< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 4 >

1 ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.
Затуй, като имаме това служение, както и придобихме милост, не се обезсърдчаваме;
2 ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
но се отрекохме от тайни и срамотни дела, и не постъпваме лукаво, нито изопачаваме Божието слово, но, като изявяваме истината, препоръчваме себе си на съвестта на всеки човек пред Бога.
3 ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.
Но ако благовестието, което проповядваме, е покрито, то е покрито за тия, които погиват,
4 ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. (aiōn g165)
за тия, невярващите, чийто ум богът на този свят е заслепил, за да ги не озари светлината от славното благовестие на Христа, Който е образ на Бога. (aiōn g165)
5 ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.
(Защото ние не проповядваме себе си, но Христа Исуса като Господ, а себе си като ваши слуги заради Исуса).
6 ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
Понеже Бог, Който е казал на светлината да изгрее из тъмнината, Той е, Който е огрял в сърдцата ни, за да се просвети света с познаването на Божията слава в лицето Исус Христово.
7 ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.
А ние имаме това съкровище в пръстни съдове, за да се види, че превъзходната сила е от Бога, а не от нас.
8 ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
Угнетявани сме отвсякъде, но не сме утеснени; в недоумение сме, но не до отчаяние;
9 ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.
гонени сме, но не оставени; повалени сме, но не погубени.
10 ೧೦ ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.
Всякога носим на тялото си убиването на [Господа] Исуса, за да се яви на тялото ни и живота на Исуса.
11 ೧೧ ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
Защото ние живите винаги сме предавани на смърт за Исуса, за да се яви и живота на Исуса в нашата смъртна плът.
12 ೧೨ ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.
Така щото смъртта действува в нас, а животът във вас.
13 ೧೩ “ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.
А като имаме същият дух на вяра, според писаното: "Повярвах, за това и говорих", то и ние, понеже вярваме, затова и говорим;
14 ೧೪ ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
понеже знаем, че Тоя, Който е възкресил Господа Исуса, ще възкреси и нас заедно с Исуса, и ще ни представи заедно с вас.
15 ೧೫ ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.
Защото всичко това е заради вас, тъй щото благодатта, увеличена чрез мнозината, които са я получили, да умножи благодарението, за Божията слава.
16 ೧೬ ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
Затова ние не се обезсърдчаваме: но ако и да тлее външният наш човек, пак вътрешният всеки ден се подновява.
17 ೧೭ ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. (aiōnios g166)
Защото нашата привременна лека скръб произвежда все повече и повече една вечна тежина на слава за нас, (aiōnios g166)
18 ೧೮ ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು. (aiōnios g166)
които не гледаме на видимите, но на невидимите; защото видимите са временни, а невидимите вечни. (aiōnios g166)

< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 4 >