< ಪೇತ್ರನು ಬರೆದ ಎರಡನೆಯ ಪತ್ರಿಕೆ 2 >

1 ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
Bili so pa tudi lažipreroki v ljudstvu, kakor bodo tudi med vami lažiučitelji, kateri bodo zraven vpeljavali pogubne razkole in zatajevali Gospoda, ki jih je odkupil, pripravljajoč si naglo pogubo;
2 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
In mnogo jih bode hodilo za njih pogubami, za katerih voljo se bode obrekovala pot resnice;
3 ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
In v lakomnosti vas bodo z izmišljenimi besedami prekanjali, katerim sodba že zdavnaj ne odlaša, in poguba njih ne spí.
4 ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. (Tartaroō g5020)
Kajti Bog ni prizanesel angelom, ki so grešili, temuč jih z verigami temé v pekel pahnil in hraniti jih dal v sodbo. (Tartaroō g5020)
5 ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
In staremu svetu ni prizanesel, nego Noeta osmega ohranil za glasnika pravice,
6 ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
Ko je potop svetu brezbožnih poslal, in je mesti Sodom in Gomoro upepelivši v pogubljenje obsodil, zgled postavivši njim, ki bodo brezbožni,
7 ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.
In pravičnega Lota, trpečega od razuzdanega vedenja neukrotnih, je otél.
8 ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
(Kajti s pogledom in sluhom je pravični dan na dan pravično dušo mučil z nepostavnimi deli, prebivajoč med njimi);
9 ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
Gospod vé pobožne rešiti iz izkušnjave, krivične pa za dan sodbe hraniti v kaznovanje;
10 ೧೦ ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
Najbolj pa nje, ki hodijo za mesom v poželenji oskrumbe, in zaničujejo gospostvo. Predrzniki samopašni, ne bojé se preklinjati slave;
11 ೧೧ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
Kjer angeli, po kreposti in moči večji, ne izrekajo proti njim pred Gospodom preklinjajoče sodbe.
12 ೧೨ ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
Ti pa, kakor nespametne živali telesne stvarjene v lov in klanje, v tem, česar ne poznajo, preklinjajoč, bodo se pogubili v pogubi svoji, prejemši krivice plačilo.
13 ೧೩ ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
Oni, katerim se veselje zdí požrešnost po dnevi, madeži in sramote, razuzdano živeč v zmotah svojih in gosteč se z vami,
14 ೧೪ ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
Oči imajoč polne prešestnice in brez pokoja v grehu; vabeč duše neutrjene, imajoč srce vajeno lakomnosti, prekletstva otroci,
15 ೧೫ ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
Ki so zapustivši ravno pot tavali, hodili po poti Balaama sina Bosorjevega, kateri je ljubil krivice plačilo,
16 ೧೬ ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
A prejel lastne nepostavnosti posvarilo; brezglasno uprežno živinče, ki je izpregovorivši s človeškim glasom, zabranilo prerokovo nespamet.
17 ೧೭ ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. (questioned)
Ti so studenci brez vode, megle, ki jih goni vihar, katerim je hranjen mrak teme vekomaj. (questioned)
18 ೧೮ ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
Kajti prazno zabuhlost govoreč vabijo v poželjivostih mesa, v razuzdanosti nje, kateri so v resnici ubežali njim, ki hodijo po zmotnjavi,
19 ೧೯ ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
Obetajoč jim svobodo, ko so sami hlapci pogube; kajti od kogar je kdo premagan, njegov je tudi hlapec postal.
20 ೨೦ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
Kajti če se taki, ki so ubežali oskrumbam sveta v spoznanji Gospoda in zveličarja Jezusa Kristusa, zopet zapletó vanje in so premagani, zgodilo se jim je zadnje hujše od prvega.
21 ೨೧ ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
Kajti bolje jim je bilo, da bi ne bili spoznali pota pravice, nego spoznavši obrniti se zopet od dane jim svete zapovedi.
22 ೨೨ “ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
Prigodilo se jim je pa po resničnem pregovoru: "Pes, ki se je obrnil k lastni izbluvi," in "Svinja omita v lužo blatno."

< ಪೇತ್ರನು ಬರೆದ ಎರಡನೆಯ ಪತ್ರಿಕೆ 2 >