< ಅರಸುಗಳು - ದ್ವಿತೀಯ ಭಾಗ 19 >

1 ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
ထိုစကားကို ဟေဇကိမင်းကြီးသည် ကြားလျှင်၊ မိမိအဝတ်ကို ဆုတ်၍ လျှော်တေအဝတ်ကိုခြုံလျက် ဗိမာန်တော်သို့သွားလေ၏။
2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.
လျှော်တေအဝတ်ကိုဝတ်လျက်ရှိသောနန်းတောအုပ် ဧလျာကိမ်၊ စာရေးတော်ကြီးရှေဗန၊ အသက်ကြီးသော ယဇ်ပုရောဟိတ်တို့ကို အာမုတ်သား ပရောဖက် ဟေရှာလထံသို့ စေလွှတ်လေ၏။
3 ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.
ဟေဇကိမင်းမှာထားသော စကားဟူမူကား၊ ယနေ့သည် ဒုက္ခနေ့၊ ဆုံးမသောနေ့၊ ကဲ့ရဲ့ခြင်းကိုခံရသော နေ့ဖြစ်၏။ သားဘွားချိန်ရောက်၍ သားကို ဘွားနိုင် အောင် ခွန်အားမရှိ။
4 ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
အသက်ရှင်တော်မူသော ဘုရားသခင်ကို ကဲ့ရဲ့ စေခြင်းငှါ အာရှုရိရှင်ဘုရင်စေလွှတ်သော မိမိကျွန်ရှဗ ရှာခစကားကို သင်၏ဘုရားသခင် ထာဝရဘုရား ကြားတော်မူပါစေသော။ သင်၏ဘုရားသခင် ထာဝရ ဘုရားသည် ကိုယ်တော်တိုင်ကြားသော စကားကို ချေတော်မူပါစေသော။ သင်သည်လည်းကျန်ကြွင်းသော လူတို့အဘို့ ဆုတောင်းပဌနာပြုပါဟု ပြောစေခြင်းငှါ၊
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,
ဟေဇကိမင်းစေလွှတ်သော ကျွန်တို့သည် ဟေရှာယထံသို့ ရောက်လာကြ၏။
6 ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
ဟေရှာယကလည်း၊ ထာဝရဘုရား မိန့်တော်မူ သည်ကား၊ အာရှုရိရှင်ဘုရင်၏ ကျွန်တို့သည် ငါ့ကိုကဲ့ရဲ့ ၍၊ သင်သည်ကြားရသော စကားကြောင့် မကြောက် နှင့်။
7 ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.
ထိုမင်း၌ အခြားသော စိတ်သဘောကို ငါသွင်း ပေးမည်။ သူသည် သိတင်းကြား၍ မိမိပြည်သို့ ပြန်သွား လိမ့်မည်။ ထိုပြည်၌ ထားဖြင့် ငါဆုံးစေမည်ဟူသော စကားတော်ကို သင်တို့၏ သခင်အား ပြန်ကြားကြလော့ ဟုပြောဆို၏။
8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
ထိုအခါ အာရှိုရိရှင်ဘုရင်သည် လာခိရှမြို့မှ ထွက်သွားကြောင်းကို ရာဗရှာခကြားလျှင် ပြန်သွား၍ လိဗနမြို့ကိုရှင်ဘုရင်တိုက်နေသည်ကို တွေ့လေ၏။
9 ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
နောက်တဖန်ကုရှမင်းကြီး တိရက္ကသည် စစ်ချီ ၍လာပြီဟု သိတင်းကြားသောအခါ၊ ဟေဇကိမင်းထံသို့ တမန်တို့ကို စေလွှတ်ပြန်၍၊
10 ೧೦ ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ
၁၀သင်တို့သည် ယုဒမင်းကြီး ဟေဇကိကို ပြောရ သော စကားဟူမူကား၊ သင်ကိုးစားသော ဘုရားသခင်က၊ ယေရုရှလင်မြို့သည် အာရှုရိရှင်ဘုရင်လက်သို့ မရောက် ရဟူ၍ သင့်ကို မလှည့်စားစေနှင့်။
11 ೧೧ ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
၁၁အာရှုရိရှင်ဘုရင်တို့သည် ခပ်သိမ်းသော ပြည် တို့ကို လုပ်ကြံ၍ရှင်းရှင်းဖျက်ဆီးကြောင်းကို သင်သည် ကြားရပြီ။ ကိုယ်တိုင်လွတ်လိမ့်မည်လော။
12 ೧೨ ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
၁၂ငါ့ဘိုးဘေးတို့သည် ဖျက်ဆီးသော အမျိုးသား၊ ဂေါဇန်အမျိုးသား၊ ခါရန်အမျိုးသား၊ ရေဇပ်အမျိုးသား၊ တေလသာမြို့၌ရှိသော ဧဒင်အမျိုးသားတို့ကို သူတို့၏ ဘုရားများတို့သည် ကယ်ယူကြပြီလော။
13 ೧೩ ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”
၁၃ဟာမတ်မင်းကြီး၊ အာပဒ်မင်းကြီးနှင့် သေဖရ ဝိမ်မြို့၊ ဟေနမြို့၊ ဣဝါမြို့ကိုစိုးစံသော မင်းကြီးတို့သည် အဘယ်မှာရှိကြသနည်းဟု မှာလိုက်လေ၏။
14 ೧೪ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
၁၄ထိုမှာစာကို ဟေဇကိမင်းသည် သံတမန် လက်မှခံယူ၍ ကြည့်ပြီးလျှင် ဗိမာန်တော်သို့သွား၍ ထာဝရဘုရားရှေ့တော်၌ ဖြန့်ထားလေ၏။
15 ೧೫ ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
၁၅ထိုအခါဟေဇကိမင်းသည် ထာဝရဘုရား ရှေ့တော်၌ လျှောက်ဆိုသည်ကား၊ ခေရုဗိမ်ပေါ်မှာ ထိုင်တော်မူသော ဣသရေလအမျိုး၏ ဘုရားသခင် ထာဝရဘုရား၊ ကိုယ်တော်သည် ဘုရားသခင်ဖြစ်တော် မူ၏။ ကိုယ်တော်တပါးတည်းသာလျှင် မြေကြီးပေါ်မှာ ရှိသမျှသော အတိုင်းတိုင်းအပြည်ပြည်တို့၏ ဘုရားသခင် ဖြစ်တော်မူ၏။ ကိုယ်တော်သည် ကောင်းကင်နှင့်မြေကြီး ကို ဖန်ဆင်းတော်မူ၏။
16 ೧೬ ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
၁၆အိုထာဝရဘုရား၊ နားတော်ကို လှည့်၍ နား ထောင်တော်မူပါ။ အိုထာဝရဘုရား၊ မျက်စိတော်ကိုဖွင့်၍ ကြည့်ရှုတော်မူပါ။ သနာခရိပ်မင်းသည် အသက်ရှင်တော် မူသော ဘုရားသခင်ကို ကဲ့ရဲ့၍ပြောစေသော စကား အလုံးစုံတို့ကို မှတ်တော်မူပါ။
17 ೧೭ ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.
၁၇အိုထာဝရဘုရား၊ အကယ်စင်စစ် အာရှုရိ ရှင်ဘုရင်တို့သည် အတိုင်းတိုင်းအပြည်ပြည်တို့ကို ဖျက်ဆီး၍၊
18 ೧೮ ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
၁၈သူတို့၏ဘုရားများကို မီးထဲသို့ချပစ်ကြပါပြီ။ ထိုဘုရားတို့သည် ဘုရားမဟုတ်၊ လူလက်ဖြင့်လုပ်သော သစ်သားနှင့် ကျောက်ဖြစ်သောကြောင့် ပျက်စီးခြင်းသို့ ရောက်ကြပါပြီ။
19 ೧೯ ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
၁၉အိုအကျွန်ုပ်တို့ ဘုရားသခင်ထာဝရဘုရား၊ ကိုယ်တော် ထာဝရဘုရား တပါးသောဘုရားသခင် ဖြစ်တော်မူသည်ကို မြေကြီးပေါ်မှာရှိသမျှသော တိုင်းနိုင်ငံတို့သည် သိမည်အကြောင်း၊ အကျွန်ုပ်တို့ကို ထိုမင်းလက်မှ ယခုကယ်တော်မူပါ။ အကျွန်ုပ်တောင်းပန် ပါသည်ဟု ပဌနာပြုလေ၏။
20 ೨೦ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
၂၀ထိုအခါ အာမုတ်သားဟေရှာယသည် ဟေဇကိ မင်းထံသို့ စေလွှတ်၍၊ ဣသရေလအမျိုး၏ ဘုရားသခင် ထာဝရဘုရားမိန့်တော်မူသည်ကား၊ သင်သည်အာရှုရိ ရှင်ဘုရင် သနာခရိပ်အကြောင်းကြောင့် ငါ့ရှေ့မှာ ပြုသော ပဌနာစကားကို ငါကြားရပြီ။
21 ೨೧ ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
၂၁ထိုမင်း၏အမှုမှာ ထာဝရဘုရား မိန့်တော်မူ သောစကားဟူမူကား၊ ဇိအုန်သတို့သမီးကညာသည် သင့်ကို မထီမဲ့မြင်ပြု၍ ပြက်ယယ်၏။ ယေရုရှလင် သတို့သမီးသည် သင့်နောက်၌ ခေါင်းညှိတ်၏။
22 ೨೨ ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!
၂၂သင်သည် အဘယ်သူကိုကဲ့ရဲ့ဆဲရေးသနည်း။ အဘယ်သူကို အော်ဟစ်၍ မျက်နှာထောင်လွှားသနည်း။ ဣသရေလအမျိုး၏ သန့်ရှင်းသောဘုရားကိုပင် ပြုပါ သည်တကား။
23 ೨೩ ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
၂၃သင်သည် တမန်များအားဖြင့် ထာဝရဘုရားကို ကဲ့ရဲ့၍၊ ငါသည် ရထားများပြားသဖြင့် တောင်ထိပ်သို့ ၎င်း၊ လေဗနုန်တောင် အထွဋ်သို့၎င်း တက်လာပြီ။ အရပ် မြင့်သောအာရဇ်ပင်နှင့်အကောင်းဆုံးသော ထင်ရူးပင် တို့ကို ငါခုတ်လှဲပြီ။ အဝေးဆုံးသော ခိုလှုံရာအသီးများ သော တောထဲသို့ ငါဝင်ပြီ။
24 ೨೪ ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”
၂၄ငါသည် တွင်းတူး၍ မမြည်းဘူးသော ရေကို သောက်ရပြီ။ ငါ၏ ခြေဘဝါးအားဖြင့် အဲဂုတ္တုမြစ် လက်ကြားရေရှိသမျှကို ခန်းခြောက်စေပြီဟု သင်ဆိုမိပြီ တကား။
25 ೨೫ ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
၂၅ငါသည်အထက်ကဤအမှုကို စီရင်ကြောင်းနှင့် ရှေးကာလ၌ ပြုပြင်ကြောင်းကို သင်သည် မကြား သလော။ ယခုမှာလည်း သင်သည် ခိုင်ခံ့သော မြို့တို့ကို ဖျက်ဆီး၍၊ ကျောက်ပုံဖြစ်စေသောသူဖြစ်မည်အကြောင်း ငါစီရင်ခန့်ထားလေပြီ။
26 ೨೬ ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
၂၆ထိုကြောင့်မြို့သားတို့သည် အားနည်းကြ၏။ မှိုင်တွေ၍ စိတ်ပျက်လျက်ရှိကြ၏။ တောမြက်ပင်နှင့် စိမ်းသော စပါးပင်ကဲ့သို့၎င်း၊ အိမ်မိုးပေါ်မှာ ပေါက်သော မြက်ပင်နှင့် မကြီးမှီညှိုးနွမ်းသော စပါးပင်ကဲ့သို့၎င်း ဖြစ်ကြ၏။
27 ೨೭ “ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
၂၇သင်၏နေထိုင်ခြင်း၊ ထွက်ဝင်ခြင်း၊ ငါ၌ အမျက် ဟုန်းခြင်းတို့ကို ငါသိ၏။
28 ೨೮ ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
၂၈ငါ၌သင်၏အမျက်ဟုန်းခြင်း၊ စော်ကားခြင်းကို ငါကြားရသောကြောင့်၊ သင့်ကိုနှာရှုတ်တပ်၍ ဇက်ခွံ့ပြီးမှ၊ သင်လာသောလမ်းဖြင့် ပြန်စေမည်။
29 ೨೯ ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
၂၉သင်မှတ်ရသောနိမိတ်လက္ခဏာဟူမူကား၊ ယခု နှစ်တွင် အလိုလိုကြီးရင့်သော အသီးအနှံကို၎င်း၊ ဒုတိယ နှစ်တွင် ထိုအတူပေါက်သော အရာများကို၎င်း သင်တို့ သည် စားရမည်။ တတိယနှစ်တွင် မျိုးစေ့ကိုကြဲ၍ စပါးကို ရိတ်ကြလော့။ စပျစ်ဥယျာဉ်ကိုလည်းစိုက်၍ အသီးကို စားကြလော့။
30 ೩೦ ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
၃၀ဘေးလွတ်၍ ကျန်ကြွင်းသော ယုဒအမျိုးသား တို့သည် တဖန် အောက်မှာအမြစ်စွဲ၍ အထက်မှာ အသီးသီးကြလိမ့်မည်။
31 ೩೧ ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
၃၁ကျန်ကြွင်းသောသူတို့သည် ယေရုရှလင်မြို့ထဲ က၎င်း၊ ဘေးလွတ်သောသူတို့သည် ဇိအုန်တောင်ပေါ် ၎င်း ပေါ်လာကြလိမ့်မည်။ ကောင်းကင်ဗိုလ်ခြေအရှင် ထာဝရဘုရားသည် အလိုတော်အားကြီး၍ ထိုအမှုကို စီရင်တော်မူလိမ့်မည်။
32 ೩೨ ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
၃၂သို့ဖြစ်၍ ထာဝရဘုရားသည် အာရှုရိရှင်ဘုရင် ကို ရည်မှတ်၍ မိန့်တော်မူသည်ကား၊ သူသည် ဤမြို့သို့ မဝင်ရ။ မြို့ထဲသို့မြှားကိုမပစ်ရ။ မြို့ရှေ့မှာ ဒိုင်းလွှားကို မပြရ။ မြို့ပြင်မှာ မြေရိုးကို မဖို့ရ။
33 ೩೩ ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ
၃၃လာသောလမ်းဖြင့် ပြန်သွားရမည်။ ဤမြို့ထဲသို့ မဝင်ရ။
34 ೩೪ ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
၃၄ငါသည် ကိုယ်မျက်နှာကို၎င်း၊ ငါ့ကျွန် ဒါဝိဒ်၏ မျက်နှာကို၎င်း ထောက်၍ ဤမြို့ကို ကယ်တင်ခြင်းငှါ စောင့်မမည်ဟု ထာဝရဘုရား မိန့်တော်မူ၏။
35 ೩೫ ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
၃၅ထိုညဉ့်တွင် ထာဝရဘုရား၏ ကောင်းကင် တမန်သည် ထွက်၍ အာရှုရိတပ်တွင် လူတသိန်း ရှစ်သောင်းငါးထောင်တို့ကို ဒဏ်ခတ်လေ၏။ နံနက် စောစောထချိန် ရောက်သောအခါ၊ ထိုသူအပေါင်းတို့သည် အသေကောင်ဖြစ်ကြ၏။
36 ೩೬ ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.
၃၆အာရှုရိရှင်ဘုရင်သနာခရိပ်သည်လည်း ထို အရပ်မှ ထွက်၍ပြန် သွားပြီးလျှင် နိနေဝေမြို့၌ နေလေ၏။
37 ೩೭ ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
၃၇နောက်တဖန်သူသည် မိမိဘုရားနိသရုတ်၏ ဗိမာန်၌ ကိုးကွယ်စဉ်တွင်၊ သားတော်အာဒြမ္မေလက်နှင့် ရှရေဇာသည်ခမည်းတော်ကို ထားနှင့် သတ်ပြီးလျှင်၊ အာရမနိပြည်သို့ ပြေးကြ၏။ သားတော် ဧသရ ဟဒ္ဒုန် သည်လည်း ခမည်းတော်အရာ၌ နန်းထိုင်၏။

< ಅರಸುಗಳು - ದ್ವಿತೀಯ ಭಾಗ 19 >