃
25 ೨೫ ಇಸ್ರಾಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
וַיְחִי אֲמַצְיָהוּ בֶן־יוֹאָשׁ מֶלֶךְ יְהוּדָה אַחֲרֵי מוֹת יוֹאָשׁ בֶּן־יְהוֹאָחָז מֶלֶךְ יִשְׂרָאֵל חֲמֵשׁ עֶשְׂרֵה שָׁנָֽה׃
26 ೨೬ ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.
וְיֶתֶר דִּבְרֵי אֲמַצְיָהוּ הָרִאשֹׁנִים וְהָאַחֲרוֹנִים הֲלֹא הִנָּם כְּתוּבִים עַל־סֵפֶר מַלְכֵי־יְהוּדָה וְיִשְׂרָאֵֽל׃
27 ೨೭ ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
וּמֵעֵת אֲשֶׁר־סָר אֲמַצְיָהוּ מֵאַחֲרֵי יְהוָה וַיִּקְשְׁרוּ עָלָיו קֶשֶׁר בִּירוּשָׁלַ͏ִם וַיָּנָס לָכִישָׁה וַיִּשְׁלְחוּ אַחֲרָיו לָכִישָׁה וַיְמִיתֻהוּ שָֽׁם׃
28 ೨೮ ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು.
וַיִּשָּׂאֻהוּ עַל־הַסּוּסִים וַֽיִּקְבְּרוּ אֹתוֹ עִם־אֲבֹתָיו בְּעִיר יְהוּדָֽה׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 25 >