< ದಾನಿಯೇಲನು 12 >

1 “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.
И восстанет в то время Михаил, князь великий, стоящий за сынов народа твоего; и наступит время тяжкое, какого не бывало с тех пор, как существуют люди, до сего времени; но спасутся в это время из народа твоего все, которые найдены будут записанными в книге.
2 ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
И многие из спящих в прахе земли пробудятся, одни для жизни вечной, другие на вечное поругание и посрамление.
3 ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
И разумные будут сиять, как светила на тверди, и обратившие многих к правде - как звезды, вовеки, навсегда.
4 ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
А ты, Даниил, сокрой слова сии и запечатай книгу сию до последнего времени; многие прочитают ее, и умножится ведение”.
5 ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.
Тогда я, Даниил, посмотрел, и вот, стоят двое других, один на этом берегу реки, другой на том берегу реки.
6 ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು.
И один сказал мужу в льняной одежде, который стоял над водами реки: “когда будет конец этих чудных происшествий?”
7 ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
И слышал я, как муж в льняной одежде, находившийся над водами реки, подняв правую и левую руку к небу, клялся Живущим вовеки, что к концу времени и времен и полувремени, и по совершенном низложении силы народа святого, все это совершится.
8 ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು,
Я слышал это, но не понял, и потому сказал: “господин мой! что же после этого будет?”
9 ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.
И отвечал он: “иди, Даниил; ибо сокрыты и запечатаны слова сии до последнего времени.
10 ೧೦ ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
Многие очистятся, убелятся и переплавлены будут в искушении; нечестивые же будут поступать нечестиво, и не уразумеет сего никто из нечестивых, а мудрые уразумеют.
11 ೧೧ ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
Со времени прекращения ежедневной жертвы и поставления мерзости запустения пройдет тысяча двести девяносто дней.
12 ೧೨ ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು.
Блажен, кто ожидает и достигнет тысячи трехсот тридцати пяти дней.
13 ೧೩ ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.
А ты иди к твоему концу и упокоишься, и восстанешь для получения твоего жребия в конце дней”.

< ದಾನಿಯೇಲನು 12 >