< ಆಮೋಸನು 6 >

1 ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!
화 있을진저 시온에서 안일한 자와 사마리아 산에서 마음이 든든한 자 곧 열국 중 우승하여 유명하므로 이스라엘 족속이 따르는 자들이여
2 ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”
너희는 갈레에 건너가고 거기서 대 하맛으로 가고 또 블레셋 사람의 가드로 내려가 보라 그곳들이 이 나라들보다 나으냐 그 토지가 너희 토지보다 넓으냐
3 ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.
너희는 흉한 날이 멀다 하여 강포한 자리로 가까워지게 하고
4 ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.
상아 상에 누우며 침상에서 기지개 켜며 양떼에서 어린 양과 우리에서 송아지를 취하여 먹고
5 ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ.
비파에 맞추어 헛된 노래를 지절거리며 다윗처럼 자기를 위하여 악기를 제조하며
6 ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.
대접으로 포도주를 마시며 귀한 기름을 몸에 바르면서 요셉의 환난을 인하여는 근심치 아니하는 자로다
7 ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷಧ್ವನಿಯು ನಿಂತುಹೋಗುವುದು.
그러므로 저희가 이제는 사로잡히는 자 중에 앞서 사로잡히리니 기지개 켜는 자의 떠드는 소리가 그치리라
8 ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”
만군의 하나님 여호와께서 가라사대 주 여호와가 자기를 가리켜 맹세하였노라 내가 야곱의 영광을 싫어하며 그 궁궐들을 미워하므로 이 성읍과 거기 가득한 것을 대적에게 붙이리라 하셨느니라
9 ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು.
한 집에 열 사람이 남는다 하여도 다 죽을 것이라
10 ೧೦ ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”
죽은 사람의 친척 곧 그 시체를 불사를 자가 그 뼈를 집 밖으로 가져갈 때에 그 집 내실에 있는 자에게 묻기를 아직 너와 함께한 자가 있느냐 하여 대답하기를 아주 없다 하면 저가 또 말하기를 잠잠하라 우리가 여호와의 이름을 일컫지 못할 것이라 하리라
11 ೧೧ ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.
보라 여호와께서 명하시므로 큰 집이 침을 받아 갈라지며 작은 집이 침을 받아 터지리라
12 ೧೨ ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.
말들이 어찌 바위 위에서 달리겠으며 소가 어찌 거기 밭 갈겠느냐 그런데 너희는 공법을 쓸개로 변하며 정의의 열매를 인진으로 변하여
13 ೧೩ ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.
허무한 것을 기뻐하며 이르기를 우리의 뿔은 우리 힘으로 취하지 아니하였느냐 하는 자로다
14 ೧೪ ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”
만군의 하나님 여호와께서 가라사대 이스라엘 족속아 내가 한 나라를 일으켜 너희를 치리니 저희가 하맛 어귀에서부터 아라바 시내까지 너희를 학대하리라 하셨느니라

< ಆಮೋಸನು 6 >