< ಸಮುವೇಲನು - ದ್ವಿತೀಯ ಭಾಗ 18 >

1 ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.
Daudi akawahesabu askari waliokuwa pamoja naye na akaweka akida wa elfu na akida wa mia juu yao.
2 ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.
Kisha Daudi akalipeleka jeshi, thelusi moja chini ya Yoabu, thelusi nyingine chini ya Abishai mwana wa Seruya, ndugu wa Yoabu, na thelusi nyingine tena chini ya Itai Mgiti. Mfalme akaliambia jeshi, “kwa hakika mimi mwenyewe pia nitakwenda pamoja nanyi.
3 ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
Lakini watu wakasema, “Wewe usiende vitani, kwani ikiwa tutakimbia hawatatujari sisi, ama nusu yetu wakifa hawatajari. Lakini wewe ni zaidi ya elfu kumi yetu sisi! Kwa hiyo ni afadhari zaidi ukitusaidia ukiwa mjini.”
4 ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
Hivyo mfalme akawajibu, “Nitafanya lolote lionekanalo jema machoni penu.” Mfalme akasimama kati ya lango la mji wakati jeshi lilipoondoka katika mamia na katika maelfu.
5 ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
Mfalme akawaagiza Yoabu, Abishai, na Itai kusema, “Mmtendee huyo kijana, Absalomu, kwa upole kwa ajili yangu.” Watu wote wakasikia jinsi mfalme alivyowaagiza maakida kuhusu Absalomu.
6 ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.
Hivyo jeshi likaenda nyikani dhidi ya Israeli; vita ikaenea katika msitu wa Efraimu.
7 ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.
Jeshi la Israeli likashindwa mbele ya askari wa Daudi; kulikuwa na machinjo makuu kwa watu elfu ishirini siku hiyo.
8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
Vita ikaenea katika eneo lote na watu wengi wakaangamizwa na msitu kuliko upanga.
9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
Ikatukia kwamba Absalomu akakutana na askari wa Daudi. Absalomu alikuwa amepanda juu ya nyumbu wake na nyumbu akapita chini ya matawi manene ya mti wa mwaloni, na kichwa chake kikanaswa katika matawi ya mti. Akaachwa akining'inia kati ya nchi na anga wakati nyumbu alipoendelea mbele.
10 ೧೦ ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.
Mtu mmoja akaona lililotukia na akamwambia Yoabu, “Tazama, nilimwona Absalomu akining'inia katika mwaloni!”
11 ೧೧ ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.
Yoabu akamwambia aliyemwambia kuhusu Absalomu, “Tazama! Ulimwona! Kwa nini haukumpiga hata chini. Ningekupa shekeli kumi za fedha na mkanda.”
12 ೧೨ ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?
Yule mtu akamjibu Yoabu, “Hata kama ningepewa shekeli elfu za fedha hata hivyo nisingeinua mkono wangu juu ya mwana wa mfalme, kwa maana sisi sote tulimsikia mfalme akiwaagiza wewe, Abishai na Itai kusema, mtu asimguse huyo kijana Absalomu.'
13 ೧೩ ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.
Ikiwa ningehatarisha maisha yangu kwa uongo(na hakuna jambo linalofichika kwa mfalme), ungejitenga nami.”
14 ೧೪ ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ
Ndipo Yoabu aliposema, “sitakusubiri.” Kisha akachukua mishale mitatu mkononi mwake na akairusha katika moyo wa Absalomu wakati yu ngali hai na amening'inia katika mwaloni.
15 ೧೫ ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.
Kisha vijana kumi waliochukua slaha za Yoabu wakamzunguka Absalomu, wakampiga na kumwua.
16 ೧೬ ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.
Kisha Yoabu akapiga tarumbeta na jeshi likarudi kutoka kuwafuatia Israeli, hivyo Yoabu akalirudisha jeshi.
17 ೧೭ ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
Wakamchukua Absalomu na kumtupa katika shimo kubwa msituni; wakaufukia mwili wake chini ya rundo kubwa la mawe, wakati Israeli wote walipokimbia kila mtu nyumbani kwake.
18 ೧೮ ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.
Wakati Absalomu alipokuwa yu ngali hai alijijengea nguzo kubwa ya jiwe katika Bonde la Mfalme, kwani alisema, “Sina mwana wa kuchukua kumbukumbu ya jina langu.” Akaiita nguzo kwa jina lake, hivyo inaitwa Mnara wa Absalomu hata leo.
19 ೧೯ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.
Kisha Ahimaasi mwana wa Sadoki akasema, “Niruhusu niende kwa mfalme na habari njema, jinsi Yahwe alivyomwokoa kutoka mkono wa adui zake.”
20 ೨೦ ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
Yoabu akamjibu, “Wewe hautakuwa mchukua habari leo; utafanya hivyo siku nyingine. Leo hautachukua habari yoyote kwa maana mwana wa mfalme ameuawa.”
21 ೨೧ ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
Ndipo Yoabu akamwambia Mkushi, “Nenda umwambia mfalme ulichokiona.” Mkushi akamwinamia Yoabu, na kisha akakimbia.
22 ೨೨ ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು.
Kisha tena, Ahimaasi mwana wa Sadoki akamwambia Yoabu, “Pamoja na yote yanayoweza kutokea, tafadhari niruhusu nami pia niende nimfuate Mkushi.” Yoabu akajibu, “Mwanangu kwa nini unataka kwenda, hautapata thawabu yoyote kwa ajili ya habari hii?”
23 ೨೩ ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.
“Vyovyote itakavyokuwa niache niende,” Ahimaasi alijibu. Hivyo Yoabu akamjibu, “Nenda.” Ndipo Ahimaasi akakimbia kwa njia ya tambarare na akampita Mkushi.
24 ೨೪ ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
Basi Daudi alikuwa amekaa kati ya lango la ndani na lango la nje. Na mlinzi alikuwa juu ya lango ukutani naye akainua macho yake. Alipokuwa akiangalia, akamwona mtu anakaribia huku akikimbia peke yake.
25 ೨೫ ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
Mlinzi akaita kwa sauti na kumwambia mfalme. Ndipo mfalme akasema, “Ikiwa yupo peke yake ana habari katika kinywa chake.” Mkimbiaji akasogea na kuukaribia mji.
26 ೨೬ ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.
Kisha mlinzi akaona mtu mwingine aliyekuwa anakimbia, naye akamwambia bawabu; kusema, “Tazama, kuna mtu mwingine anakimbia peke yake.” Mfalme akasema, “Yeye pia analeta habari.”
27 ೨೭ ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.
Ndipo mlinzi akasema, Nadhani kukimbia kwake mtu aliye mbele ni kama kukimbia kwake Ahimaasi mwana wa Sadoki.” Mfalme akasema, “Yeye ni mtu mwema naye anakuja na habari njema.”
28 ೨೮ ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
Ndipo Ahimaasi akaita na kumwambia mfalme, “Yote ni mema.” Kisha akainama yeye mwenyewe uso wake chini mbele ya mfalme na kusema, Atukuzwe Yahwe Mungu wako, aliyewatoa watu walioinua mkono wao kinyume cha bwana wangu mfalme.”
29 ೨೯ ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.
Hivyo mfalme akauliza, “Je huyo kijana Absalomu hajambo?” Ahimaasi akajibu, “Wakati Yoabu ananituma kwako mfalme, mimi mtumishi wa mfalme, niliona fujo kubwa sana lakini sikutambua ilihusu nini.”
30 ೩೦ ಆಗ ಅರಸನು ಅವನಿಗೆ, “ನೀನು ಇತ್ತ ನಿಲ್ಲು” ಎಂದು ಆಜ್ಞಾಪಿಸಿದನು. ಅವನು ನಿಂತನು.
Mfalme akamwambia, “Geuka usimame kando.” Hivyo Ahimaasi akageuka na kusimama.
31 ೩೧ ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.
Mara Mkushi akafika na kusema, “Kuna habari njema kwa bwana wangu mfalme kwa kuwa leo Yahwe amekulipia kisasi kwa wale wote walioinuka kinyume chako.”
32 ೩೨ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.
Ndipo mfalme akamwuliza, “Je huyo kijana Absalomu ni mzima?” Mkushi akajibu, “Adui wa bwana wangu mfalme na wote wainukao kukudhuru na wawe kama huyo kijana.”
33 ೩೩ ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.
Ndipo mfalme alipohuzunishwa sana naye akaenda chumbani juu ya lango na kulia. Kadili alivyokwenda aliomboleza, mwanangu Absalomu, mwanangu, mwanangu Absalomu! afadhari ningekufa badala yako, Absalomu, mwanangu, mwanangu!”

< ಸಮುವೇಲನು - ದ್ವಿತೀಯ ಭಾಗ 18 >