< ಅಪೊಸ್ತಲರ ಕೃತ್ಯಗಳ 18 >

1 ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.
And after these things, Paul having departed out of Athens, came to Corinth,
2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.
and having found a certain Jew, by name Aquilas, of Pontus by birth, lately come from Italy, and Priscilla his wife — because of Claudius having directed all the Jews to depart out of Rome — he came to them,
3 ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
and because of being of the same craft, he did remain with them, and was working, for they were tent-makers as to craft;
4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
and he was reasoning in the synagogue every sabbath, persuading both Jews and Greeks.
5 ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
And when both Silas and Timotheus came down from Macedonia, Paul was pressed in the Spirit, testifying fully to the Jews Jesus the Christ;
6 ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,
and on their resisting and speaking evil, having shaken [his] garments, he said unto them, 'Your blood [is] upon your head — I am clean; henceforth to the nations I will go on.'
7 ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.
And having departed thence, he went to the house of a certain one, by name Justus, a worshipper of God, whose house was adjoining the synagogue,
8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
and Crispus, the ruler of the synagogue did believe in the Lord with all his house, and many of the Corinthians hearing were believing, and they were being baptized.
9 ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,
And the Lord said through a vision in the night to Paul, 'Be not afraid, but be speaking and thou mayest be not silent;
10 ೧೦ ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.
because I am with thee, and no one shall set on thee to do thee evil; because I have much people in this city;'
11 ೧೧ ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.
and he continued a year and six months, teaching among them the word of God.
12 ೧೨ ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;
And Gallio being proconsul of Achaia, the Jews made a rush with one accord upon Paul, and brought him unto the tribunal,
13 ೧೩ “ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.
saying — 'Against the law this one doth persuade men to worship God;'
14 ೧೪ ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.
and Paul being about to open [his] mouth, Gallio said unto the Jews, 'If, indeed, then, it was anything unrighteous, or an act of wicked profligacy, O Jews, according to reason I had borne with you,
15 ೧೫ ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,
but if it is a question concerning words and names, and of your law, look ye yourselves [to it], for a judge of these things I do not wish to be,'
16 ೧೬ ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.
and he drave them from the tribunal;
17 ೧೭ ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.
and all the Greeks having taken Sosthenes, the chief man of the synagogue, were beating [him] before the tribunal, and not even for these things was Gallio caring.
18 ೧೮ ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
And Paul having remained yet a good many days, having taken leave of the brethren, was sailing to Syria — and with him [are] Priscilla and Aquilas — having shorn [his] head in Cenchera, for he had a vow;
19 ೧೯ ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
and he came down to Ephesus, and did leave them there, and he himself having entered into the synagogue did reason with the Jews:
20 ೨೦ ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,
and they having requested [him] to remain a longer time with them, he did not consent,
21 ೨೧ “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,
but took leave of them, saying, 'It behoveth me by all means the coming feast to keep at Jerusalem, and again I will return unto you — God willing.' And he sailed from Ephesus,
22 ೨೨ ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.
and having come down to Caesarea, having gone up, and having saluted the assembly, he went down to Antioch.
23 ೨೩ ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.
And having made some stay he went forth, going through in order the region of Galatia and Phrygia, strengthening all the disciples.
24 ೨೪ ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.
And a certain Jew, Apollos by name, an Alexandrian by birth, a man of eloquence, being mighty in the Writings, came to Ephesus,
25 ೨೫ ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.
this one was instructed in the way of the Lord, and being fervent in the Spirit, was speaking and teaching exactly the things about the Lord, knowing only the baptism of John;
26 ೨೬ ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
this one also began to speak boldly in the synagogue, and Aquilas and Priscilla having heard of him, took him to [them], and did more exactly expound to him the way of God,
27 ೨೭ ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.
and he being minded to go through into Achaia, the brethren wrote to the disciples, having exhorted them to receive him, who having come, did help them much who have believed through the grace,
28 ೨೮ ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.
for powerfully the Jews he was refuting publicly, shewing through the Writings Jesus to be the Christ.

< ಅಪೊಸ್ತಲರ ಕೃತ್ಯಗಳ 18 >