< ಅಪೊಸ್ತಲರ ಕೃತ್ಯಗಳ 6 >

1 ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.
О Но не можаха да противостоят на мъдростта и Духа с който той говореше.
2 ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.
По това, дванадесетте свикаха всичките ученици и рекоха: Не е добре ние да оставим Божието слово и да прислужваме на трапези.
3 ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.
И тъй, братя, изберете измежду вас седем души с удобрен характер, изпълнени с Духа и с мъдрост, които да поставим на тая работа.
4 ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.
А ние ще постоянствуваме в молитвата и в служение на словото.
5 ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.
И това предложение се хареса на цялото множество; и избраха Стефана, мъж пълен с вяра и със Светия Дух, и Филипа, Прохора, Никанора, Тимона, Пармена и Николая, е д и н прозелит от Антиохия,
6 ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.
Тях поставиха пред апостолите; и те, като се помолиха, положиха ръце на тях.
7 ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.
И Божието учение растеше, и числото на учениците в Ерусалим се умножаваше твърде много; и голямо множество от свещениците се подчиняваха на вярата.
8 ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.
А Стефан, пълен с благодат и сила, вършеше големи чудеса и знамения между людете.
9 ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
Тогава някои от синагогата, наречена Синагога на Либертинците, и от Киринейците и Александринците, и от Киликия и Азия, подигнаха се и се препираха със Стефана.
10 ೧೦ ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.
Но не можаха да противостоят на мъдростта и Духа, с който той говореше.
11 ೧೧ ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.
Тогава подучиха човеци да казват: Чухме го да говори хулни думи против Мойсея и против Бога.
12 ೧೨ ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.
И подбудиха людете със старейшините и книжниците, и, като дойдоха върху него, уловиха го и го докараха в синедриона,
13 ೧೩ ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.
дето поставиха лъжесвидетели, които казаха: Т о я човек говори думи против това свето място и против закона;
14 ೧೪ ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.
защото го чухме да казва, че тоя Исус Назарянин ще разруши това място, и ще измени обредите, които Моисей ни е предал.
15 ೧೫ ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.
И всички, които седяха в синедриона, като се вгледаха в него, видяха лицето му като че беше лице на ангел.

< ಅಪೊಸ್ತಲರ ಕೃತ್ಯಗಳ 6 >