< ದಾನಿಯೇಲನು 8 >

1 ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.
בִּשְׁנַ֣ת שָׁלֹ֔ושׁ לְמַלְכ֖וּת בֵּלְאשַׁצַּ֣ר הַמֶּ֑לֶךְ חָזֹ֞ון נִרְאָ֤ה אֵלַי֙ אֲנִ֣י דָנִיֵּ֔אל אַחֲרֵ֛י הַנִּרְאָ֥ה אֵלַ֖י בַּתְּחִלָּֽה׃
2 ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.
וָֽאֶרְאֶה֮ בֶּחָזֹון֒ וַיְהִי֙ בִּרְאֹתִ֔י וַאֲנִי֙ בְּשׁוּשַׁ֣ן הַבִּירָ֔ה אֲשֶׁ֖ר בְּעֵילָ֣ם הַמְּדִינָ֑ה וָאֶרְאֶה֙ בֶּֽחָזֹ֔ון וַאֲנִ֥י הָיִ֖יתִי עַל־אוּבַ֥ל אוּלָֽי׃
3 ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.
וָאֶשָּׂ֤א עֵינַי֙ וָאֶרְאֶ֔ה וְהִנֵּ֣ה ׀ אַ֣יִל אֶחָ֗ד עֹמֵ֛ד לִפְנֵ֥י הָאֻבָ֖ל וְלֹ֣ו קְרָנָ֑יִם וְהַקְּרָנַ֣יִם גְּבֹהֹ֗ות וְהָאַחַת֙ גְּבֹהָ֣ה מִן־הַשֵּׁנִ֔ית וְהַ֨גְּבֹהָ֔ה עֹלָ֖ה בָּאַחֲרֹנָֽה׃
4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.
רָאִ֣יתִי אֶת־הָאַ֡יִל מְנַגֵּחַ֩ יָ֨מָּה וְצָפֹ֜ונָה וָנֶ֗גְבָּה וְכָל־חַיֹּות֙ לֹֽא־יַֽעַמְד֣וּ לְפָנָ֔יו וְאֵ֥ין מַצִּ֖יל מִיָּדֹ֑ו וְעָשָׂ֥ה כִרְצֹנֹ֖ו וְהִגְדִּֽיל׃
5 ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.
וַאֲנִ֣י ׀ הָיִ֣יתִי מֵבִ֗ין וְהִנֵּ֤ה צְפִיר־הָֽעִזִּים֙ בָּ֤א מִן־הַֽמַּעֲרָב֙ עַל־פְּנֵ֣י כָל־הָאָ֔רֶץ וְאֵ֥ין נֹוגֵ֖עַ בָּאָ֑רֶץ וְהַ֨צָּפִ֔יר קֶ֥רֶן חָז֖וּת בֵּ֥ין עֵינָֽיו׃
6 ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.
וַיָּבֹ֗א עַד־הָאַ֙יִל֙ בַּ֣עַל הַקְּרָנַ֔יִם אֲשֶׁ֣ר רָאִ֔יתִי עֹמֵ֖ד לִפְנֵ֣י הָאֻבָ֑ל וַיָּ֥רָץ אֵלָ֖יו בַּחֲמַ֥ת כֹּחֹֽו׃
7 ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.
וּרְאִיתִ֞יו מַגִּ֣יעַ ׀ אֵ֣צֶל הָאַ֗יִל וַיִּתְמַרְמַ֤ר אֵלָיו֙ וַיַּ֣ךְ אֶת־הָאַ֔יִל וַיְשַׁבֵּר֙ אֶת־שְׁתֵּ֣י קְרָנָ֔יו וְלֹא־הָ֥יָה כֹ֛חַ בָּאַ֖יִל לַעֲמֹ֣ד לְפָנָ֑יו וַיַּשְׁלִיכֵ֤הוּ אַ֙רְצָה֙ וַֽיִּרְמְסֵ֔הוּ וְלֹא־הָיָ֥ה מַצִּ֛יל לָאַ֖יִל מִיָּדֹֽו׃
8 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.
וּצְפִ֥יר הָעִזִּ֖ים הִגְדִּ֣יל עַד־מְאֹ֑ד וּכְעָצְמֹ֗ו נִשְׁבְּרָה֙ הַקֶּ֣רֶן הַגְּדֹולָ֔ה וַֽתַּעֲלֶ֜נָה חָז֤וּת אַרְבַּע֙ תַּחְתֶּ֔יהָ לְאַרְבַּ֖ע רוּחֹ֥ות הַשָּׁמָֽיִם׃
9 ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.
וּמִן־הָאַחַ֣ת מֵהֶ֔ם יָצָ֥א קֶֽרֶן־אַחַ֖ת מִצְּעִירָ֑ה וַתִּגְדַּל־יֶ֛תֶר אֶל־הַנֶּ֥גֶב וְאֶל־הַמִּזְרָ֖ח וְאֶל־הַצֶּֽבִי׃
10 ೧೦ ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.
וַתִּגְדַּ֖ל עַד־צְבָ֣א הַשָּׁמָ֑יִם וַתַּפֵּ֥ל אַ֛רְצָה מִן־הַצָּבָ֥א וּמִן־הַכֹּוכָבִ֖ים וַֽתִּרְמְסֵֽם׃
11 ೧೧ ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.
וְעַ֥ד שַֽׂר־הַצָּבָ֖א הִגְדִּ֑יל וּמִמֶּ֙נּוּ֙ הֵרִים (הוּרַ֣ם) הַתָּמִ֔יד וְהֻשְׁלַ֖ךְ מְכֹ֥ון מִקְדָּשֹֽׁו׃
12 ೧೨ ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.
וְצָבָ֛א תִּנָּתֵ֥ן עַל־הַתָּמִ֖יד בְּפָ֑שַׁע וְתַשְׁלֵ֤ךְ אֱמֶת֙ אַ֔רְצָה וְעָשְׂתָ֖ה וְהִצְלִֽיחָה׃
13 ೧೩ ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.
וָאֶשְׁמְעָ֥ה אֶֽחָד־קָדֹ֖ושׁ מְדַבֵּ֑ר וַיֹּאמֶר֩ אֶחָ֨ד קָדֹ֜ושׁ לַפַּֽלְמֹונִ֣י הַֽמְדַבֵּ֗ר עַד־מָתַ֞י הֶחָזֹ֤ון הַתָּמִיד֙ וְהַפֶּ֣שַׁע שֹׁמֵ֔ם תֵּ֛ת וְקֹ֥דֶשׁ וְצָבָ֖א מִרְמָֽס׃
14 ೧೪ ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು.
וַיֹּ֣אמֶר אֵלַ֔י עַ֚ד עֶ֣רֶב בֹּ֔קֶר אַלְפַּ֖יִם וּשְׁלֹ֣שׁ מֵאֹ֑ות וְנִצְדַּ֖ק קֹֽדֶשׁ׃
15 ೧೫ ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.
וַיְהִ֗י בִּרְאֹתִ֛י אֲנִ֥י דָנִיֵּ֖אל אֶת־הֶחָזֹ֑ון וָאֲבַקְשָׁ֣ה בִינָ֔ה וְהִנֵּ֛ה עֹמֵ֥ד לְנֶגְדִּ֖י כְּמַרְאֵה־גָֽבֶר׃
16 ೧೬ ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.
וָאֶשְׁמַ֥ע קֹול־אָדָ֖ם בֵּ֣ין אוּלָ֑י וַיִּקְרָא֙ וַיֹּאמַ֔ר גַּבְרִיאֵ֕ל הָבֵ֥ן לְהַלָּ֖ז אֶת־הַמַּרְאֶֽה׃
17 ೧೭ ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
וַיָּבֹא֙ אֵ֣צֶל עָמְדִ֔י וּבְבֹאֹ֣ו נִבְעַ֔תִּי וָאֶפְּלָ֖ה עַל־פָּנָ֑י וַיֹּ֤אמֶר אֵלַי֙ הָבֵ֣ן בֶּן־אָדָ֔ם כִּ֖י לְעֶת־קֵ֥ץ הֶחָזֹֽון׃
18 ೧೮ ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,
וּבְדַבְּרֹ֣ו עִמִּ֔י נִרְדַּ֥מְתִּי עַל־פָּנַ֖י אָ֑רְצָה וַיִּ֨גַּע־בִּ֔י וַיַּֽעֲמִידֵ֖נִי עַל־עָמְדִֽי׃
19 ೧೯ “ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.
וַיֹּ֙אמֶר֙ הִנְנִ֣י מֹודִֽיעֲךָ֔ אֵ֥ת אֲשֶׁר־יִהְיֶ֖ה בְּאַחֲרִ֣ית הַזָּ֑עַם כִּ֖י לְמֹועֵ֥ד קֵֽץ׃
20 ೨೦ ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.
הָאַ֥יִל אֲשֶׁר־רָאִ֖יתָ בַּ֣עַל הַקְּרָנָ֑יִם מַלְכֵ֖י מָדַ֥י וּפָרָֽס׃
21 ೨೧ ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.
וְהַצָּפִ֥יר הַשָּׂעִ֖יר מֶ֣לֶךְ יָוָ֑ן וְהַקֶּ֤רֶן הַגְּדֹולָה֙ אֲשֶׁ֣ר בֵּין־עֵינָ֔יו ה֖וּא הַמֶּ֥לֶךְ הָרִאשֹֽׁון׃
22 ೨೨ ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನೆಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ.
וְהַ֨נִּשְׁבֶּ֔רֶת וַתַּֽעֲמֹ֥דְנָה אַרְבַּ֖ע תַּחְתֶּ֑יהָ אַרְבַּ֧ע מַלְכֻיֹ֛ות מִגֹּ֥וי יַעֲמֹ֖דְנָה וְלֹ֥א בְכֹחֹֽו׃
23 ೨೩ ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.
וּֽבְאַחֲרִית֙ מַלְכוּתָ֔ם כְּהָתֵ֖ם הַפֹּשְׁעִ֑ים יַעֲמֹ֛ד מֶ֥לֶךְ עַז־פָּנִ֖ים וּמֵבִ֥ין חִידֹֽות׃
24 ೨೪ ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.
וְעָצַ֤ם כֹּחֹו֙ וְלֹ֣א בְכֹחֹ֔ו וְנִפְלָאֹ֥ות יַשְׁחִ֖ית וְהִצְלִ֣יחַ וְעָשָׂ֑ה וְהִשְׁחִ֥ית עֲצוּמִ֖ים וְעַם־קְדֹשִֽׁים׃
25 ೨೫ ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.
וְעַל־שִׂכְלֹ֗ו וְהִצְלִ֤יחַ מִרְמָה֙ בְּיָדֹ֔ו וּבִלְבָבֹ֣ו יַגְדִּ֔יל וּבְשַׁלְוָ֖ה יַשְׁחִ֣ית רַבִּ֑ים וְעַ֤ל־שַׂר־שָׂרִים֙ יַעֲמֹ֔ד וּבְאֶ֥פֶס יָ֖ד יִשָּׁבֵֽר׃
26 ೨೬ ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.
וּמַרְאֵ֨ה הָעֶ֧רֶב וְהַבֹּ֛קֶר אֲשֶׁ֥ר נֶאֱמַ֖ר אֱמֶ֣ת ה֑וּא וְאַתָּה֙ סְתֹ֣ם הֶֽחָזֹ֔ון כִּ֖י לְיָמִ֥ים רַבִּֽים׃
27 ೨೭ ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.
וַאֲנִ֣י דָנִיֵּ֗אל נִהְיֵ֤יתִי וְנֽ͏ֶחֱלֵ֙יתִי֙ יָמִ֔ים וָאָק֕וּם וָאֶֽעֱשֶׂ֖ה אֶת־מְלֶ֣אכֶת הַמֶּ֑לֶךְ וָאֶשְׁתֹּומֵ֥ם עַל־הַמַּרְאֶ֖ה וְאֵ֥ין מֵבִֽין׃ פ

< ದಾನಿಯೇಲನು 8 >