< ಸಮುವೇಲನು - ದ್ವಿತೀಯ ಭಾಗ 1 >

1 ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು.
וַיְהִי אֽ͏ַחֲרֵי מוֹת שָׁאוּל וְדָוִד שָׁב מֵהַכּוֹת אֶת־הָעֲמָלֵק וַיֵּשֶׁב דָּוִד בְּצִקְלָג יָמִים שְׁנָֽיִם׃
2 ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.
וַיְהִי ׀ בַּיּוֹם הַשְּׁלִישִׁי וְהִנֵּה אִישׁ בָּא מִן־הַֽמַּחֲנֶה מֵעִם שָׁאוּל וּבְגָדָיו קְרֻעִים וַאֲדָמָה עַל־רֹאשׁוֹ וַיְהִי בְּבֹאוֹ אֶל־דָּוִד וַיִּפֹּל אַרְצָה וַיִּשְׁתָּֽחוּ׃
3 ದಾವೀದನು ಅವನನ್ನು, “ನೀನು ಎಲ್ಲಿಂದ ಬಂದಿ” ಎಂದು ಕೇಳಲು ಅವನು, “ನಾನು ಇಸ್ರಾಯೇಲರ ಠಾಣ್ಯದಿಂದ ತಪ್ಪಿಸಿಕೊಂಡು ಬಂದೆನು” ಎಂದು ಉತ್ತರಕೊಟ್ಟನು.
וַיֹּאמֶר לוֹ דָּוִד אֵי מִזֶּה תָּבוֹא וַיֹּאמֶר אֵלָיו מִמַּחֲנֵה יִשְׂרָאֵל נִמְלָֽטְתִּי׃
4 ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಆ ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು” ಎಂದು ತಿಳಿಸಿದನು.
וַיֹּאמֶר אֵלָיו דָּוִד מֶה־הָיָה הַדָּבָר הַגֶּד־נָא לִי וַיֹּאמֶר אֲשֶׁר־נָס הָעָם מִן־הַמִּלְחָמָה וְגַם־הַרְבֵּה נָפַל מִן־הָעָם וַיָּמֻתוּ וְגַם שָׁאוּל וִיהוֹנָתָן בְּנוֹ מֵֽתוּ׃
5 ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ “ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು” ಎಂದು ಪ್ರಶ್ನಿಸಲು ಅವನು,
וַיֹּאמֶר דָּוִד אֶל־הַנַּעַר הַמַּגִּיד לוֹ אֵיךְ יָדַעְתָּ כִּי־מֵת שָׁאוּל וִיהֽוֹנָתָן בְּנֽוֹ׃
6 “ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.
וַיֹּאמֶר הַנַּעַר ׀ הַמַּגִּיד לוֹ נִקְרֹא נִקְרֵיתִי בְּהַר הַגִּלְבֹּעַ וְהִנֵּה שָׁאוּל נִשְׁעָן עַל־חֲנִיתוֹ וְהִנֵּה הָרֶכֶב וּבַעֲלֵי הַפָּרָשִׁים הִדְבִּקֻֽהוּ׃
7 ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು.
וַיִּפֶן אַחֲרָיו וַיִּרְאֵנִי וַיִּקְרָא אֵלָי וָאֹמַר הִנֵּֽנִי׃
8 ನಾನು, ‘ಇಗೋ ಬಂದೆನು’ ಎಂದು ಹೇಳಿ ಹೋದಾಗ ಅವನು ‘ನೀನಾರು?’ ಎಂದು ಕೇಳಿದ್ದಕ್ಕೆ, ‘ನಾನು ಅಮಾಲೇಕ್ಯನು’ ಎಂದು ಉತ್ತರಕೊಟ್ಟೆನು.
וַיֹּאמֶר לִי מִי־אָתָּה ויאמר וָאֹמַר אֵלָיו עֲמָלֵקִי אָנֹֽכִי׃
9 ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ’ ಎಂದು ಹೇಳಿದನು.
וַיֹּאמֶר אֵלַי עֲמָד־נָא עָלַי וּמֹתְתֵנִי כִּי אֲחָזַנִי הַשָּׁבָץ כִּֽי־כָל־עוֹד נַפְשִׁי בִּֽי׃
10 ೧೦ ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ” ಅಂದನು.
וָאֶעֱמֹד עָלָיו וַאֲמֹתְתֵהוּ כִּי יָדַעְתִּי כִּי לֹא יִֽחְיֶה אַחֲרֵי נִפְלוֹ וָאֶקַּח הַנֵּזֶר ׀ אֲשֶׁר עַל־רֹאשׁוֹ וְאֶצְעָדָה אֲשֶׁר עַל־זְרֹעוֹ וָאֲבִיאֵם אֶל־אֲדֹנִי הֵֽנָּה׃
11 ೧೧ ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ
וַיַּחֲזֵק דָּוִד בבגדו בִּבְגָדָיו וַיִּקְרָעֵם וְגַם כָּל־הָאֲנָשִׁים אֲשֶׁר אִתּֽוֹ׃
12 ೧೨ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.
וַֽיִּסְפְּדוּ וַיִּבְכּוּ וַיָּצֻמוּ עַד־הָעָרֶב עַל־שָׁאוּל וְעַל־יְהוֹנָתָן בְּנוֹ וְעַל־עַם יְהוָה וְעַל־בֵּית יִשְׂרָאֵל כִּי נָפְלוּ בֶּחָֽרֶב׃
13 ೧೩ ದಾವೀದನು ವರ್ತಮಾನ ತಂದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು” ಎಂದು ಉತ್ತರಕೊಟ್ಟನು.
וַיֹּאמֶר דָּוִד אֶל־הַנַּעַר הַמַּגִּיד לוֹ אֵי מִזֶּה אָתָּה וַיֹּאמֶר בֶּן־אִישׁ גֵּר עֲמָלֵקִי אָנֹֽכִי׃
14 ೧೪ ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ
וַיֹּאמֶר אֵלָיו דָּוִד אֵיךְ לֹא יָרֵאתָ לִשְׁלֹחַ יָֽדְךָ לְשַׁחֵת אֶת־מְשִׁיחַ יְהוָֽה׃
15 ೧೫ ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು.
וַיִּקְרָא דָוִד לְאַחַד מֵֽהַנְּעָרִים וַיֹּאמֶר גַּשׁ פְּגַע־בּוֹ וַיַּכֵּהוּ וַיָּמֹֽת׃
16 ೧೬ ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.
וַיֹּאמֶר אֵלָיו דָּוִד דמיך דָּמְךָ עַל־רֹאשֶׁךָ כִּי פִיךָ עָנָה בְךָ לֵאמֹר אָנֹכִי מֹתַתִּי אֶת־מְשִׁיחַ יְהוָֽה׃
17 ೧೭ ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ,
וַיְקֹנֵן דָּוִד אֶת־הַקִּינָה הַזֹּאת עַל־שָׁאוּל וְעַל־יְהוֹנָתָן בְּנֽוֹ׃
18 ೧೮ ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ.
וַיֹּאמֶר לְלַמֵּד בְּנֵֽי־יְהוּדָה קָשֶׁת הִנֵּה כְתוּבָה עַל־סֵפֶר הַיָּשָֽׁר׃
19 ೧೯ “ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ.
הַצְּבִי יִשְׂרָאֵל עַל־בָּמוֹתֶיךָ חָלָל אֵיךְ נָפְלוּ גִבּוֹרִֽים׃
20 ೨೦ ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.
אַל־תַּגִּידוּ בְגַת אַֽל־תְּבַשְּׂרוּ בְּחוּצֹת אַשְׁקְלוֹן פֶּן־תִּשְׂמַחְנָה בְּנוֹת פְּלִשְׁתִּים פֶּֽן־תַּעֲלֹזְנָה בְּנוֹת הָעֲרֵלִֽים׃
21 ೨೧ ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.
הָרֵי בַגִּלְבֹּעַ אַל־טַל וְאַל־מָטָר עֲלֵיכֶם וּשְׂדֵי תְרוּמֹת כִּי שָׁם נִגְעַל מָגֵן גִּבּוֹרִים מָגֵן שָׁאוּל בְּלִי מָשִׁיחַ בַּשָּֽׁמֶן׃
22 ೨೨ ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.
מִדַּם חֲלָלִים מֵחֵלֶב גִּבּוֹרִים קֶשֶׁת יְהוֹנָתָן לֹא נָשׂוֹג אָחוֹר וְחֶרֶב שָׁאוּל לֹא תָשׁוּב רֵיקָֽם׃
23 ೨೩ ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.
שָׁאוּל וִיהוֹנָתָן הַנֶּאֱהָבִים וְהַנְּעִימִם בְּחַיֵּיהֶם וּבְמוֹתָם לֹא נִפְרָדוּ מִנְּשָׁרִים קַלּוּ מֵאֲרָיוֹת גָּבֵֽרוּ׃
24 ೨೪ ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?
בְּנוֹת יִשְׂרָאֵל אֶל־שָׁאוּל בְּכֶינָה הַמַּלְבִּֽשְׁכֶם שָׁנִי עִם־עֲדָנִים הַֽמַּעֲלֶה עֲדִי זָהָב עַל לְבוּשְׁכֶֽן׃
25 ೨೫ ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ
אֵיךְ נָפְלוּ גִבֹּרִים בְּתוֹךְ הַמִּלְחָמָה יְהוֹנָתָן עַל־בָּמוֹתֶיךָ חָלָֽל׃
26 ೨೬ ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.
צַר־לִי עָלֶיךָ אָחִי יְהוֹנָתָן נָעַמְתָּ לִּי מְאֹד נִפְלְאַתָה אַהֲבָֽתְךָ לִי מֵאַהֲבַת נָשִֽׁים׃
27 ೨೭ ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.”
אֵיךְ נָפְלוּ גִבּוֹרִים וַיֹּאבְדוּ כְּלֵי מִלְחָמָֽה׃

< ಸಮುವೇಲನು - ದ್ವಿತೀಯ ಭಾಗ 1 >