< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 5 >

1 ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. (aiōnios g166)
わたしたちの住んでいる地上の幕屋がこわれると、神からいただく建物、すなわち天にある、人の手によらない永遠の家が備えてあることを、わたしたちは知っている。 (aiōnios g166)
2 ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.
そして、天から賜わるそのすみかを、上に着ようと切に望みながら、この幕屋の中で苦しみもだえている。
3 ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು.
それを着たなら、裸のままではいないことになろう。
4 ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.
この幕屋の中にいるわたしたちは、重荷を負って苦しみもだえている。それを脱ごうと願うからではなく、その上に着ようと願うからであり、それによって、死ぬべきものがいのちにのまれてしまうためである。
5 ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ.
わたしたちを、この事にかなう者にして下さったのは、神である。そして、神はその保証として御霊をわたしたちに賜わったのである。
6 ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ
だから、わたしたちはいつも心強い。そして、肉体を宿としている間は主から離れていることを、よく知っている。
7 ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ.
わたしたちは、見えるものによらないで、信仰によって歩いているのである。
8 ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.
それで、わたしたちは心強い。そして、むしろ肉体から離れて主と共に住むことが、願わしいと思っている。
9 ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.
そういうわけだから、肉体を宿としているにしても、それから離れているにしても、ただ主に喜ばれる者となるのが、心からの願いである。
10 ೧೦ ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
なぜなら、わたしたちは皆、キリストのさばきの座の前にあらわれ、善であれ悪であれ、自分の行ったことに応じて、それぞれ報いを受けねばならないからである。
11 ೧೧ ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.
このようにわたしたちは、主の恐るべきことを知っているので、人々に説き勧める。わたしたちのことは、神のみまえには明らかになっている。さらに、あなたがたの良心にも明らかになるようにと望む。
12 ೧೨ ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.
わたしたちは、あなたがたに対して、またもや自己推薦をしようとするのではない。ただわたしたちを誇る機会を、あなたがたに持たせ、心を誇るのではなくうわべだけを誇る人々に答えうるようにさせたいのである。
13 ೧೩ ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.
もしわたしたちが、気が狂っているのなら、それは神のためであり、気が確かであるのなら、それはあなたがたのためである。
14 ೧೪ ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.
なぜなら、キリストの愛がわたしたちに強く迫っているからである。わたしたちはこう考えている。ひとりの人がすべての人のために死んだ以上、すべての人が死んだのである。
15 ೧೫ ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.
そして、彼がすべての人のために死んだのは、生きている者がもはや自分のためにではなく、自分のために死んでよみがえったかたのために、生きるためである。
16 ೧೬ ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.
それだから、わたしたちは今後、だれをも肉によって知ることはすまい。かつてはキリストを肉によって知っていたとしても、今はもうそのような知り方をすまい。
17 ೧೭ ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
だれでもキリストにあるならば、その人は新しく造られた者である。古いものは過ぎ去った、見よ、すべてが新しくなったのである。
18 ೧೮ ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;
しかし、すべてこれらの事は、神から出ている。神はキリストによって、わたしたちをご自分に和解させ、かつ和解の務をわたしたちに授けて下さった。
19 ೧೯ ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.
すなわち、神はキリストにおいて世をご自分に和解させ、その罪過の責任をこれに負わせることをしないで、わたしたちに和解の福音をゆだねられたのである。
20 ೨೦ ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.
神がわたしたちをとおして勧めをなさるのであるから、わたしたちはキリストの使者なのである。そこで、キリストに代って願う、神の和解を受けなさい。
21 ೨೧ ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
神はわたしたちの罪のために、罪を知らないかたを罪とされた。それは、わたしたちが、彼にあって神の義となるためなのである。

< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 5 >