< ಅಪೊಸ್ತಲರ ಕೃತ್ಯಗಳ 12 >

1 ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.
Now about that time Herod the king stretched forth his hands to afflict certain of the church.
2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
And he killed James the brother of John with the sword.
3 ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
And because he saw it pleased the Jews, he proceeded further to take Peter also. ( Then were the days of unleavened bread.)
4 ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
And when he had apprehended him, he put him in prison, and delivered him to four quaternions of soldiers to keep him; intending after the Passover to bring him forth to the people.
5 ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.
Peter therefore was kept in prison: but prayer was made without ceasing by the church to God for him.
6 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
And when Herod would have brought him forth, the same night Peter was sleeping between two soldiers, bound with two chains: and the keepers before the door kept the prison.
7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
And, behold, the angel of the Lord came upon him, and a light shone in the prison: and he smote Peter on the side, and raised him up, saying, Arise quickly. And his chains fell off from his hands.
8 ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.
And the angel said to him, Gird thyself, and bind on thy sandals. And so he did. And he saith to him, Cast thy garment about thee, and follow me.
9 ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು.
And he went out, and followed him; and knew not that it was true which was done by the angel; but thought he saw a vision.
10 ೧೦ ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
When they were past the first and the second guard, they came to the iron gate that leadeth to the city; which opened to them of its own accord: and they went out, and passed on through one street; and immediately the angel departed from him.
11 ೧೧ ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.
And when Peter had come to himself, he said, Now I know with certainty, that the Lord hath sent his angel, and hath delivered me out of the hand of Herod, and from all the expectation of the people of the Jews.
12 ೧೨ ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.
And when he had considered the thing, he came to the house of Mary the mother of John, whose surname was Mark; where many were gathered together praying.
13 ೧೩ ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.
And as Peter knocked at the door of the gate, a maid came to answer, named Rhoda.
14 ೧೪ ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು.
And when she knew Peter’s voice, she opened not the gate for gladness, but ran in, and told that Peter stood before the gate.
15 ೧೫ ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.
And they said to her, Thou art mad. But she constantly affirmed that it was even so. Then they said, It is his angel.
16 ೧೬ ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
But Peter continued knocking: and when they had opened the door, and saw him, they were astonished.
17 ೧೭ ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
But he, beckoning to them with the hand to hold their peace, declared to them how the Lord had brought him out of the prison. And he said, Go show these things to James, and to the brethren. And he departed, and went into another place.
18 ೧೮ ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.
Now as soon as it was day, there was no small stir among the soldiers, what was become of Peter.
19 ೧೯ ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
And when Herod had sought for him, and found him not, he examined the keepers, and commanded that they should be put to death. And he went down from Judaea to Caesarea, and there abode.
20 ೨೦ ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.
And Herod was highly displeased with them of Tyre and Sidon: but they came with one accord to him, and, having made Blastus the king’s chamberlain their friend, desired peace; because their country was nourished by the king’s country.
21 ೨೧ ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.
And upon a set day Herod, arrayed in royal apparel, sat upon his throne, and made an oration to them.
22 ೨೨ ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.
And the people gave a shout, saying, It is the voice of a god, and not of a man.
23 ೨೩ ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
And immediately the angel of the Lord smote him, because he gave not God the glory: and he was eaten by worms, and died.
24 ೨೪ ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು.
But the word of God grew and multiplied.
25 ೨೫ ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
And Barnabas and Saul returned from Jerusalem, when they had fulfilled their ministry, and took with them John, whose surname was Mark.

< ಅಪೊಸ್ತಲರ ಕೃತ್ಯಗಳ 12 >