< ದಾನಿಯೇಲನು 6 >

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.
שְׁפַר֙ קֳדָ֣ם דָּרְיָ֔וֶשׁ וַהֲקִים֙ עַל־מַלְכוּתָ֔א לַאֲחַשְׁדַּרְפְּנַיָּ֖א מְאָ֣ה וְעֶשְׂרִ֑ין דִּ֥י לֶהֱוֹ֖ן בְּכָל־מַלְכוּתָֽא׃
2 ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.
וְעֵ֤לָּא מִנְּהֹון֙ סָרְכִ֣ין תְּלָתָ֔א דִּ֥י דָנִיֵּ֖אל חַֽד־מִנְּהֹ֑ון דִּֽי־לֶהֱוֹ֞ן אֲחַשְׁדַּרְפְּנַיָּ֣א אִלֵּ֗ין יָהֲבִ֤ין לְהֹון֙ טַעְמָ֔א וּמַלְכָּ֖א לָֽא־לֶהֱוֵ֥א נָזִֽק׃
3 ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
אֱדַ֙יִן֙ דָּנִיֵּ֣אל דְּנָ֔ה הֲוָ֣א מִתְנַצַּ֔ח עַל־סָרְכַיָּ֖א וַאֲחַשְׁדַּרְפְּנַיָּ֑א כָּל־קֳבֵ֗ל דִּ֣י ר֤וּחַ יַתִּירָא֙ בֵּ֔הּ וּמַלְכָּ֣א עֲשִׁ֔ית לַהֲקָמוּתֵ֖הּ עַל־כָּל־מַלְכוּתָֽא׃
4 ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.
אֱדַ֨יִן סָֽרְכַיָּ֜א וַאֲחַשְׁדַּרְפְּנַיָּ֗א הֲוֹ֨ו בָעַ֧יִן עִלָּ֛ה לְהַשְׁכָּחָ֥ה לְדָנִיֵּ֖אל מִצַּ֣ד מַלְכוּתָ֑א וְכָל־עִלָּ֨ה וּשְׁחִיתָ֜ה לָא־יָכְלִ֣ין לְהַשְׁכָּחָ֗ה כָּל־קֳבֵל֙ דִּֽי־מְהֵימַ֣ן ה֔וּא וְכָל־שָׁלוּ֙ וּשְׁחִיתָ֔ה לָ֥א הִשְׁתְּכַ֖חַת עֲלֹֽוהִי׃
5 ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು.
אֱ֠דַיִן גֻּבְרַיָּ֤א אִלֵּךְ֙ אָֽמְרִ֔ין דִּ֣י לָ֧א נְהַשְׁכַּ֛ח לְדָנִיֵּ֥אל דְּנָ֖ה כָּל־עִלָּ֑א לָהֵ֕ן הַשְׁכַּ֥חְנָֽה עֲלֹ֖והִי בְּדָ֥ת אֱלָהֵֽהּ׃ ס
6 ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!
אֱ֠דַיִן סָרְכַיָּ֤א וַאֲחַשְׁדַּרְפְּנַיָּא֙ אִלֵּ֔ן הַרְגִּ֖שׁוּ עַל־מַלְכָּ֑א וְכֵן֙ אָמְרִ֣ין לֵ֔הּ דָּרְיָ֥וֶשׁ מַלְכָּ֖א לְעָלְמִ֥ין חֱיִֽי׃
7 ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.
אִתְיָעַ֜טוּ כֹּ֣ל ׀ סָרְכֵ֣י מַלְכוּתָ֗א סִגְנַיָּ֤א וֽ͏ַאֲחַשְׁדַּרְפְּנַיָּא֙ הַדָּֽבְרַיָּ֣א וּפַחֲוָתָ֔א לְקַיָּמָ֤ה קְיָם֙ מַלְכָּ֔א וּלְתַקָּפָ֖ה אֱסָ֑ר דִּ֣י כָל־דִּֽי־יִבְעֵ֣ה בָ֠עוּ מִן־כָּל־אֱלָ֨הּ וֶֽאֱנָ֜שׁ עַד־יֹומִ֣ין תְּלָתִ֗ין לָהֵן֙ מִנָּ֣ךְ מַלְכָּ֔א יִתְרְמֵ֕א לְגֹ֖ב אַרְיָוָתָֽא׃
8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.
כְּעַ֣ן מַלְכָּ֔א תְּקִ֥ים אֱסָרָ֖א וְתִרְשֻׁ֣ם כְּתָבָ֑א דִּ֣י לָ֧א לְהַשְׁנָיָ֛ה כְּדָת־מָדַ֥י וּפָרַ֖ס דִּי־לָ֥א תֶעְדֵּֽא׃
9 ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.
כָּל־קֳבֵ֖ל דְּנָ֑ה מַלְכָּא֙ דָּֽרְיָ֔וֶשׁ רְשַׁ֥ם כְּתָבָ֖א וֶאֱסָרָֽא׃
10 ೧೦ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
וְ֠דָנִיֵּאל כְּדִ֨י יְדַ֜ע דִּֽי־רְשִׁ֤ים כְּתָבָא֙ עַ֣ל לְבַיְתֵ֔הּ וְכַוִּ֨ין פְּתִיחָ֥ן לֵהּ֙ בְּעִלִּיתֵ֔הּ נֶ֖גֶד יְרוּשְׁלֶ֑ם וְזִמְנִין֩ תְּלָתָ֨ה בְיֹומָ֜א ה֣וּא ׀ בָּרֵ֣ךְ עַל־בִּרְכֹ֗והִי וּמְצַלֵּ֤א וּמֹודֵא֙ קֳדָ֣ם אֱלָהֵ֔הּ כָּל־קֳבֵל֙ דִּֽי־הֲוָ֣א עָבֵ֔ד מִן־קַדְמַ֖ת דְּנָֽה׃ ס
11 ೧೧ ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು.
אֱ֠דַיִן גֻּבְרַיָּ֤א אִלֵּךְ֙ הַרְגִּ֔שׁוּ וְהַשְׁכַּ֖חוּ לְדָנִיֵּ֑אל בָּעֵ֥א וּמִתְחַנַּ֖ן קֳדָ֥ם אֱלָהֵֽהּ׃
12 ೧೨ ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು.
בֵּ֠אדַיִן קְרִ֨יבוּ וְאָמְרִ֥ין קֳדָם־מַלְכָּא֮ עַל־אֱסָ֣ר מַלְכָּא֒ הֲלָ֧א אֱסָ֣ר רְשַׁ֗מְתָּ דִּ֣י כָל־אֱנָ֡שׁ דִּֽי־יִבְעֵה֩ מִן־כָּל־אֱלָ֨הּ וֶֽאֱנָ֜שׁ עַד־יֹומִ֣ין תְּלָתִ֗ין לָהֵן֙ מִנָּ֣ךְ מַלְכָּ֔א יִתְרְמֵ֕א לְגֹ֖וב אַרְיָותָ֑א עָנֵ֨ה מַלְכָּ֜א וְאָמַ֗ר יַצִּיבָ֧א מִלְּתָ֛א כְּדָת־מָדַ֥י וּפָרַ֖ס דִּי־לָ֥א תֶעְדֵּֽא׃
13 ೧೩ ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.
בֵּ֠אדַיִן עֲנֹ֣ו וְאָמְרִין֮ קֳדָ֣ם מַלְכָּא֒ דִּ֣י דָנִיֵּ֡אל דִּי֩ מִן־בְּנֵ֨י גָלוּתָ֜א דִּ֣י יְה֗וּד לָא־שָׂ֨ם עֲלַיִךְ (עֲלָ֤ךְ) מַלְכָּא֙ טְעֵ֔ם וְעַל־אֱסָרָ֖א דִּ֣י רְשַׁ֑מְתָּ וְזִמְנִ֤ין תְּלָתָה֙ בְּיֹומָ֔א בָּעֵ֖א בָּעוּתֵֽהּ׃
14 ೧೪ ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.
אֱדַ֨יִן מַלְכָּ֜א כְּדִ֧י מִלְּתָ֣א שְׁמַ֗ע שַׂגִּיא֙ בְּאֵ֣שׁ עֲלֹ֔והִי וְעַ֧ל דָּנִיֵּ֛אל שָׂ֥ם בָּ֖ל לְשֵׁיזָבוּתֵ֑הּ וְעַד֙ מֶֽעָלֵ֣י שִׁמְשָׁ֔א הֲוָ֥א מִשְׁתַּדַּ֖ר לְהַצָּלוּתֵֽהּ׃
15 ೧೫ ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು.
בֵּאדַ֙יִן֙ גֻּבְרַיָּ֣א אִלֵּ֔ךְ הַרְגִּ֖שׁוּ עַל־מַלְכָּ֑א וְאָמְרִ֣ין לְמַלְכָּ֗א דַּ֤ע מַלְכָּא֙ דִּֽי־דָת֙ לְמָדַ֣י וּפָרַ֔ס דִּֽי־כָל־אֱסָ֥ר וּקְיָ֛ם דִּֽי־מַלְכָּ֥א יְהָקֵ֖ים לָ֥א לְהַשְׁנָיָֽה׃
16 ೧೬ ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.
בֵּאדַ֜יִן מַלְכָּ֣א אֲמַ֗ר וְהַיְתִיו֙ לְדָ֣נִיֵּ֔אל וּרְמֹ֕ו לְגֻבָּ֖א דִּ֣י אַרְיָוָתָ֑א עָנֵ֤ה מַלְכָּא֙ וְאָמַ֣ר לְדָנִיֵּ֔אל אֱלָהָ֗ךְ דִּ֣י אַנְתָּה (אַ֤נְתְּ) פָּֽלַֽח־לֵהּ֙ בִּתְדִירָ֔א ה֖וּא יְשֵׁיזְבִנָּֽךְ׃
17 ೧೭ ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.
וְהֵיתָ֙יִת֙ אֶ֣בֶן חֲדָ֔ה וְשֻׂמַ֖ת עַל־פֻּ֣ם גֻּבָּ֑א וְחַתְמַ֨הּ מַלְכָּ֜א בְּעִזְקְתֵ֗הּ וּבְעִזְקָת֙ רַבְרְבָנֹ֔והִי דִּ֛י לָא־תִשְׁנֵ֥א צְב֖וּ בְּדָנִיֵּֽאל׃
18 ೧೮ ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.
אֱ֠דַיִן אֲזַ֨ל מַלְכָּ֤א לְהֵֽיכְלֵהּ֙ וּבָ֣ת טְוָ֔ת וְדַחֲוָ֖ן לָא־הַנְעֵ֣ל קָֽדָמֹ֑והִי וְשִׁנְתֵּ֖הּ נַדַּ֥ת עֲלֹֽוהִי׃
19 ೧೯ ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.
בֵּאדַ֣יִן מַלְכָּ֔א בִּשְׁפַּרְפָּרָ֖א יְק֣וּם בְּנָגְהָ֑א וּבְהִ֨תְבְּהָלָ֔ה לְגֻבָּ֥א דִֽי־אַרְיָוָתָ֖א אֲזַֽל׃
20 ೨೦ ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.
וּכְמִקְרְבֵ֣הּ לְגֻבָּ֔א לְדָ֣נִיֵּ֔אל בְּקָ֥ל עֲצִ֖יב זְעִ֑ק עָנֵ֨ה מַלְכָּ֜א וְאָמַ֣ר לְדָנִיֵּ֗אל דָּֽנִיֵּאל֙ עֲבֵד֙ אֱלָהָ֣א חַיָּ֔א אֱלָהָ֗ךְ דִּ֣י אַנְתָּה (אַ֤נְתְּ) פָּֽלַֽח־לֵהּ֙ בִּתְדִירָ֔א הַיְכִ֥ל לְשֵׁיזָבוּתָ֖ךְ מִן־אַרְיָוָתָֽא׃
21 ೨೧ ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!
אֱדַ֙יִן֙ דָּנִיֶּ֔אל עִם־מַלְכָּ֖א מַלִּ֑ל מַלְכָּ֖א לְעָלְמִ֥ין חֱיִֽי׃
22 ೨೨ ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
אֱלָהִ֞י שְׁלַ֣ח מַלְאֲכֵ֗הּ וּֽסֲגַ֛ר פֻּ֥ם אַרְיָוָתָ֖א וְלָ֣א חַבְּל֑וּנִי כָּל־קֳבֵ֗ל דִּ֤י קָֽדָמֹ֙והִי֙ זָכוּ֙ הִשְׁתְּכַ֣חַת לִ֔י וְאַ֤ף קָדָמַיִךְ (קָֽדָמָךְ֙) מַלְכָּ֔א חֲבוּלָ֖ה לָ֥א עַבְדֵֽת׃
23 ೨೩ ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
בֵּאדַ֣יִן מַלְכָּ֗א שַׂגִּיא֙ טְאֵ֣ב עֲלֹ֔והִי וּלְדָ֣נִיֵּ֔אל אֲמַ֖ר לְהַנְסָקָ֣ה מִן־גֻּבָּ֑א וְהֻסַּ֨ק דָּנִיֵּ֜אל מִן־גֻּבָּ֗א וְכָל־חֲבָל֙ לָא־הִשְׁתְּכַ֣ח בֵּ֔הּ דִּ֖י הֵימִ֥ן בֵּאלָהֵֽהּ׃
24 ೨೪ ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.
וַאֲמַ֣ר מַלְכָּ֗א וְהַיְתִ֞יו גֻּבְרַיָּ֤א אִלֵּךְ֙ דִּֽי־אֲכַ֤לוּ קַרְצֹ֙והִי֙ דִּ֣י דָֽנִיֵּ֔אל וּלְגֹ֤ב אַרְיָוָתָא֙ רְמֹ֔ו אִנּ֖וּן בְּנֵיהֹ֣ון וּנְשֵׁיהֹ֑ון וְלָֽא־מְטֹ֞ו לְאַרְעִ֣ית גֻּבָּ֗א עַ֠ד דִּֽי־שְׁלִ֤טֽוּ בְהֹון֙ אַרְיָ֣וָתָ֔א וְכָל־גַּרְמֵיהֹ֖ון הַדִּֽקוּ׃
25 ೨೫ ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!
בֵּאדַ֜יִן דָּרְיָ֣וֶשׁ מַלְכָּ֗א כְּ֠תַב לְֽכָל־עַֽמְמַיָּ֞א אֻמַיָּ֧א וְלִשָּׁנַיָּ֛א דִּֽי־דָאֲרִין (דָיְרִ֥ין) בְּכָל־אַרְעָ֖א שְׁלָמְכֹ֥ון יִשְׂגֵּֽא׃
26 ೨೬ “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;
מִן־קֳדָמַי֮ שִׂ֣ים טְעֵם֒ דִּ֣י ׀ בְּכָל־שָׁלְטָ֣ן מַלְכוּתִ֗י לֶהֱוֹ֤ן זָאֲעִין (זָיְעִין֙) וְדָ֣חֲלִ֔ין מִן־קֳדָ֖ם אֱלָהֵ֣הּ דִּי־דָֽנִיֵּ֑אל דִּי־ה֣וּא ׀ אֱלָהָ֣א חַיָּ֗א וְקַיָּם֙ לְעָ֣לְמִ֔ין וּמַלְכוּתֵהּ֙ דִּֽי־לָ֣א תִתְחַבַּ֔ל וְשָׁלְטָנֵ֖הּ עַד־סֹופָֽא׃
27 ೨೭ ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
מְשֵׁיזִ֣ב וּמַצִּ֗ל וְעָבֵד֙ אָתִ֣ין וְתִמְהִ֔ין בִּשְׁמַיָּ֖א וּבְאַרְעָ֑א דִּ֚י שֵׁיזִ֣יב לְדָֽנִיֵּ֔אל מִן־יַ֖ד אַרְיָוָתָֽא׃
28 ೨೮ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.
וְדָנִיֵּ֣אל דְּנָ֔ה הַצְלַ֖ח בְּמַלְכ֣וּת דָּרְיָ֑וֶשׁ וּבְמַלְכ֖וּת כֹּ֥ורֶשׁ פָּרְסָיָא (פָּרְסָאָֽה)׃ פ

< ದಾನಿಯೇಲನು 6 >