< ಅಪೊಸ್ತಲರ ಕೃತ್ಯಗಳ 17 >

1 ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.
And when they had passed through Amphipolis and Apollonia, they came to Thessalonica, where there was a synagogue of the Jews.
2 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,
And Paul, according to his custom, went in unto them; and for three sabbath days he reasoned with them out of the scriptures:
3 ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
Declaring and insinuating that the Christ was to suffer, and to rise again from the dead; and that this is Jesus Christ, whom I preach to you.
4 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
And some of them believed, and were associated to Paul and Silas; and of those that served God, and of the Gentiles a great multitude, and of noble women not a few.
5 ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
But the Jews, moved with envy, and taking unto them some wicked men of the vulgar sort, and making a tumult, set the city in an uproar; and besetting Jason’s house, sought to bring them out unto the people.
6 ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
And not finding them, they drew Jason and certain brethren to the rulers of the city, crying: They that set the city in an uproar, are come hither also;
7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.
Whom Jason hath received; and these all do contrary to the decrees of Caesar, saying that there is another king, Jesus.
8 ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು
And they stirred up the people, and the rulers of the city hearing these things,
9 ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.
And having taken satisfaction of Jason and of the rest, they let them go.
10 ೧೦ ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
But the brethren immediately sent away Paul and Silas by night unto Berea. Who, when they were come thither, went into the synagogue of the Jews.
11 ೧೧ ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
Now these were more noble than those in Thessalonica, who received the word with all eagerness, daily searching the scriptures, whether these things were so.
12 ೧೨ ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.
And many indeed of them believed, and of honourable women that were Gentiles, and of men not a few.
13 ೧೩ ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
And when the Jews of Thessalonica had knowledge that the word of God was also preached by Paul at Berea, they came thither also, stirring up and troubling the multitude.
14 ೧೪ ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
And then immediately the brethren sent away Paul, to go unto the sea; but Silas and Timothy remained there.
15 ೧೫ ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.
And they that conducted Paul, brought him as far as Athens; and receiving a commandment from him to Silas and Timothy, that they should come to him with all speed, they departed.
16 ೧೬ ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.
Now whilst Paul waited for them at Athens, his spirit was stirred within him, seeing the city wholly given to idolatry.
17 ೧೭ ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.
He disputed, therefore, in the synagogue with the Jews, and with them that served God, and in the marketplace, every day with them that were there.
18 ೧೮ ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
And certain philosophers of the Epicureans and of the Stoics disputed with him; and some said: What is it, that this word sower would say? But others: He seemeth to be a setter forth of new gods; because he preached to them Jesus and the resurrection.
19 ೧೯ ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?
And taking him, they brought him to the Areopagus, saying: May we know what this new doctrine is, which thou speakest of?
20 ೨೦ ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.
For thou bringest in certain new things to our ears. We would know therefore what these things mean.
21 ೨೧ ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.
(Now all the Athenians, and strangers that were there, employed themselves in nothing else, but either in telling or in hearing some new thing.)
22 ೨೨ ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.
But Paul standing in the midst of the Areopagus, said: Ye men of Athens, I perceive that in all things you are too superstitious.
23 ೨೩ ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.
For passing by, and seeing your idols, I found an altar also, on which was written: To the unknown God. What therefore you worship, without knowing it, that I preach to you:
24 ೨೪ “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
God, who made the world, and all things therein; he, being Lord of heaven and earth, dwelleth not in temples made with hands;
25 ೨೫ ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.
Neither is he served with men’s hands, as though he needed any thing; seeing it is he who giveth to all life, and breath, and all things:
26 ೨೬ ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,
And hath made of one, all mankind, to dwell upon the whole face of the earth, determining appointed times, and the limits of their habitation.
27 ೨೭ ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.
That they should seek God, if happily they may feel after him or find him, although he be not far from every one of us:
28 ೨೮ ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
For in him we live, and move, and are; as some also of your own poets said: For we are also his offspring.
29 ೨೯ “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.
Being therefore the offspring of God, we must not suppose the divinity to be like unto gold, or silver, or stone, the graving of art, and device of man.
30 ೩೦ ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
And God indeed having winked at the times of this ignorance, now declareth unto men, that all should every where do penance.
31 ೩೧ ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
Because he hath appointed a day wherein he will judge the world in equity, by the man whom he hath appointed; giving faith to all, by raising him up from the dead.
32 ೩೨ ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
And when they had heard of the resurrection of the dead, some indeed mocked, but others said: We will hear thee again concerning this matter.
33 ೩೩ ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
So Paul went out from among them.
34 ೩೪ ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.
But certain men adhering to him, did believe; among whom was also Dionysius, the Areopagite, and a woman named Damaris, and others with them.

< ಅಪೊಸ್ತಲರ ಕೃತ್ಯಗಳ 17 >