< ಸಮುವೇಲನು - ದ್ವಿತೀಯ ಭಾಗ 23 >

1 ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:
«Oracolo di Davide, figlio di Iesse, oracolo dell'uomo che l'Altissimo ha innalzato, del consacrato del Dio di Giacobbe, del soave cantore d'Israele. Queste sono le ultime parole di Davide:
2 “ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು.
Lo spirito del Signore parla in me, la sua parola è sulla mia lingua;
3 ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,
il Dio di Giacobbe ha parlato, la rupe d'Israele mi ha detto: Chi governa gli uomini ed è giusto, chi governa con timore di Dio,
4 ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.
è come la luce del mattino al sorgere del sole, in un mattino senza nubi, che fa scintillare dopo la pioggia i germogli della terra.
5 ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?
Così è stabile la mia casa davanti a Dio, perché ha stabilito con me un'alleanza eterna, in tutto regolata e garantita. Non farà dunque germogliare quanto mi salva e quanto mi diletta?
6 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,
Ma gli scellerati sono come spine, che si buttano via a fasci e non si prendono con la mano;
7 ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”
chi le tocca usa un ferro o un'asta di lancia e si bruciano al completo nel fuoco».
8 ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
Questi sono i nomi dei prodi di Davide: Is-Bàal il Cacmonita, capo dei Tre. Egli impugnò la lancia contro ottocento uomini e li trafisse in un solo scontro.
9 ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
Dopo di lui veniva Eleàzaro figlio di Dodò l'Acochita, uno dei tre prodi che erano con Davide, quando sfidarono i Filistei schierati in battaglia, mentre gli Israeliti si ritiravano sulle alture.
10 ೧೦ ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.
Egli si alzò, percosse i Filistei, finché la sua mano, sfinita, rimase attaccata alla spada. Il Signore concesse in quel giorno una grande vittoria e il popolo seguì Eleàzaro soltanto per spogliare i cadaveri.
11 ೧೧ ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.
Dopo di lui veniva Sammà figlio di Aghè, l'Ararita. I Filistei erano radunati a Lechì; in quel luogo vi era un campo pieno di lenticchie: mentre il popolo fuggiva dinanzi ai Filistei,
12 ೧೨ ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.
Sammà si piantò in mezzo al campo, lo difese e sconfisse i Filistei. E il Signore concesse una grande vittoria.
13 ೧೩ ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,
Tre dei Trenta scesero al tempo della mietitura e vennero da Davide nella caverna di Adullàm, mentre una schiera di Filistei era accampata nella valle dei Rèfaim.
14 ೧೪ ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.
Davide era allora nella fortezza e c'era un appostamento di Filistei a Betlemme.
15 ೧೫ ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು.
Davide espresse un desiderio e disse: «Se qualcuno mi desse da bere l'acqua del pozzo che è vicino alla porta di Betlemme!».
16 ೧೬ ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
I tre prodi si aprirono un varco attraverso il campo filisteo, attinsero l'acqua dal pozzo di Betlemme, vicino alla porta, la presero e la presentarono a Davide; il quale però non ne volle bere, ma la sparse davanti al Signore,
17 ೧೭ ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.
dicendo: «Lungi da me, Signore, il fare tal cosa! E' il sangue di questi uomini, che sono andati là a rischio della loro vita!». Non la volle bere. Questo fecero quei tre prodi.
18 ೧೮ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.
Abisài, fratello di Ioab, figlio di Zeruià, fu il capo dei Trenta. Egli impugnò la lancia contro trecento uomini e li trafisse; si acquistò fama fra i trenta.
19 ೧೯ ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?
Fu il più glorioso dei Trenta e perciò fu fatto loro capo, ma non giunse alla pari dei Tre.
20 ೨೦ ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
Poi veniva Benaià, figlio di Ioiadà, uomo valoroso, celebre per le sue prodezze, oriundo da Cabseèl. Egli uccise i due figli di Arièl, di Moab. Scese anche in mezzo a una cisterna, dove uccise un leone, in un giorno di neve.
21 ೨೧ ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
Uccise anche un Egiziano, uomo d'alta statura, che teneva una lancia in mano; Benaià gli scese contro con un bastone, strappò di mano all'Egiziano la lancia e lo uccise con la lancia di lui.
22 ೨೨ ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.
Questo fece Benaià figlio di Ioiadà, e si acquistò fama tra i trenta prodi.
23 ೨೩ ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
Fu il più illustre dei Trenta, ma non giunse alla pari dei Tre. Davide lo ammise nel suo consiglio.
24 ೨೪ ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು,
Poi vi erano Asaèl fratello di Ioab, uno dei Trenta; Elcanàn figlio di Dodò, di Betlemme.
25 ೨೫ ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ್, ಹರೋದಿನವರಾದ ಶಮ್ಮ ಮತ್ತು ಎಲೀಕರು.
Sammà di Caròd; Elikà di Caròd;
26 ೨೬ ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,
Cèles di Pelèt; Ira figlio di Ikkès, di Tekòa;
27 ೨೭ ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,
Abièzer di Anatot; Mebunnài di Cusà;
28 ೨೮ ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,
Zalmòn di Acòach; Maharai di Netofà;
29 ೨೯ ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,
Chèleb figlio di Baanà, di Netofà; Ittài figlio di Ribài, di Gàbaa di Beniamino; Benaià di Piratòn;
30 ೩೦ ಪಿರಾತೋನ್ಯನಾದ ಬೆನಾಯ, ನಹಲೇ ಗಾಷಿನವನಾದ ಹಿದ್ದೈ.
Iddài di Nahale-Gaàs;
31 ೩೧ ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,
Abi-Albòn di Arbàt; Azmàvet di Bacurìm;
32 ೩೨ ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು, ಯೋನಾತಾನನು,
Eliacbà di Saalbòn; Iasèn di Gun;
33 ೩೩ ಹರಾರ್ಯನಾದ ಶಮ್ಮ, ಅರಾರ್ಯನಾದ ಶಾರಾರನ ಮಗ ಅಹೀಯಾಮ್,
Giònata figlio di Sammà, di Aràr; Achiàm figlio di Saràr, di Afàr;
34 ೩೪ ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,
Elifèlet figlio di Acasbài, il Maacatita; Eliàm figlio di Achitòfel, di Ghilo;
35 ೩೫ ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,
Chesrài del Carmelo; Paarài di Aràb;
36 ೩೬ ಚೋಬ ಊರಿನ ನಾತಾನ ಎಂಬುವನ ಮಗನಾದ ಇಗಾಲ್, ಗಾದ್ಯನಾದ ಬಾನೀ,
Igàl figlio di Natàn, da Zobà; Banì di Gad;
37 ೩೭ ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ
Zèlek l'Ammonita; Nacrai da Beeròt, scudiero di Ioab, figlio di Zeruià;
38 ೩೮ ಇತ್ರೀಯರಾದ ಈರಾ ಮತ್ತು ಗಾರೇಬರು,
Irà di Ièter; Garèb di Ièter;
39 ೩೯ ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.
Uria l'Hittita. In tutto trentasette.

< ಸಮುವೇಲನು - ದ್ವಿತೀಯ ಭಾಗ 23 >