< ಸಮುವೇಲನು - ದ್ವಿತೀಯ ಭಾಗ 13 >

1 ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.
וַיְהִי אַחֲרֵי־כֵן וּלְאַבְשָׁלוֹם בֶּן־דָּוִד אָחוֹת יָפָה וּשְׁמָהּ תָּמָר וַיֶּאֱהָבֶהָ אַמְנוֹן בֶּן־דָּוִֽד׃
2 ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು.
וַיֵּצֶר לְאַמְנוֹן לְהִתְחַלּוֹת בַּֽעֲבוּר תָּמָר אֲחֹתוֹ כִּי בְתוּלָה הִיא וַיִּפָּלֵא בְּעֵינֵי אַמְנוֹן לַעֲשׂוֹת לָהּ מְאֽוּמָה׃
3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.
וּלְאַמְנוֹן רֵעַ וּשְׁמוֹ יֽוֹנָדָב בֶּן־שִׁמְעָה אֲחִי דָוִד וְיוֹנָדָב אִישׁ חָכָם מְאֹֽד׃
4 ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.
וַיֹּאמֶר לוֹ מַדּוּעַ אַתָּה כָּכָה דַּל בֶּן־הַמֶּלֶךְ בַּבֹּקֶר בַּבֹּקֶר הֲלוֹא תַּגִּיד לִי וַיֹּאמֶר לוֹ אַמְנוֹן אֶת־תָּמָר אֲחוֹת אַבְשָׁלֹם אָחִי אֲנִי אֹהֵֽב׃
5 ಆಗ ಯೋನಾದಾಬನು ಅವನಿಗೆ, “ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, ‘ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ’ ಎಂದು ಹೇಳು” ಎಂದನು.
וַיֹּאמֶר לוֹ יְהוֹנָדָב שְׁכַב עַל־מִשְׁכָּבְךָ וְהִתְחָל וּבָא אָבִיךָ לִרְאוֹתֶךָ וְאָמַרְתָּ אֵלָיו תָּבֹא נָא תָמָר אֲחוֹתִי וְתַבְרֵנִי לֶחֶם וְעָשְׂתָה לְעֵינַי אֶת־הַבִּרְיָה לְמַעַן אֲשֶׁר אֶרְאֶה וְאָכַלְתִּי מִיָּדָֽהּ׃
6 ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.
וַיִּשְׁכַּב אַמְנוֹן וַיִּתְחָל וַיָּבֹא הַמֶּלֶךְ לִרְאוֹתוֹ וַיֹּאמֶר אַמְנוֹן אֶל־הַמֶּלֶךְ תָּבוֹא־נָא תָּמָר אֲחֹתִי וּתְלַבֵּב לְעֵינַי שְׁתֵּי לְבִבוֹת וְאֶבְרֶה מִיָּדָֽהּ׃
7 ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು” ಎಂದು ಹೇಳಿದನು.
וַיִּשְׁלַח דָּוִד אֶל־תָּמָר הַבַּיְתָה לֵאמֹר לְכִי נָא בֵּית אַמְנוֹן אָחִיךְ וַעֲשִׂי־לוֹ הַבִּרְיָֽה׃
8 ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.
וַתֵּלֶךְ תָּמָר בֵּית אַמְנוֹן אָחִיהָ וְהוּא שֹׁכֵב וַתִּקַּח אֶת־הַבָּצֵק (ותלוש) [וַתָּלׇשׁ] וַתְּלַבֵּב לְעֵינָיו וַתְּבַשֵּׁל אֶת־הַלְּבִבֽוֹת׃
9 ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.
וַתִּקַּח אֶת־הַמַּשְׂרֵת וַתִּצֹק לְפָנָיו וַיְמָאֵן לֶאֱכוֹל וַיֹּאמֶר אַמְנוֹן הוֹצִיאוּ כׇל־אִישׁ מֵעָלַי וַיֵּצְאוּ כׇל־אִישׁ מֵעָלָֽיו׃
10 ೧೦ ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.
וַיֹּאמֶר אַמְנוֹן אֶל־תָּמָר הָבִיאִי הַבִּרְיָה הַחֶדֶר וְאֶבְרֶה מִיָּדֵךְ וַתִּקַּח תָּמָר אֶת־הַלְּבִבוֹת אֲשֶׁר עָשָׂתָה וַתָּבֵא לְאַמְנוֹן אָחִיהָ הֶחָֽדְרָה׃
11 ೧೧ ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು.
וַתַּגֵּשׁ אֵלָיו לֶאֱכֹל וַיַּֽחֲזֶק־בָּהּ וַיֹּאמֶר לָהּ בּוֹאִי שִׁכְבִי עִמִּי אֲחוֹתִֽי׃
12 ೧೨ ಆಕೆಯು; “ಅಣ್ಣನೇ, ಬೇಡ, ನನ್ನನ್ನು ಅಪಮಾನಪಡಿಸಬೇಡ, ಇಸ್ರಾಯೇಲರಲ್ಲಿ ಇಂಥ ನೀಚಕಾರ್ಯವು ನಡೆಯಬಾರದು. ಇಂಥ ಅವಮಾನಕರವಾದ ಕೆಲಸವನ್ನು ಮಾಡಬೇಡ.
וַתֹּאמֶר לוֹ אַל־אָחִי אַל־תְּעַנֵּנִי כִּי לֹא־יֵעָשֶׂה כֵן בְּיִשְׂרָאֵל אַֽל־תַּעֲשֵׂה אֶת־הַנְּבָלָה הַזֹּֽאת׃
13 ೧೩ ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು” ಎಂದಳು.
וַאֲנִי אָנָה אוֹלִיךְ אֶת־חֶרְפָּתִי וְאַתָּה תִּֽהְיֶה כְּאַחַד הַנְּבָלִים בְּיִשְׂרָאֵל וְעַתָּה דַּבֶּר־נָא אֶל־הַמֶּלֶךְ כִּי לֹא יִמְנָעֵנִי מִמֶּֽךָּ׃
14 ೧೪ ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.
וְלֹא אָבָה לִשְׁמֹעַ בְּקוֹלָהּ וַיֶּחֱזַק מִמֶּנָּה וַיְעַנֶּהָ וַיִּשְׁכַּב אֹתָֽהּ׃
15 ೧೫ ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.
וַיִּשְׂנָאֶהָ אַמְנוֹן שִׂנְאָה גְּדוֹלָה מְאֹד כִּי גְדוֹלָה הַשִּׂנְאָה אֲשֶׁר שְׂנֵאָהּ מֵאַהֲבָה אֲשֶׁר אֲהֵבָהּ וַֽיֹּאמֶר־לָהּ אַמְנוֹן קוּמִי לֵֽכִי׃
16 ೧೬ ಅಮ್ನೋನನು ಆಕೆಗೆ, “ಎದ್ದು ಹೋಗು” ಎಂದು ಹೇಳಿದಾಗ ಆಕೆಯು, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ” ಅಂದಳು.
וַתֹּאמֶר לוֹ אַל־אוֹדֹת הָרָעָה הַגְּדוֹלָה הַזֹּאת מֵאַחֶרֶת אֲשֶׁר־עָשִׂיתָ עִמִּי לְשַׁלְּחֵנִי וְלֹא אָבָה לִשְׁמֹעַֽ לָֽהּ׃
17 ೧೭ ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು” ಎಂದು ಆಜ್ಞಾಪಿಸಿದನು.
וַיִּקְרָא אֶֽת־נַעֲרוֹ מְשָׁרְתוֹ וַיֹּאמֶר שִׁלְחוּ־נָא אֶת־זֹאת מֵעָלַי הַחוּצָה וּנְעֹל הַדֶּלֶת אַחֲרֶֽיהָ׃
18 ೧೮ ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು.
וְעָלֶיהָ כְּתֹנֶת פַּסִּים כִּי כֵן תִּלְבַּשְׁןָ בְנוֹת־הַמֶּלֶךְ הַבְּתוּלֹת מְעִילִים וַיֹּצֵא אוֹתָהּ מְשָֽׁרְתוֹ הַחוּץ וְנָעַל הַדֶּלֶת אַחֲרֶֽיהָ׃
19 ೧೯ ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.
וַתִּקַּח תָּמָר אֵפֶר עַל־רֹאשָׁהּ וּכְתֹנֶת הַפַּסִּים אֲשֶׁר עָלֶיהָ קָרָעָה וַתָּשֶׂם יָדָהּ עַל־רֹאשָׁהּ וַתֵּלֶךְ הָלוֹךְ וְזָעָֽקָה׃
20 ೨೦ ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ” ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಮಾಡಿದಳು.
וַיֹּאמֶר אֵלֶיהָ אַבְשָׁלוֹם אָחִיהָ הַאֲמִינוֹן אָחִיךְ הָיָה עִמָּךְ וְעַתָּה אֲחוֹתִי הַחֲרִישִׁי אָחִיךְ הוּא אַל־תָּשִׁיתִי אֶת־לִבֵּךְ לַדָּבָר הַזֶּה וַתֵּשֶׁב תָּמָר וְשֹׁמֵמָה בֵּית אַבְשָׁלוֹם אָחִֽיהָ׃
21 ೨೧ ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.
וְהַמֶּלֶךְ דָּוִד שָׁמַע אֵת כׇּל־הַדְּבָרִים הָאֵלֶּה וַיִּחַר לוֹ מְאֹֽד׃
22 ೨೨ ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.
וְלֹֽא־דִבֶּר אַבְשָׁלוֹם עִם־אַמְנוֹן לְמֵרָע וְעַד־טוֹב כִּֽי־שָׂנֵא אַבְשָׁלוֹם אֶת־אַמְנוֹן עַל־דְּבַר אֲשֶׁר עִנָּה אֵת תָּמָר אֲחֹתֽוֹ׃
23 ೨೩ ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.
וַֽיְהִי לִשְׁנָתַיִם יָמִים וַיִּֽהְיוּ גֹֽזְזִים לְאַבְשָׁלוֹם בְּבַעַל חָצוֹר אֲשֶׁר עִם־אֶפְרָיִם וַיִּקְרָא אַבְשָׁלוֹם לְכׇל־בְּנֵי הַמֶּֽלֶךְ׃
24 ೨೪ ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು.
וַיָּבֹא אַבְשָׁלוֹם אֶל־הַמֶּלֶךְ וַיֹּאמֶר הִנֵּה־נָא גֹזְזִים לְעַבְדֶּךָ יֵלֶךְ־נָא הַמֶּלֶךְ וַעֲבָדָיו עִם־עַבְדֶּֽךָ׃
25 ೨೫ ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.
וַיֹּאמֶר הַמֶּלֶךְ אֶל־אַבְשָׁלוֹם אַל־בְּנִי אַל־נָא נֵלֵךְ כֻּלָּנוּ וְלֹא נִכְבַּד עָלֶיךָ וַיִּפְרׇץ־בּוֹ וְלֹא־אָבָה לָלֶכֶת וַֽיְבָרְכֵֽהוּ׃
26 ೨೬ ಆಗ ಅಬ್ಷಾಲೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.
וַיֹּאמֶר אַבְשָׁלוֹם וָלֹא יֵלֶךְ־נָא אִתָּנוּ אַמְנוֹן אָחִי וַיֹּאמֶר לוֹ הַמֶּלֶךְ לָמָּה יֵלֵךְ עִמָּֽךְ׃
27 ೨೭ ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು.
וַיִּפְרׇץ־בּוֹ אַבְשָׁלוֹם וַיִּשְׁלַח אִתּוֹ אֶת־אַמְנוֹן וְאֵת כׇּל־בְּנֵי הַמֶּֽלֶךְ׃
28 ೨೮ ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
וַיְצַו אַבְשָׁלוֹם אֶת־נְעָרָיו לֵאמֹר רְאוּ נָא כְּטוֹב לֵב־אַמְנוֹן בַּיַּיִן וְאָמַרְתִּי אֲלֵיכֶם הַכּוּ אֶת־אַמְנוֹן וַהֲמִתֶּם אֹתוֹ אַל־תִּירָאוּ הֲלוֹא כִּי אָֽנֹכִי צִוִּיתִי אֶתְכֶם חִזְקוּ וִֽהְיוּ לִבְנֵי־חָֽיִל׃
29 ೨೯ ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.
וַֽיַּעֲשׂוּ נַעֲרֵי אַבְשָׁלוֹם לְאַמְנוֹן כַּאֲשֶׁר צִוָּה אַבְשָׁלוֹם וַיָּקֻמוּ ׀ כׇּל־בְּנֵי הַמֶּלֶךְ וַֽיִּרְכְּבוּ אִישׁ עַל־פִּרְדּוֹ וַיָּנֻֽסוּ׃
30 ೩೦ ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು.
וַֽיְהִי הֵמָּה בַדֶּרֶךְ וְהַשְּׁמֻעָה בָאָה אֶל־דָּוִד לֵאמֹר הִכָּה אַבְשָׁלוֹם אֶת־כׇּל־בְּנֵי הַמֶּלֶךְ וְלֹא־נוֹתַר מֵהֶם אֶחָֽד׃
31 ೩೧ ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.
וַיָּקׇם הַמֶּלֶךְ וַיִּקְרַע אֶת־בְּגָדָיו וַיִּשְׁכַּב אָרְצָה וְכׇל־עֲבָדָיו נִצָּבִים קְרֻעֵי בְגָדִֽים׃
32 ೩೨ ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.
וַיַּעַן יוֹנָדָב ׀ בֶּן־שִׁמְעָה אֲחִי־דָוִד וַיֹּאמֶר אַל־יֹאמַר אֲדֹנִי אֵת כׇּל־הַנְּעָרִים בְּנֵֽי־הַמֶּלֶךְ הֵמִיתוּ כִּֽי־אַמְנוֹן לְבַדּוֹ מֵת כִּֽי־עַל־פִּי אַבְשָׁלוֹם הָיְתָה שׂוּמָה מִיּוֹם עַנֹּתוֹ אֵת תָּמָר אֲחֹתֽוֹ׃
33 ೩೩ ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ” ಎಂದು ಹೇಳಿ ಸಂತೈಸಿದನು.
וְעַתָּה אַל־יָשֵׂם אֲדֹנִי הַמֶּלֶךְ אֶל־לִבּוֹ דָּבָר לֵאמֹר כׇּל־בְּנֵי הַמֶּלֶךְ מֵתוּ כִּֽי־ (אם) ־אַמְנוֹן לְבַדּוֹ מֵֽת׃
34 ೩೪ ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.
וַיִּבְרַח אַבְשָׁלוֹם וַיִּשָּׂא הַנַּעַר הַצֹּפֶה אֶת־עֵינָו וַיַּרְא וְהִנֵּה עַם־רַב הֹלְכִים מִדֶּרֶךְ אַחֲרָיו מִצַּד הָהָֽר׃
35 ೩೫ ಯೋನಾದಾಬನು ಅರಸನಿಗೆ, “ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೆ ಆಯಿತಲ್ಲವೋ?” ಎಂದು ಹೇಳಿ ಮುಗಿಸುವಷ್ಟರಲ್ಲಿ,
וַיֹּאמֶר יֽוֹנָדָב אֶל־הַמֶּלֶךְ הִנֵּה בְנֵי־הַמֶּלֶךְ בָּאוּ כִּדְבַר עַבְדְּךָ כֵּן הָיָֽה׃
36 ೩೬ ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.
וַיְהִי ׀ כְּכַלֹּתוֹ לְדַבֵּר וְהִנֵּה בְנֵֽי־הַמֶּלֶךְ בָּאוּ וַיִּשְׂאוּ קוֹלָם וַיִּבְכּוּ וְגַם־הַמֶּלֶךְ וְכׇל־עֲבָדָיו בָּכוּ בְּכִי גָּדוֹל מְאֹֽד׃
37 ೩೭ ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.
וְאַבְשָׁלוֹם בָּרַח וַיֵּלֶךְ אֶל־תַּלְמַי בֶּן־[עַמִּיהוּד] (עמיחור) מֶלֶךְ גְּשׁוּר וַיִּתְאַבֵּל עַל־בְּנוֹ כׇּל־הַיָּמִֽים׃
38 ೩೮ ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.
וְאַבְשָׁלוֹם בָּרַח וַיֵּלֶךְ גְּשׁוּר וַֽיְהִי־שָׁם שָׁלֹשׁ שָׁנִֽים׃
39 ೩೯ ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.
וַתְּכַל דָּוִד הַמֶּלֶךְ לָצֵאת אֶל־אַבְשָׁלוֹם כִּי־נִחַם עַל־אַמְנוֹן כִּי־מֵֽת׃

< ಸಮುವೇಲನು - ದ್ವಿತೀಯ ಭಾಗ 13 >