< ಥೆಸಲೋನಿಕದವರಿಗೆ ಎರಡನೆಯ ಪತ್ರಿಕೆ 3 >

1 ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
V ostalem, molite, bratje, za nas, da se širi beseda Gospodova in slaví, kakor tudi pri vas,
2 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.
In da se rešimo nespametnih in hudobnih ljudî; kajti vera ni vseh.
3 ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
Zvest pa je Gospod, kateri vas bode utrdil in branil zlega,
4 ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.
Zaupamo pa v Gospodu vam, da kar vam naročamo, tudi delate in bodete delali.
5 ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
Gospod pa naj vodi srca vaša v ljubezen Božjo, in v stanovitnost Kristusovo.
6 ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
Naročamo pa vam, bratje, v imenu Gospoda našega Jezusa Kristusa, da se ogibljete vsakega brata, kateri živi neredno in ne po sporočilu, katero je prejel od nas.
7 ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
Kajti sami veste, kako je nas posnemati treba;
8 ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
Ker nismo bili neredni med vami, in ne zastonj kruha jedli od koga, nego s trudom in težavo smo delali noč in dan, da bi ne nadlegovali koga izmed vas;
9 ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.
Ne da bi ne imeli oblasti, nego da se vam damo v zgled, da nas posnemate.
10 ೧೦ ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
Saj smo tudi, ko smo bili pri vas, to naročali vam, da če kdo noče delati, naj tudi ne jé.
11 ೧೧ ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.
Čujemo namreč, da nekateri med vami neredno živé, in ne delajo nič, nego pečajo se z nepotrebnim.
12 ೧೨ ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
Takim pa naročamo in jih opominjamo po Gospodu našem Jezusu Kristusu, da naj v miru delajoč svoj kruh jedó.
13 ೧೩ ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
Vi pa, bratje, ne opešajte v dobrem dejanji.
14 ೧೪ ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
Če pa kdo ne sluša besede naše po listu, njega zaznamovajte, in ne pečajte se z njim, da ga bode sram;
15 ೧೫ ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.
In ne imejte ga za sovražnika, nego svarite kakor brata.
16 ೧೬ ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
On pa, Gospod mirú, daj vam mir vedno, vsakoršen. Gospod z vami vsemi!
17 ೧೭ ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.
Pozdrav z mojo roko Pavlovo, kar je znamenje v vsakem listu; tako pišem.
18 ೧೮ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.
Milost Gospoda našega Jezusa Kristusa z vsemi vami! Amen. Tesaloničanom list drugi pisan iz Atén.

< ಥೆಸಲೋನಿಕದವರಿಗೆ ಎರಡನೆಯ ಪತ್ರಿಕೆ 3 >