< ಧರ್ಮೋಪದೇಶಕಾಂಡ 18 >

1 ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.
לֹֽא־יִהְיֶה לַכֹּהֲנִים הַלְוִיִּם כׇּל־שֵׁבֶט לֵוִי חֵלֶק וְנַחֲלָה עִם־יִשְׂרָאֵל אִשֵּׁי יְהֹוָה וְנַחֲלָתוֹ יֹאכֵלֽוּן׃
2 ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.
וְנַחֲלָה לֹא־יִֽהְיֶה־לּוֹ בְּקֶרֶב אֶחָיו יְהֹוָה הוּא נַחֲלָתוֹ כַּאֲשֶׁר דִּבֶּר־לֽוֹ׃
3 ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.
וְזֶה יִהְיֶה מִשְׁפַּט הַכֹּהֲנִים מֵאֵת הָעָם מֵאֵת זֹבְחֵי הַזֶּבַח אִם־שׁוֹר אִם־שֶׂה וְנָתַן לַכֹּהֵן הַזְּרֹעַ וְהַלְּחָיַיִם וְהַקֵּבָֽה׃
4 ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.
רֵאשִׁית דְּגָֽנְךָ תִּירֹֽשְׁךָ וְיִצְהָרֶךָ וְרֵאשִׁית גֵּז צֹאנְךָ תִּתֶּן־לֽוֹ׃
5 ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.
כִּי בוֹ בָּחַר יְהֹוָה אֱלֹהֶיךָ מִכׇּל־שְׁבָטֶיךָ לַעֲמֹד לְשָׁרֵת בְּשֵׁם־יְהֹוָה הוּא וּבָנָיו כׇּל־הַיָּמִֽים׃
6 ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,
וְכִֽי־יָבֹא הַלֵּוִי מֵאַחַד שְׁעָרֶיךָ מִכׇּל־יִשְׂרָאֵל אֲשֶׁר־הוּא גָּר שָׁם וּבָא בְּכׇל־אַוַּת נַפְשׁוֹ אֶל־הַמָּקוֹם אֲשֶׁר־יִבְחַר יְהֹוָֽה׃
7 ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,
וְשֵׁרֵת בְּשֵׁם יְהֹוָה אֱלֹהָיו כְּכׇל־אֶחָיו הַלְוִיִּם הָעֹמְדִים שָׁם לִפְנֵי יְהֹוָֽה׃
8 ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.
חֵלֶק כְּחֵלֶק יֹאכֵלוּ לְבַד מִמְכָּרָיו עַל־הָאָבֽוֹת׃
9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.
כִּי אַתָּה בָּא אֶל־הָאָרֶץ אֲשֶׁר־יְהֹוָה אֱלֹהֶיךָ נֹתֵן לָךְ לֹֽא־תִלְמַד לַעֲשׂוֹת כְּתוֹעֲבֹת הַגּוֹיִם הָהֵֽם׃
10 ೧೦ ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
לֹֽא־יִמָּצֵא בְךָ מַעֲבִיר בְּנֽוֹ־וּבִתּוֹ בָּאֵשׁ קֹסֵם קְסָמִים מְעוֹנֵן וּמְנַחֵשׁ וּמְכַשֵּֽׁף׃
11 ೧೧ ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
וְחֹבֵר חָבֶר וְשֹׁאֵל אוֹב וְיִדְּעֹנִי וְדֹרֵשׁ אֶל־הַמֵּתִֽים׃
12 ೧೨ ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.
כִּֽי־תוֹעֲבַת יְהֹוָה כׇּל־עֹשֵׂה אֵלֶּה וּבִגְלַל הַתּוֹעֵבֹת הָאֵלֶּה יְהֹוָה אֱלֹהֶיךָ מוֹרִישׁ אוֹתָם מִפָּנֶֽיךָ׃
13 ೧೩ ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.
תָּמִים תִּֽהְיֶה עִם יְהֹוָה אֱלֹהֶֽיךָ׃
14 ೧೪ ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ.
כִּי ׀ הַגּוֹיִם הָאֵלֶּה אֲשֶׁר אַתָּה יוֹרֵשׁ אוֹתָם אֶל־מְעֹנְנִים וְאֶל־קֹסְמִים יִשְׁמָעוּ וְאַתָּה לֹא כֵן נָתַן לְךָ יְהֹוָה אֱלֹהֶֽיךָ׃
15 ೧೫ ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
נָבִיא מִקִּרְבְּךָ מֵאַחֶיךָ כָּמֹנִי יָקִים לְךָ יְהֹוָה אֱלֹהֶיךָ אֵלָיו תִּשְׁמָעֽוּן׃
16 ೧೬ ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.
כְּכֹל אֲשֶׁר־שָׁאַלְתָּ מֵעִם יְהֹוָה אֱלֹהֶיךָ בְּחֹרֵב בְּיוֹם הַקָּהָל לֵאמֹר לֹא אֹסֵף לִשְׁמֹעַ אֶת־קוֹל יְהֹוָה אֱלֹהָי וְאֶת־הָאֵשׁ הַגְּדֹלָה הַזֹּאת לֹֽא־אֶרְאֶה עוֹד וְלֹא אָמֽוּת׃
17 ೧೭ ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ;
וַיֹּאמֶר יְהֹוָה אֵלָי הֵיטִיבוּ אֲשֶׁר דִּבֵּֽרוּ׃
18 ೧೮ ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.
נָבִיא אָקִים לָהֶם מִקֶּרֶב אֲחֵיהֶם כָּמוֹךָ וְנָתַתִּי דְבָרַי בְּפִיו וְדִבֶּר אֲלֵיהֶם אֵת כׇּל־אֲשֶׁר אֲצַוֶּֽנּוּ׃
19 ೧೯ ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.
וְהָיָה הָאִישׁ אֲשֶׁר לֹֽא־יִשְׁמַע אֶל־דְּבָרַי אֲשֶׁר יְדַבֵּר בִּשְׁמִי אָנֹכִי אֶדְרֹשׁ מֵעִמּֽוֹ׃
20 ೨೦ ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
אַךְ הַנָּבִיא אֲשֶׁר יָזִיד לְדַבֵּר דָּבָר בִּשְׁמִי אֵת אֲשֶׁר לֹֽא־צִוִּיתִיו לְדַבֵּר וַאֲשֶׁר יְדַבֵּר בְּשֵׁם אֱלֹהִים אֲחֵרִים וּמֵת הַנָּבִיא הַהֽוּא׃
21 ೨೧ ‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?
וְכִי תֹאמַר בִּלְבָבֶךָ אֵיכָה נֵדַע אֶת־הַדָּבָר אֲשֶׁר לֹא־דִבְּרוֹ יְהֹוָֽה׃
22 ೨೨ ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.
אֲשֶׁר יְדַבֵּר הַנָּבִיא בְּשֵׁם יְהֹוָה וְלֹֽא־יִהְיֶה הַדָּבָר וְלֹא יָבֹא הוּא הַדָּבָר אֲשֶׁר לֹא־דִבְּרוֹ יְהֹוָה בְּזָדוֹן דִּבְּרוֹ הַנָּבִיא לֹא תָגוּר מִמֶּֽנּוּ׃

< ಧರ್ಮೋಪದೇಶಕಾಂಡ 18 >