< ಅರಸುಗಳು - ದ್ವಿತೀಯ ಭಾಗ 20 >

1 ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.
ସେହି ସମୟରେ ହିଜକୀୟଙ୍କର ସାଂଘାତିକ ପୀଡ଼ା ହୋଇଥିଲା। ତହିଁରେ ଆମୋସର ପୁତ୍ର ଯିଶାଇୟ ଭବିଷ୍ୟଦ୍‍ବକ୍ତା ତାଙ୍କ ନିକଟକୁ ଆସି କହିଲେ, “ସଦାପ୍ରଭୁ ଏହି କଥା କହନ୍ତି, ତୁମ୍ଭେ ଆପଣା ଗୃହ ବିଷୟ ସଜାଡ଼; କାରଣ ତୁମ୍ଭେ ମରିବ, ବଞ୍ଚିବ ନାହିଁ।”
2 ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.
ଏଥିରେ ସେ କାନ୍ଥ ଆଡ଼େ ମୁଖ ଫେରାଇ ସଦାପ୍ରଭୁଙ୍କ ନିକଟରେ ପ୍ରାର୍ଥନା କରି କହିଲେ,
3 “ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
“ହେ ସଦାପ୍ରଭୋ, ମୁଁ ବିନୟ କରୁଅଛି, ମୁଁ କିପରି ସତ୍ୟତାରେ ଓ ସିଦ୍ଧ ଅନ୍ତଃକରଣରେ ତୁମ୍ଭ ସମ୍ମୁଖରେ ଗମନାଗମନ କରିଅଛି ଓ ତୁମ୍ଭ ଦୃଷ୍ଟିରେ ଉତ୍ତମ କର୍ମ କରିଅଛି, ଏହା ଏବେ ସ୍ମରଣ କର।” ଆଉ ହିଜକୀୟ ଅତିଶୟ ରୋଦନ କଲେ।
4 ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.
ଏଥିଉତ୍ତାରେ ଯିଶାଇୟ ନଗରର ମଧ୍ୟଭାଗକୁ ବାହାରି ଯିବା ପୂର୍ବେ ତାଙ୍କ ନିକଟରେ ସଦାପ୍ରଭୁଙ୍କ ବାକ୍ୟ ଉପସ୍ଥିତ ହେଲା,
5 “ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
ଯଥା, “ଫେରିଯାଅ ଓ ଆମ୍ଭ ଲୋକମାନଙ୍କ ଅଧିପତି ହିଜକୀୟକୁ କୁହ, ସଦାପ୍ରଭୁ ତୁମ୍ଭ ପୂର୍ବପୁରୁଷ ଦାଉଦର ପରମେଶ୍ୱର ଏହି କଥା କହନ୍ତି, ଆମ୍ଭେ ତୁମ୍ଭର ପ୍ରାର୍ଥନା ଶୁଣିଲୁ, ଆମ୍ଭେ ତୁମ୍ଭର ଲୋତକ ଦେଖିଲୁ; ଦେଖ, ଆମ୍ଭେ ତୁମ୍ଭକୁ ସୁସ୍ଥ କରିବୁ; ତୁମ୍ଭେ ତୃତୀୟ ଦିନରେ ସଦାପ୍ରଭୁଙ୍କ ଗୃହକୁ ଯିବ।
6 ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.
ଆଉ ଆମ୍ଭେ ତୁମ୍ଭର ଆୟୁ ପନ୍ଦର ବର୍ଷ ବୃଦ୍ଧି କରିବା; ପୁଣି ଆମ୍ଭେ ତୁମ୍ଭକୁ ଓ ଏହି ନଗରକୁ ଅଶୂରୀୟ ରାଜାର ହସ୍ତରୁ ରକ୍ଷା କରିବା; ଆଉ ଆମ୍ଭେ ଆପଣା ସକାଶୁ ଓ ଆମ୍ଭ ଦାସ ଦାଉଦ ସକାଶୁ ଏହି ନଗରର ସପକ୍ଷ ହେବା।”
7 ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
ତହୁଁ ଯିଶାଇୟ କହିଲେ, “ଏକ ଡିମ୍ବିରି ଚକ୍ତି ଆଣ।” ତହିଁରେ ସେମାନେ ତାହା ଆଣି ବଥ ଉପରେ ଥୋଇଲେ, ଆଉ ସେ ସୁସ୍ଥ ହେଲେ।
8 ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.
ପୁଣି ହିଜକୀୟ ଯିଶାଇୟଙ୍କୁ କହିଲେ, “ସଦାପ୍ରଭୁ ଯେ ମୋତେ ସୁସ୍ଥ କରିବେ ଓ ମୁଁ ଯେ ତୃତୀୟ ଦିନରେ ସଦାପ୍ରଭୁଙ୍କ ଗୃହକୁ ଯିବି, ଏଥିର କି ଚିହ୍ନ ହେବ।”
9 ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.
ତହିଁରେ ଯିଶାଇୟ କହିଲେ, “ସଦାପ୍ରଭୁ ଆପଣା ଉକ୍ତ ବାକ୍ୟ ଯେ ସଫଳ କରିବେ, ତୁମ୍ଭ ପ୍ରତି ସଦାପ୍ରଭୁଙ୍କଠାରୁ ଏହି ଚିହ୍ନ ହେବ; ଛାୟା କି ଆଗକୁ ଦଶ ପାହୁଣ୍ଡ ଯିବ, ଅବା ପଛକୁ ଦଶ ପାହୁଣ୍ଡ ଯିବ।”
10 ೧೦ ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.
ତହିଁରେ ହିଜକୀୟ ଉତ୍ତର କଲେ, “ଛାୟା ଆଗକୁ ଦଶ ପାହୁଣ୍ଡ ଯିବାର କ୍ଷୁଦ୍ର ବିଷୟ; ନା; ମାତ୍ର ଛାୟା ପଛକୁ ଦଶ ପାହୁଣ୍ଡ ଫେରିଯାଉ।”
11 ೧೧ ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.
ତହୁଁ ଯିଶାଇୟ ଭବିଷ୍ୟଦ୍‍ବକ୍ତା ସଦାପ୍ରଭୁଙ୍କ ନିକଟରେ ଡାକି ପ୍ରାର୍ଥନା କଲେ। ଏଥିରେ ଆହସ୍‌ଙ୍କର ସୂର୍ଯ୍ୟ ଘଟିକାରେ ଛାୟା ଯେଉଁ ଦଶ ପାହୁଣ୍ଡ ଆଗକୁ ଯାଇଥିଲା, ସେତିକି ସେ ପଛକୁ ଫେରାଇ ଆଣିଲେ।
12 ೧೨ ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
ସେହି ସମୟରେ ବଲ୍‍ଦନ୍‍ର ପୁତ୍ର ବରୋଦକ୍‍ ବଲ୍‍ଦନ୍ ନାମକ ବାବିଲର ରାଜା ହିଜକୀୟଙ୍କ ନିକଟକୁ ପତ୍ରମାନ ଓ ଦର୍ଶନୀ ପଠାଇଲା; କାରଣ ସେ ହିଜକୀୟଙ୍କ ପୀଡ଼ିତ ହେବାର କଥା ଶୁଣିଥିଲା।
13 ೧೩ ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
ତହିଁରେ ହିଜକୀୟ ସେମାନଙ୍କ କଥା ଶୁଣିଲେ ଓ ଆପଣା ବହୁମୂଲ୍ୟ ପଦାର୍ଥର ସମୁଦାୟ ଗୃହ, ରୂପା ଓ ସୁନା ଓ ସୁଗନ୍ଧି ଦ୍ରବ୍ୟ ଓ ବହୁମୂଲ୍ୟ ତୈଳ ଓ ଅସ୍ତ୍ରାଗାର ଓ ଆପଣା ଭଣ୍ଡାରସ୍ଥିତ ସମସ୍ତ ଦ୍ରବ୍ୟ ସେମାନଙ୍କୁ ଦେଖାଇଲେ। ହିଜକୀୟ ଯାହା ସେମାନଙ୍କୁ ନ ଦେଖାଇଲେ, ଏପରି କୌଣସି ଦ୍ରବ୍ୟ ତାଙ୍କ ଗୃହରେ କି ତାଙ୍କର ସମୁଦାୟ ରାଜ୍ୟରେ ନ ଥିଲା।
14 ೧೪ ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.
ସେତେବେଳେ ଯିଶାଇୟ ଭବିଷ୍ୟଦ୍‍ବକ୍ତା ହିଜକୀୟ ରାଜାଙ୍କ ନିକଟକୁ ଆସି ତାଙ୍କୁ କହିଲେ, “ଏହି ଲୋକମାନେ କଅଣ କହିଲେ? ସେମାନେ କେଉଁଠାରୁ ତୁମ୍ଭ ନିକଟକୁ ଆସିଲେ?” ତହିଁରେ ହିଜକୀୟ କହିଲେ, “ସେମାନେ ଦୂର ଦେଶ ବାବିଲରୁ ଆସିଅଛନ୍ତି।”
15 ೧೫ ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.
ଏଥିରେ ଯିଶାଇୟ ପଚାରିଲେ, “ସେମାନେ ତୁମ୍ଭ ଗୃହରେ କି କି ବିଷୟ ଦେଖିଅଛନ୍ତି?” ତହୁଁ ହିଜକୀୟ ଉତ୍ତର କଲେ, “ମୋʼ ଗୃହରେ ଯାହା ଯାହା ଅଛି, ସବୁ ସେମାନେ ଦେଖିଅଛନ୍ତି; ଯାହା ମୁଁ ସେମାନଙ୍କୁ ନ ଦେଖାଇଲି, ଏପରି କୌଣସି ପଦାର୍ଥ ମୋʼ ଭଣ୍ଡାରସମୂହରେ ନାହିଁ।”
16 ೧೬ ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನ ಮಾತನ್ನು ಕೇಳು,
ଏଥିରେ ଯିଶାଇୟ ହିଜକୀୟଙ୍କୁ କହିଲେ, “ସଦାପ୍ରଭୁଙ୍କ ବାକ୍ୟ ଶୁଣ:
17 ೧೭ ‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.
ଦେଖ, ତୁମ୍ଭ ଗୃହସ୍ଥିତ ସମସ୍ତ ଦ୍ରବ୍ୟ ଓ ଆଜି ପର୍ଯ୍ୟନ୍ତ ତୁମ୍ଭ ପୂର୍ବପୁରୁଷମାନଙ୍କ ସଞ୍ଚିତ ସମସ୍ତ ଦ୍ରବ୍ୟ ବାବିଲକୁ ନିଆଯିବାର ସମୟ ଆସୁଅଛି। ସଦାପ୍ରଭୁ କହନ୍ତି, କିଛି ଛଡ଼ାଯିବ ନାହିଁ।
18 ೧೮ ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.
ତୁମ୍ଭ ପୁତ୍ରମାନଙ୍କ ମଧ୍ୟରେ ଯେଉଁମାନେ ତୁମ୍ଭ ଔରସରେ ଜାତ ଓ ତୁମ୍ଭଠାରୁ ଉତ୍ପନ୍ନ ହେବେ, ସେମାନଙ୍କୁ ସେମାନେ ନେଇଯିବେ ଓ ସେମାନେ ବାବିଲ ରାଜାର ଅଟ୍ଟାଳିକାରେ ନପୁଂସକ ହୋଇ ରହିବେ।”
19 ೧೯ ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.
ସେତେବେଳେ ହିଜକୀୟ ଯିଶାଇୟଙ୍କୁ କହିଲେ, “ତୁମ୍ଭେ ସଦାପ୍ରଭୁଙ୍କର ଯେଉଁ ବାକ୍ୟ କହିଅଛ, ତାହା ଉତ୍ତମ।” ସେ ଆହୁରି କହିଲେ, “ଯେବେ ଆମ୍ଭ ସମୟରେ ଶାନ୍ତି ଓ ସତ୍ୟତା ବିରାଜିତ ହୁଏ, ତେବେ ତାହା କʼଣ (ଉତ୍ତମ) ନୁହେଁ?”
20 ೨೦ ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
ଏହି ହିଜକୀୟଙ୍କର ଅବଶିଷ୍ଟ ବୃତ୍ତାନ୍ତ ଓ ତାଙ୍କର ସମସ୍ତ ପରାକ୍ରମ ଓ ସେ କିପରି ପୁଷ୍କରିଣୀ ଓ ନାଳ ପ୍ରସ୍ତୁତ କରି ନଗର ମଧ୍ୟକୁ ଜଳ ଆଣିଲେ, ଏହାସବୁ କʼଣ ଯିହୁଦା ରାଜାମାନଙ୍କ ଇତିହାସ ପୁସ୍ତକରେ ଲେଖା ନାହିଁ?
21 ೨೧ ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
ଏଥିଉତ୍ତାରେ ହିଜକୀୟ ମୃତ୍ୟୁବରଣ କଲେ; ଆଉ ତାଙ୍କର ପୁତ୍ର ମନଃଶି ତାଙ୍କର ପଦରେ ରାଜ୍ୟ କଲେ।

< ಅರಸುಗಳು - ದ್ವಿತೀಯ ಭಾಗ 20 >