< ಅಪೊಸ್ತಲರ ಕೃತ್ಯಗಳ 5 >

1 ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ
But a certain man named Ananias, with Sapphira his wife, sold a possession,
2 ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
And kept back part of the price, his wife also knowing of it, and brought a certain part, and laid it at the apostles’ feet.
3 ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
But Peter said, Ananias, why hath Satan filled thy heart to lie to the Holy Spirit, and to keep back part of the price of the land?
4 ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
While it remained, was it not thy own? and after it was sold, was it not in thy own power? why hast thou conceived this thing in thy heart? thou hast not lied to men, but to God.
5 ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
And Ananias hearing these words fell down, and died: and great fear came on all them that heard these things.
6 ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.
And the young men arose, wrapped him up, and carried him out, and buried him.
7 ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
And it was about the space of three hours after, when his wife, not knowing what was done, came in.
8 ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.
And Peter answered to her, Tell me whether ye sold the land for so much? And she said, Yea, for so much.
9 ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
Then Peter said to her, How is it that ye have agreed together to tempt the Spirit of the Lord? behold, the feet of them who have buried thy husband are at the door, and shall carry thee out.
10 ೧೦ ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
Then she fell down immediately at his feet, and died: and the young men came in, and found her dead, and, carrying her forth, buried her by her husband.
11 ೧೧ ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.
And great fear came upon all the church, and upon as many as heard these things.
12 ೧೨ ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
And by the hands of the apostles were many signs and wonders wrought among the people; ( and they were all with one accord in Solomon’s porch.
13 ೧೩ ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.
And of the rest dared no man join himself to them: but the people magnified them.
14 ೧೪ ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.
And believers were the more added to the Lord, multitudes both of men and women.)
15 ೧೫ ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
So that they brought forth the sick into the streets, and laid them on beds and couches, that at the least the shadow of Peter passing by might overshadow some of them.
16 ೧೬ ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.
There came also a multitude out of the surrounding cities to Jerusalem, bringing sick persons, and them who were afflicted with unclean spirits: and they were healed every one.
17 ೧೭ ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,
Then the high priest rose up, and all they that were with him, ( which is the sect of the Sadducees, ) and were filled with indignation,
18 ೧೮ ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
And laid their hands on the apostles, and put them in the common prison.
19 ೧೯ ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
But the angel of the Lord by night opened the prison doors, and brought them forth, and said,
20 ೨೦ “ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.
Go, stand and speak in the temple to the people all the words of this life.
21 ೨೧ ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.
And when they heard that, they entered into the temple early in the morning, and taught. But the high priest came, and they that were with him, and called the council together, and all the elders of the children of Israel, and sent to the prison to have them brought.
22 ೨೨ ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,
But when the officers came, and found them not in the prison, they returned, and told,
23 ೨೩ “ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
Saying, The prison truly we found shut with all safety, and the keepers standing outside before the doors: but when we had opened, we found no man within.
24 ೨೪ ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.
Now when the high priest and the captain of the temple and the chief priests heard these things, they were greatly perplexed about them as to what would come of this.
25 ೨೫ ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.
Then came one and told them, saying, Behold, the men whom ye put in prison are standing in the temple, and teaching the people.
26 ೨೬ ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
Then went the captain with the officers, and brought them without violence: for they feared the people, lest they should have been stoned.
27 ೨೭ ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,
And when they had brought them, they set them before the council: and the high priest asked them,
28 ೨೮ “ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.
Saying, Did we not strictly command you that ye should not teach in this name? and, behold, ye have filled Jerusalem with your doctrine, and intend to bring this man’s blood upon us.
29 ೨೯ ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
Then Peter and the other apostles answered and said, We ought to obey God rather than men.
30 ೩೦ ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.
The God of our fathers raised up Jesus, whom ye slew and hanged on a tree.
31 ೩೧ ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
Him hath God exalted with his right hand to be a Prince and a Saviour, to give repentance to Israel, and forgiveness of sins.
32 ೩೨ ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.
And we are his witnesses of these things; and so is also the Holy Spirit, whom God hath given to them that obey him.
33 ೩೩ ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.
When they heard that, they were cut to the heart, and took counsel to slay them.
34 ೩೪ ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
Then stood up one in the council, a Pharisee, named Gamaliel, a teacher of the law, had in reputation among all the people, and commanded to put the apostles forth a little time;
35 ೩೫ ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.
And said to them, Ye men of Israel, take heed to yourselves what ye intend to do concerning these men.
36 ೩೬ ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
For before these days rose Theudas, boasting himself to be somebody; to whom a number of men, about four hundred, joined themselves: who was slain; and all, as many as obeyed him, were scattered, and brought to nought.
37 ೩೭ ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
After this man rose Judas of Galilee in the days of the taxing, and drew away many people after him: he also perished; and all, even as many as obeyed him, were dispersed.
38 ೩೮ ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
And now I say to you, Stay away from these men, and let them alone: for if this counsel or this work is from men, it will come to nothing:
39 ೩೯ ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.
But if it is from God, ye cannot overthrow it; lest perhaps ye be found even to fight against God.
40 ೪೦ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
And to him they assented: and when they had called the apostles, and beaten them, they commanded that they should not speak in the name of Jesus, and let them go.
41 ೪೧ ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
And they departed from the presence of the council, rejoicing that they were counted worthy to suffer shame for his name.
42 ೪೨ ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.
And daily in the temple, and in every house, they ceased not to teach and preach Jesus Christ.

< ಅಪೊಸ್ತಲರ ಕೃತ್ಯಗಳ 5 >