< ಧರ್ಮೋಪದೇಶಕಾಂಡ 20 >

1 ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.
כִּֽי־תֵצֵא לַמִּלְחָמָה עַל־אֹיְבֶךָ וְֽרָאִיתָ סוּס וָרֶכֶב עַם רַב מִמְּךָ לֹא תִירָא מֵהֶם כִּֽי־יְהֹוָה אֱלֹהֶיךָ עִמָּךְ הַמַּֽעַלְךָ מֵאֶרֶץ מִצְרָֽיִם׃
2 ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ,
וְהָיָה כְּקָֽרׇבְכֶם אֶל־הַמִּלְחָמָה וְנִגַּשׁ הַכֹּהֵן וְדִבֶּר אֶל־הָעָֽם׃
3 “ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
וְאָמַר אֲלֵהֶם שְׁמַע יִשְׂרָאֵל אַתֶּם קְרֵבִים הַיּוֹם לַמִּלְחָמָה עַל־אֹיְבֵיכֶם אַל־יֵרַךְ לְבַבְכֶם אַל־תִּֽירְאוּ וְאַֽל־תַּחְפְּזוּ וְאַל־תַּֽעַרְצוּ מִפְּנֵיהֶֽם׃
4 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.
כִּי יְהֹוָה אֱלֹֽהֵיכֶם הַהֹלֵךְ עִמָּכֶם לְהִלָּחֵם לָכֶם עִם־אֹיְבֵיכֶם לְהוֹשִׁיעַ אֶתְכֶֽם׃
5 ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.
וְדִבְּרוּ הַשֹּֽׁטְרִים אֶל־הָעָם לֵאמֹר מִֽי־הָאִישׁ אֲשֶׁר בָּנָה בַֽיִת־חָדָשׁ וְלֹא חֲנָכוֹ יֵלֵךְ וְיָשֹׁב לְבֵיתוֹ פֶּן־יָמוּת בַּמִּלְחָמָה וְאִישׁ אַחֵר יַחְנְכֶֽנּוּ׃
6 ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
וּמִֽי־הָאִישׁ אֲשֶׁר־נָטַע כֶּרֶם וְלֹא חִלְּלוֹ יֵלֵךְ וְיָשֹׁב לְבֵיתוֹ פֶּן־יָמוּת בַּמִּלְחָמָה וְאִישׁ אַחֵר יְחַלְּלֶֽנּוּ׃
7 ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.
וּמִֽי־הָאִישׁ אֲשֶׁר־אֵרַשׂ אִשָּׁה וְלֹא לְקָחָהּ יֵלֵךְ וְיָשֹׁב לְבֵיתוֹ פֶּן־יָמוּת בַּמִּלְחָמָה וְאִישׁ אַחֵר יִקָּחֶֽנָּה׃
8 ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
וְיָסְפוּ הַשֹּׁטְרִים לְדַבֵּר אֶל־הָעָם וְאָמְרוּ מִי־הָאִישׁ הַיָּרֵא וְרַךְ הַלֵּבָב יֵלֵךְ וְיָשֹׁב לְבֵיתוֹ וְלֹא יִמַּס אֶת־לְבַב אֶחָיו כִּלְבָבֽוֹ׃
9 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.
וְהָיָה כְּכַלֹּת הַשֹּׁטְרִים לְדַבֵּר אֶל־הָעָם וּפָקְדוּ שָׂרֵי צְבָאוֹת בְּרֹאשׁ הָעָֽם׃
10 ೧೦ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.
כִּֽי־תִקְרַב אֶל־עִיר לְהִלָּחֵם עָלֶיהָ וְקָרָאתָ אֵלֶיהָ לְשָׁלֽוֹם׃
11 ೧೧ ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.
וְהָיָה אִם־שָׁלוֹם תַּֽעַנְךָ וּפָתְחָה לָךְ וְהָיָה כׇּל־הָעָם הַנִּמְצָא־בָהּ יִהְיוּ לְךָ לָמַס וַעֲבָדֽוּךָ׃
12 ೧೨ ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.
וְאִם־לֹא תַשְׁלִים עִמָּךְ וְעָשְׂתָה עִמְּךָ מִלְחָמָה וְצַרְתָּ עָלֶֽיהָ׃
13 ೧೩ ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.
וּנְתָנָהּ יְהֹוָה אֱלֹהֶיךָ בְּיָדֶךָ וְהִכִּיתָ אֶת־כׇּל־זְכוּרָהּ לְפִי־חָֽרֶב׃
14 ೧೪ ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
רַק הַנָּשִׁים וְהַטַּף וְהַבְּהֵמָה וְכֹל אֲשֶׁר יִהְיֶה בָעִיר כׇּל־שְׁלָלָהּ תָּבֹז לָךְ וְאָֽכַלְתָּ אֶת־שְׁלַל אֹיְבֶיךָ אֲשֶׁר נָתַן יְהֹוָה אֱלֹהֶיךָ לָֽךְ׃
15 ೧೫ ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.
כֵּן תַּעֲשֶׂה לְכׇל־הֶעָרִים הָרְחֹקֹת מִמְּךָ מְאֹד אֲשֶׁר לֹא־מֵעָרֵי הַגּֽוֹיִם־הָאֵלֶּה הֵֽנָּה׃
16 ೧೬ ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.
רַק מֵעָרֵי הָֽעַמִּים הָאֵלֶּה אֲשֶׁר יְהֹוָה אֱלֹהֶיךָ נֹתֵן לְךָ נַחֲלָה לֹא תְחַיֶּה כׇּל־נְשָׁמָֽה׃
17 ೧೭ ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.
כִּֽי־הַחֲרֵם תַּחֲרִימֵם הַחִתִּי וְהָאֱמֹרִי הַכְּנַעֲנִי וְהַפְּרִזִּי הַחִוִּי וְהַיְבוּסִי כַּאֲשֶׁר צִוְּךָ יְהֹוָה אֱלֹהֶֽיךָ׃
18 ೧೮ ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.
לְמַעַן אֲשֶׁר לֹֽא־יְלַמְּדוּ אֶתְכֶם לַעֲשׂוֹת כְּכֹל תּֽוֹעֲבֹתָם אֲשֶׁר עָשׂוּ לֵאלֹֽהֵיהֶם וַחֲטָאתֶם לַיהֹוָה אֱלֹהֵיכֶֽם׃
19 ೧೯ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
כִּֽי־תָצוּר אֶל־עִיר יָמִים רַבִּים לְֽהִלָּחֵם עָלֶיהָ לְתׇפְשָׂהּ לֹֽא־תַשְׁחִית אֶת־עֵצָהּ לִנְדֹּחַ עָלָיו גַּרְזֶן כִּי מִמֶּנּוּ תֹאכֵל וְאֹתוֹ לֹא תִכְרֹת כִּי הָֽאָדָם עֵץ הַשָּׂדֶה לָבֹא מִפָּנֶיךָ בַּמָּצֽוֹר׃
20 ೨೦ ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.
רַק עֵץ אֲשֶׁר־תֵּדַע כִּֽי־לֹא־עֵץ מַאֲכָל הוּא אֹתוֹ תַשְׁחִית וְכָרָתָּ וּבָנִיתָ מָצוֹר עַל־הָעִיר אֲשֶׁר־הִוא עֹשָׂה עִמְּךָ מִלְחָמָה עַד רִדְתָּֽהּ׃

< ಧರ್ಮೋಪದೇಶಕಾಂಡ 20 >