< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 2 >

1 ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.
Odsodil sem pa v sebi to, da zopet ne pridem v žalosti k vam.
2 ನಾನೇ ನಿಮ್ಮನ್ನು ದುಃಖಪಡಿಸಿದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ?
Kajti če jaz žalostim vas, kdo je, kteri bi me razveselil, če ne ta, kteri se žalostí po meni?
3 ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.
In napisal sem vam to isto, da ne bi žalosti imel, ko pridem, od teh, za ktere bi se imel radovati, nadejajoč se za vas vse, da je moja radost vseh vas radost.
4 ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.
Kajti z veliko stisko in s srčno težavo sem vam pisal z mnogimi solzami, ne da se žalostite, nego da ljubezen spoznate, ktero imam obilno do vas.
5 ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ.
Če je pa kdo vžalostil, ni mene vžalostil, le nekoliko, da ne obtežujem vseh vas.
6 ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ ಆ ಶಿಕ್ಷೆಯೇ ಸಾಕು.
Dosti je takemu ta kazen od več njih;
7 ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.
Tako da nasproti rajši vi odpustite in potolažite, da bi kako preobilna žalost ne utopila takega.
8 ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Za to vas opominjam, da potrdite do njega ljubezen.
9 ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.
Kajti za to sem tudi pisal, da spoznam izkušenost vašo; je li ste v vsem poslušni.
10 ೧೦ ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.
Komur pa kaj odpustite, njemu tudi jaz; kajti jaz, če sem kaj odpustil, komur sem odpustil, za voljo vas sem pred obličjem Kristusovim,
11 ೧೧ ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.
Da bi nas ne ukanil satan, kajti niso nam njegove misli neznane.
12 ೧೨ ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.
A ko sem prišel v Troado za voljo evangelja Kristusovega, in so mi bila vrata odprta v Gospodu,
13 ೧೩ ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.
Nisem imel mira v duhu svojem, ker nisem našel Tita brata; nego vzemši slovo od njih, šel sem ven v Macedonijo.
14 ೧೪ ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.
Ali Bogu hvala, kteri nam vsegdar zmago daje v Kristusu, in dišavo znanosti, svoje razodeva po nas na vsakem mestu.
15 ೧೫ ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.
Ker smo Kristusova prijetna dišava Bogu v teh, kteri se zveličujejo in v tistih, kteri se pogubljajo.
16 ೧೬ ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?
Enim je dihet smrti za smrt, a drugim dihet življenja za življenje, in za to kdo je zmožen?
17 ೧೭ ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.
Kajti nismo kakor mnogi, kteri preobračajo besedo Božjo, nego kakor iz čistote, nego kakor iz Boga, pričo Boga v Kristusu govorimo;

< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 2 >