< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 3 >

1 ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ?
¿Parece que estamos tratando nuevamente de recomendarnos a nosotros mismos? o ¿necesitamos, presentarles o pedirles como lo han hecho algunos, cartas de recomendaciones?
2 ಸ್ವತಃ “ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ.
Ustedes mismos son nuestra carta, cuya escritura está en nuestro corazón, abierta para la lectura y el conocimiento de todos los hombres;
3 ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.
Porque ustedes son claramente una carta de Cristo, el fruto de nuestra obra, registrada no con tinta, sino con el Espíritu del Dios viviente; no en piedra, sino en corazones de carne.
4 ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ.
Y esta es la confianza que tenemos en Dios por medio de Cristo:
5 ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.
No que seamos autosuficientes como si pudiéramos hacer por nosotros mismos algo; pero nuestro poder proviene de Dios;
6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.
Él cuál nos ha hecho capaces de ser servidores de un nuevo pacto no de la letra, sino del Espíritu: porque la letra mata, pero el Espíritu da vida.
7 ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.
Porque si la operación de la ley, dando muerte, grabada en letras en piedra, venía con gloria, entonces los ojos de los hijos de Israel debían ser apartados de la faz de Moisés por causa de su gloria, una gloria que era solo por un tiempo:
8 ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ?
¿La operación del Espíritu no tendrá una gloria mucho mayor?
9 ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ?
Porque si la operación de la ley, que produce el castigo, tuvo su gloria, ¿cuánto más grande será la operación del Espíritu que causa la justificación?
10 ೧೦ ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು.
Porque la gloria del primero ya no parece ser la gloria, a causa de la mayor gloria de lo que viene después.
11 ೧೧ ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?
Porque si lo que perece tuvo su gloria, mucho más glorioso será lo que permanece.
12 ೧೨ ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.
Teniendo tal esperanza, hablamos con mucha franqueza,
13 ೧೩ ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ.
y no somos como Moisés, que se cubrió la cara con un velo, para que los hijos de Israel no vean claramente que aquel resplandor se iba apagando.
14 ೧೪ ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.
Pero sus mentes fueron cerradas: porque hasta el día de hoy la lectura del antiguo pacto, el mismo velo aún no se ha alzado; aunque sea quitado en Cristo.
15 ೧೫ ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ.
Pero hasta el día de hoy, al leer la ley de Moisés, un velo está sobre su corazón.
16 ೧೬ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.
Pero cuando se conviertan al Señor, el velo se quitará.
17 ೧೭ ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.
Ahora el Señor es el Espíritu; y donde está el Espíritu del Señor, allí está el corazón libre.
18 ೧೮ ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
Pero todos nosotros, mirando con la cara descubierta como en un espejo la gloria del Señor, somos transformados de gloria en gloria, en la misma imagen como por el Espíritu del Señor.

< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 3 >