< ಅರಸುಗಳು - ದ್ವಿತೀಯ ಭಾಗ 17 >

1 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.
فِي ٱلسَّنَةِ ٱلثَّانِيةَ عَشْرَةَ لِآحَازَ مَلِكِ يَهُوذَا، مَلَكَ هُوشَعُ بْنُ أَيْلَةَ فِي ٱلسَّامِرَةِ عَلَى إِسْرَائِيلَ تِسْعَ سِنِينَ.١
2 ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
وَعَمِلَ ٱلشَّرَّ فِي عَيْنَيِ ٱلرَّبِّ، وَلَكِنْ لَيْسَ كَمُلُوكِ إِسْرَائِيلَ ٱلَّذِينَ كَانُوا قَبْلَهُ.٢
3 ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.
وَصَعِدَ عَلَيْهِ شَلْمَنْأَسَرُ مَلِكُ أَشُّورَ، فَصَارَ لَهُ هُوشَعُ عَبْدًا وَدَفَعَ لَهُ جِزْيَةً.٣
4 ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
وَوَجَدَ مَلِكُ أَشُّورَ فِي هُوشَعَ خِيَانَةً، لِأَنَّهُ أَرْسَلَ رُسُلًا إِلَى سَوَا مَلِكِ مِصْرَ، وَلَمْ يُؤَدِّ جِزْيَةً إِلَى مَلِكِ أَشُّورَ حَسَبَ كُلِّ سَنَةٍ، فَقَبَضَ عَلَيْهِ مَلِكُ أَشُّورَ وَأَوْثَقَهُ فِي ٱلسِّجْنِ.٤
5 ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.
وَصَعِدَ مَلِكُ أَشُّورَ عَلَى كُلِّ ٱلْأَرْضِ، وَصَعِدَ إِلَى ٱلسَّامِرَةِ وَحَاصَرَهَا ثَلَاثَ سِنِينَ.٥
6 ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
فِي ٱلسَّنَةِ ٱلتَّاسِعَةِ لِهُوشَعَ أَخَذَ مَلِكُ أَشُّورَ ٱلسَّامِرَةَ، وَسَبَى إِسْرَائِيلَ إِلَى أَشُّورَ وَأَسْكَنَهُمْ فِي حَلَحَ وَخَابُورَ نَهْرِ جُوزَانَ وَفِي مُدُنِ مَادِي.٦
7 ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
وَكَانَ أَنَّ بَنِي إِسْرَائِيلَ أَخْطَأُوا إِلَى ٱلرَّبِّ إِلَهِهِمِ ٱلَّذِي أَصْعَدَهُمْ مِنْ أَرْضِ مِصْرَ مِنْ تَحْتِ يَدِ فِرْعَوْنَ مَلِكِ مِصْرَ، وَٱتَّقَوْا آلِهَةً أُخْرَى،٧
8 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.
وَسَلَكُوا حَسَبَ فَرَائِضِ ٱلْأُمَمِ ٱلَّذِينَ طَرَدَهُمُ ٱلرَّبُّ مِنْ أَمَامِ بَنِي إِسْرَائِيلَ وَمُلُوكِ إِسْرَائِيلَ ٱلَّذِينَ أَقَامُوهُمْ.٨
9 ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.
وَعَمِلَ بَنُو إِسْرَائِيلَ سِرًّا ضِدَّ ٱلرَّبِّ إِلَهِهِمْ أُمُورًا لَيْسَتْ بِمُسْتَقِيمَةٍ، وَبَنَوْا لِأَنْفُسِهِمْ مُرْتَفَعَاتٍ فِي جَمِيعِ مُدُنِهِمْ، مِنْ بُرْجِ ٱلنَّوَاطِيرِ إِلَى ٱلْمَدِينَةِ ٱلْمُحَصَّنَةِ.٩
10 ೧೦ ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.
وَأَقَامُوا لِأَنْفُسِهِمْ أَنْصَابًا وَسَوَارِيَ عَلَى كُلِّ تَلٍّ عَالٍ وَتَحْتَ كُلِّ شَجَرَةٍ خَضْرَاءَ.١٠
11 ೧೧ ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.
وَأَوْقَدُوا هُنَاكَ عَلَى جَمِيعِ ٱلْمُرْتَفَعَاتِ مِثْلَ ٱلْأُمَمِ ٱلَّذِينَ سَاقَهُمُ ٱلرَّبُّ مِنْ أَمَامِهِمْ، وَعَمِلُوا أُمُورًا قَبِيحَةً لِإِغَاظَةِ ٱلرَّبِّ.١١
12 ೧೨ “ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.
وَعَبَدُوا ٱلْأَصْنَامَ ٱلَّتِي قَالَ ٱلرَّبُّ لَهُمْ عَنْهَا: «لَا تَعْمَلُوا هَذَا ٱلْأَمْرَ».١٢
13 ೧೩ ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.
وَأَشْهَدَ ٱلرَّبُّ عَلَى إِسْرَائِيلَ وَعَلَى يَهُوذَا عَنْ يَدِ جَمِيعِ ٱلْأَنْبِيَاءِ وَكُلِّ رَاءٍ قَائِلًا: «ٱرْجِعُوا عَنْ طُرُقِكُمُ ٱلرَّدِيئَةِ وَٱحْفَظُوا وَصَايَايَ، فَرَائِضِي، حَسَبَ كُلِّ ٱلشَّرِيعَةِ ٱلَّتِي أَوْصَيْتُ بِهَا آبَاءَكُمْ، وَٱلَّتِي أَرْسَلْتُهَا إِلَيْكُمْ عَنْ يَدِ عَبِيدِي ٱلْأَنْبِيَاءِ».١٣
14 ೧೪ ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.
فَلَمْ يَسْمَعُوا بَلْ صَلَّبُوا أَقْفِيَتَهُمْ كَأَقْفِيَةِ آبَائِهِمِ ٱلَّذِينَ لَمْ يُؤْمِنُوا بِٱلرَّبِّ إِلَهِهِمْ.١٤
15 ೧೫ ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
وَرَفَضُوا فَرَائِضَهُ وَعَهْدَهُ ٱلَّذِي قَطَعَهُ مَعَ آبَائِهِمْ وَشَهَادَاتِهِ ٱلَّتِي شَهِدَ بِهَا عَلَيْهِمْ، وَسَارُوا وَرَاءَ ٱلْبَاطِلِ، وَصَارُوا بَاطِلًا وَرَاءَ ٱلْأُمَمِ ٱلَّذِينَ حَوْلَهُمُ، ٱلَّذِينَ أَمَرَهُمُ ٱلرَّبُّ أَنْ لَا يَعْمَلُوا مِثْلَهُمْ.١٥
16 ೧೬ ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
وَتَرَكُوا جَمِيعَ وَصَايَا ٱلرَّبِّ إِلَهِهِمْ وَعَمِلُوا لِأَنْفُسِهِمْ مَسْبُوكَاتٍ عِجْلَيْنِ، وَعَمِلُوا سَوَارِيَ، وَسَجَدُوا لِجَمِيعِ جُنْدِ ٱلسَّمَاءِ، وَعَبَدُوا ٱلْبَعْلَ.١٦
17 ೧೭ ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
وَعَبَّرُوا بَنِيهِمْ وَبَنَاتِهِمْ فِي ٱلنَّارِ، وَعَرَفُوا عِرَافَةً وَتَفَاءَلُوا، وَبَاعُوا أَنْفُسَهُمْ لِعَمَلِ ٱلشَّرِّ فِي عَيْنَيِ ٱلرَّبِّ لِإِغَاظَتِهِ.١٧
18 ೧೮ ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
فَغَضِبَ ٱلرَّبُّ جِدًّا عَلَى إِسْرَائِيلَ وَنَحَّاهُمْ مِنْ أَمَامِهِ، وَلَمْ يَبْقَ إِلَّا سِبْطُ يَهُوذَا وَحْدَهُ.١٨
19 ೧೯ ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.
وَيَهُوذَا أَيْضًا لَمْ يَحْفَظُوا وَصَايَا ٱلرَّبِّ إِلَهِهِمْ، بَلْ سَلَكُوا فِي فَرَائِضِ إِسْرَائِيلَ ٱلَّتِي عَمِلُوهَا.١٩
20 ೨೦ ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
فَرَذَلَ ٱلرَّبُّ كُلَّ نَسْلِ إِسْرَائِيلَ، وَأَذَلَّهُمْ وَدَفَعَهُمْ لِيَدِ نَاهِبِينَ حَتَّى طَرَحَهُمْ مِنْ أَمَامِهِ،٢٠
21 ೨೧ ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.
لِأَنَّهُ شَقَّ إِسْرَائِيلَ عَنْ بَيْتِ دَاوُدَ، فَمَلَّكُوا يَرُبْعَامَ بْنَ نَبَاطَ، فَأَبْعَدَ يَرُبْعَامُ إِسْرَائِيلَ مِنْ وَرَاءِ ٱلرَّبِّ وَجَعَلَهُمْ يُخْطِئُونَ خَطِيَّةً عَظِيمَةً.٢١
22 ೨೨ ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.
وَسَلَكَ بَنُو إِسْرَائِيلَ فِي جَمِيعِ خَطَايَا يَرُبْعَامَ ٱلَّتِي عَمِلَ. لَمْ يَحِيدُوا عَنْهَا٢٢
23 ೨೩ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
حَتَّى نَحَّى ٱلرَّبُّ إِسْرَائِيلَ مِنْ أَمَامِهِ كَمَا تَكَلَّمَ عَنْ يَدِ جَمِيعِ عَبِيدِهِ ٱلْأَنْبِيَاءِ، فَسُبِيَ إِسْرَائِيلُ مِنْ أَرْضِهِ إِلَى أَشُّورَ إِلَى هَذَا ٱلْيَوْمِ.٢٣
24 ೨೪ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
وَأَتَى مَلِكُ أَشُّورَ بِقَوْمٍ مِنْ بَابِلَ وَكُوثَ وَعَوَّا وَحَمَاةَ وَسَفَرْوَايِمَ، وَأَسْكَنَهُمْ فِي مُدُنِ ٱلسَّامِرَةِ عِوَضًا عَنْ بَنِي إِسْرَائِيلَ، فَٱمْتَلَكُوا ٱلسَّامِرَةَ وَسَكَنُوا فِي مُدُنِهَا.٢٤
25 ೨೫ ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.
وَكَانَ فِي ٱبْتِدَاءِ سَكَنِهِمْ هُنَاكَ أَنَّهُمْ لَمْ يَتَّقُوا ٱلرَّبَّ، فَأَرْسَلَ ٱلرَّبُّ عَلَيْهِمِ ٱلسِّبَاعَ فَكَانَتْ تَقْتُلُ مِنْهُمْ.٢٥
26 ೨೬ ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.
فَكَلَّمُوا مَلِكَ أَشُّورَ قَائِلِينَ: «إِنَّ ٱلْأُمَمَ ٱلَّذِينَ سَبَيْتَهُمْ وَأَسْكَنْتَهُمْ فِي مُدُنِ ٱلسَّامِرَةِ، لَا يَعْرِفُونَ قَضَاءَ إِلَهِ ٱلْأَرْضِ، فَأَرْسَلَ عَلَيْهِمِ ٱلسِّبَاعَ فَهِيَ تَقْتُلُهُمْ لِأَنَّهُمْ لَا يَعْرِفُونَ قَضَاءَ إِلَهِ ٱلْأَرْضِ».٢٦
27 ೨೭ ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು.
فَأَمَرَ مَلِكُ أَشُّورَ قَائِلًا: «ٱبْعَثُوا إِلَى هُنَاكَ وَاحِدًا مِنَ ٱلْكَهَنَةِ ٱلَّذِينَ سَبَيْتُمُوهُمْ مِنْ هُنَاكَ فَيَذْهَبَ وَيَسْكُنَ هُنَاكَ، وَيُعَلِّمَهُمْ قَضَاءَ إِلَهِ ٱلْأَرْضِ».٢٧
28 ೨೮ ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.
فَأَتَى وَاحِدٌ مِنَ ٱلْكَهَنَةِ ٱلَّذِينَ سَبَوْهُمْ مِنَ ٱلسَّامِرَةِ، وَسَكَنَ فِي بَيْتِ إِيلَ وَعَلَّمَهُمْ كَيْفَ يَتَّقُونَ ٱلرَّبَّ.٢٨
29 ೨೯ ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.
فَكَانَتْ كُلُّ أُمَّةٍ تَعْمَلُ آلِهَتَهَا وَوَضَعُوهَا فِي بُيُوتِ ٱلْمُرْتَفَعَاتِ ٱلَّتِي عَمِلَهَا ٱلسَّامِرِيُّونَ، كُلُّ أُمَّةٍ فِي مُدُنِهَا ٱلَّتِي سَكَنَتْ فِيهَا.٢٩
30 ೩೦ ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.
فَعَمِلَ أَهْلُ بَابِلَ سُكُّوثَ بَنُوثَ، وَأَهْلُ كُوثَ عَمِلُوا نَرْجَلَ، وَأَهْلُ حَمَاةَ عَمِلُوا أَشِيمَا،٣٠
31 ೩೧ ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.
وَٱلْعُوِّيُّونَ عَمِلُوا نِبْحَزَ وَتَرْتَاقَ، وَٱلسَّفَرْوَايِمِيُّونَ كَانُوا يُحْرِقُونَ بَنِيهِمْ بِٱلنَّارِ لِأَدْرَمَّلَكَ وَعَنَمَّلَكَ إِلَهَيْ سَفَرْوَايِمَ.٣١
32 ೩೨ ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.
فَكَانُوا يَتَّقُونَ ٱلرَّبَّ، وَيَعْمَلُونَ لِأَنْفُسِهِمْ مِنْ أَطْرَافِهِمْ كَهَنَةَ مُرْتَفَعَاتٍ، كَانُوا يُقَرِّبُونَ لِأَجْلِهِمْ فِي بُيُوتِ ٱلْمُرْتَفَعَاتِ.٣٢
33 ೩೩ ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.
كَانُوا يَتَّقُونَ ٱلرَّبَّ وَيَعْبُدُونَ آلِهتَهُمْ كَعَادَةِ ٱلْأُمَمِ ٱلَّذِينَ سَبَوْهُمْ مِنْ بَيْنِهِمْ٣٣
34 ೩೪ ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.
إِلَى هَذَا ٱلْيَوْمِ يَعْمَلُونَ كَعَادَاتِهِمِ ٱلْأُوَلِ. لَا يَتَّقُونَ ٱلرَّبَّ وَلَا يَعْمَلُونَ حَسَبَ فَرَائِضِهِمْ وَعَوَائِدِهِمْ وَلَا حَسَبَ ٱلشَّرِيعَةِ وَٱلْوَصِيَّةِ ٱلَّتِي أَمَرَ بِهَا ٱلرَّبُّ بَنِي يَعْقُوبَ، ٱلَّذِي جَعَلَ ٱسْمَهُ إِسْرَائِيلَ.٣٤
35 ೩೫ ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.
وَقَطَعَ ٱلرَّبُّ مَعَهُمْ عَهْدًا وَأَمَرَهُمْ قَائِلًا: «لَا تَتَّقُوا آلِهَةً أُخْرَى، وَلَا تَسْجُدُوا لَهَا وَلَا تَعْبُدُوهَا وَلَا تَذْبَحُوا لَهَا.٣٥
36 ೩೬ ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.
بَلْ إِنَّمَا ٱتَّقُوا ٱلرَّبَّ ٱلَّذِي أَصْعَدَكُمْ مِنْ أَرْضِ مِصْرَ بِقُوَّةٍ عَظِيمَةٍ وَذِرَاعٍ مَمْدُودَةٍ، وَلَهُ ٱسْجُدُوا، وَلَهُ ٱذْبَحُوا.٣٦
37 ೩೭ ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.
وَٱحْفَظُوا ٱلْفَرَائِضَ وَٱلْأَحْكَامَ وَٱلشَّرِيعَةَ وَٱلْوَصِيَّةَ ٱلَّتِي كَتَبَهَا لَكُمْ لِتَعْمَلُوا بِهَا كُلَّ ٱلْأَيَّامِ، وَلَا تَتَّقُوا آلِهَةً أُخْرَى.٣٧
38 ೩೮ ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.
وَلَا تَنْسَوْا ٱلْعَهْدَ ٱلَّذِي قَطَعْتُهُ مَعَكُمْ، وَلَا تَتَّقُوا آلِهَةً أُخْرَى.٣٨
39 ೩೯ ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.
بَلْ إِنَّمَا ٱتَّقُوا ٱلرَّبَّ إِلَهَكُمْ وَهُوَ يُنْقِذُكُمْ مِنْ أَيْدِي جَمِيعِ أَعْدَائِكُمْ».٣٩
40 ೪೦ ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.
فَلَمْ يَسْمَعُوا بَلْ عَمِلُوا حَسَبَ عَادَتِهِمِ ٱلْأُولَى.٤٠
41 ೪೧ ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.
فَكَانَ هَؤُلَاءِ ٱلْأُمَمُ يَتَّقُونَ ٱلرَّبَّ، وَيَعْبُدُونَ تَمَاثِيلَهُمْ، وَأَيْضًا بَنُوهُمْ وَبَنُو بَنِيهِمْ. فَكَمَا عَمِلَ آبَاؤُهُمْ هَكَذَا هُمْ عَامِلُونَ إِلَى هَذَا ٱلْيَوْمِ.٤١

< ಅರಸುಗಳು - ದ್ವಿತೀಯ ಭಾಗ 17 >