< ಅರಸುಗಳು - ದ್ವಿತೀಯ ಭಾಗ 18 >

1 ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.
Nell'anno terzo di Osea figlio di Ela, re di Israele, divenne re Ezechia figlio di Acaz, re di Giuda.
2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.
Quando egli divenne re, aveva venticinque anni; regnò ventinove anni in Gerusalemme. Sua madre si chiamava Abi, figlia di Zaccaria.
3 ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
Fece ciò che è retto agli occhi del Signore, secondo quanto aveva fatto Davide suo antenato.
4 ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.
Egli eliminò le alture e frantumò le stele, abbattè il palo sacro e fece a pezzi il serpente di bronzo, eretto da Mosè; difatti fino a quel tempo gli Israeliti gli bruciavano incenso e lo chiamavano Necustan.
5 ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.
Egli confidò nel Signore, Dio di Israele. Fra tutti i re di Giuda nessuno fu simile a lui, né fra i suoi successori né fra i suoi predecessori.
6 ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
Attaccato al Signore, non se ne allontanò; osservò i decreti che il Signore aveva dati a Mosè.
7 ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.
Il Signore fu con Ezechia e questi riuscì in tutte le iniziative. Egli si ribellò al re d'Assiria e non gli fu sottomesso.
8 ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.
Sconfisse i Filistei fino a Gaza e ai suoi confini, dal più piccolo villaggio fino alle fortezze.
9 ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.
Nell'anno quarto del re Ezechia, cioè l'anno settimo di Osea figlio di Ela, re di Israele, Salmanassar re di Assiria marciò contro Samaria e la assediò.
10 ೧೦ ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.
Dopo tre anni la prese; nell'anno sesto di Ezechia, cioè l'anno nono di Osea re di Israele, Samaria fu presa.
11 ೧೧ ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.
Il re d'Assiria deportò gli Israeliti in Assiria, destinandoli a Chelach, al Cabor, fiume del Gozan, e alle città della Media.
12 ೧೨ ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.
Ciò accadde perché quelli non avevano ascoltato la voce del Signore loro Dio e ne avevano trasgredito l'alleanza e non avevano ascoltato né messo in pratica quanto aveva loro comandato Mosè, servo di Dio.
13 ೧೩ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
Nell'anno quattordici del re Ezechia, Sennàcherib re di Assiria assalì e prese tutte le fortezze di Giuda.
14 ೧೪ ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.
Ezechia, re di Giuda, mandò a dire al re d'Assiria in Lachis: «Ho peccato; allontànati da me e io sopporterò quanto mi imporrai». Il re di Assiria impose a Ezechia re di Giuda trecento talenti d'argento e trenta talenti d'oro.
15 ೧೫ ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.
Ezechia consegnò tutto il denaro che si trovava nel tempio e nei tesori della reggia.
16 ೧೬ ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.
In quel tempo Ezechia staccò dalle porte del tempio del Signore e dagli stipiti l'oro, di cui egli stesso re di Giuda li aveva rivestiti, e lo diede al re d'Assiria.
17 ೧೭ ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.
Il re d'Assiria mandò il tartan, il capo delle guardie e il gran coppiere da Lachis a Gerusalemme, al re Ezechia, con un grande esercito. Costoro salirono e giunsero a Gerusalemme; si fermarono al canale della piscina superiore, sulla strada del campo del lavandaio.
18 ೧೮ ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.
Essi chiesero del re e incontro a loro vennero Eliakìm figlio di Chelkia, il maggiordomo, Sebna lo scriba e Ioach figlio di Asaf, l'archivista.
19 ೧೯ ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, “ನಿನ್ನ ಭರವಸಕ್ಕೆ ಯಾವ ಆಧಾರವುಂಟು?
Il gran coppiere disse loro: «Riferite a Ezechia: Dice il gran re, il re d'Assiria: Che fiducia è quella su cui ti appoggi?
20 ೨೦ ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?
Pensi forse che la semplice parola possa sostituire il consiglio e la forza nella guerra? Ora, in chi confidi ribellandoti a me?
21 ೨೧ ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.
Ecco, tu confidi su questo sostegno di canna spezzata, che è l'Egitto, che penetra nella mano, forandola, a chi vi si appoggia; tale è il faraone re di Egitto per chiunque confida in lui.
22 ೨೨ ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
Se mi dite: Noi confidiamo nel Signore nostro Dio, non è forse quello stesso del quale Ezechia distrusse le alture e gli altari, ordinando alla gente di Giuda e di Gerusalemme: Vi prostrerete soltanto davanti a questo altare in Gerusalemme?
23 ೨೩ ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.
Ora vieni al mio signore, re d'Assiria; io ti darò duemila cavalli, se potrai procurarti cavalieri per essi.
24 ೨೪ ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.
Come potresti fare retrocedere uno solo dei più piccoli servi del mio signore? Eppure tu confidi nell'Egitto per i carri e i cavalieri.
25 ೨೫ ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.
Ora, non è forse secondo il volere del Signore che io sono venuto contro questo paese per distruggerlo? Il Signore mi ha detto: Và contro questo paese e distruggilo».
26 ೨೬ ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.
Eliakìm figlio di Chelkia, Sebna e Ioach risposero al gran coppiere: «Parla, ti prego, ai tuoi servi in aramaico, perché noi lo comprendiamo; non parlare in ebraico, mentre il popolo che è sulle mura ascolta».
27 ೨೭ ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.
Il gran coppiere replicò: «Forse io sono stato inviato al tuo signore e a te dal mio signore per pronunziare tali parole e non piuttosto agli uomini che stanno sulle mura, i quali saranno ridotti a mangiare i loro escrementi e a bere la loro urina con voi?».
28 ೨೮ ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
Il gran coppiere allora si alzò e gridò a gran voce in ebraico: «Udite la parola del gran re, del re d'Assiria:
29 ೨೯ ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು’
Dice il re: Non vi inganni Ezechia, poiché non potrà liberarvi dalla mia mano.
30 ೩೦ ಹಿಜ್ಕೀಯನು ನಿಮಗೆ, ‘ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ”
Ezechia non vi induca a confidare nel Signore, dicendo: Certo, il Signore ci libererà, questa città non sarà messa nelle mani del re d'Assiria.
31 ೩೧ ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
Non ascoltate Ezechia, poiché dice il re d'Assiria: Fate la pace con me e arrendetevi; allora ognuno potrà mangiare i frutti della sua vigna e dei suoi fichi, ognuno potrà bere l'acqua della sua cisterna,
32 ೩೨ ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.
finché io non venga per condurvi in un paese come il vostro, in un paese che produce frumento e mosto, in un paese ricco di pane e di vigne, in un paese di ulivi e di miele; voi vivrete e non morirete. Non ascoltate Ezechia che vi inganna, dicendovi: Il Signore ci libererà!
33 ೩೩ ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸಾಧ್ಯ?
Forse gli dei delle nazioni hanno liberato ognuno il proprio paese dalla mano del re d'Assiria?
34 ೩೪ ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?
Dove sono gli dei di Amat e di Arpad? Dove sono gli dei di Sefarvàim, di Ena e di Ivva? Hanno essi forse liberato Samaria dalla mia mano?
35 ೩೫ ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
Quali mai, fra tutti gli dei di quelle nazioni, hanno liberato il loro paese dalla mia mano? Potrà forse il Signore liberare Gerusalemme dalla mia mano?».
36 ೩೬ ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ.
Quelli tacquero e non gli risposero neppure una parola, perché l'ordine del re era: «Non rispondete loro».
37 ೩೭ ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Eliakìm figlio di Chelkia, il maggiordomo, Sebna lo scriba e Ioach figlio di Asaf, l'archivista, si presentarono a Ezechia con le vesti stracciate e gli riferirono le parole del gran coppiere.

< ಅರಸುಗಳು - ದ್ವಿತೀಯ ಭಾಗ 18 >