< ಯೋಹಾನನು ಬರೆದ ಎರಡನೆಯ ಪತ್ರಿಕೆ 1 >

1 ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;
Kutoka kwa mzee kwenda kwa mwanamke mteule na watoto wake, ambao niwapendao katika kweli na si mimi tu, bali na wote wale wanao ifahamu kweli,
2 ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. (aiōn g165)
kwa sababu ya kweli iliyomo ndani yetu na itakayodumu pamoja nasi milele. (aiōn g165)
3 ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.
Neema, rehema, amani zitakuwa nasi kutoka kwa Mungu Baba na kutoka kwa Yesu Kristo, Mwana wa Baba, katika kweli na pendo.
4 ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು.
Ninafurahi sana kwamba nimegundua baadhi ya watoto wanaenenda katika kweli, kama vile tu tulivyoipokea amri hii kutoka kwa Baba.
5 ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
Na sasa nakusihi wewe, mwanamke, siyo kwamba nakuandikia amri mpya, bali ile tuliyokuwa nayo tokea mwanzo, kwamba tunapaswa kupendana sisi kwa sisi. Na huu ndiyo upendo, tunaopaswa kuenenda, kulingana na amri yake.
6 ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
Hii ndiyo ile amri, kama mlivyoisikia tokea mwanzo, kwamba mnapaswa kuenenda katika hiyo.
7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
Kwa kuwa wadanganyifu wengi wamesambaa katika ulimwengu, na hawakiri kwamba Yesu Kristo alikuja katika mwili. Huyu ndiye mdanganyifu na mpinga Kristo.
8 ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
Jiangalieni wenyewe kwamba hampotezi mambo yale tuliyokwisha fanyia kazi, lakini ili kwamba mweze kuipokea tuzo kamili.
9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.
Yeyote aendeleae mbele na hadumu katika fundisho la Kristo, hana Mungu. Yeye adumuye katika fundisho anaye Baba na Mwana pia.
10 ೧೦ ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.
Kama mtu anakuja kwenu na haleti fundisho hili, msimkaribishe katika nyumba zenu na msimsalimie.
11 ೧೧ ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
Kwa kuwa amsalimuye hushiriki katika matendo yake maovu.
12 ೧೨ ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.
Ninayo mambo mengi ya kukuandikia, na sikutaka kuyaandika kwa karatasi na wino. Lakini natumaini kuja kwenu na kuongea uso kwa uso, kwamba furaha yetu ipate kufanywa kamili.
13 ೧೩ ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.
Watoto wa dada yenu mteule wanawasalimia.

< ಯೋಹಾನನು ಬರೆದ ಎರಡನೆಯ ಪತ್ರಿಕೆ 1 >