< ಧರ್ಮೋಪದೇಶಕಾಂಡ 33 >

1 ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:
Toto pak jest požehnání, kterýmž požehnal Mojžíš, muž Boží, synů Izraelských před svou smrtí,
2 “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
A řekl: Hospodin z Sinai přišel, a vzešel jim z Seir, zastkvěl se s hory Fáran, a přišel s desíti tisíci svatých, z jehožto pravice oheň zákona svítil jim.
3 “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.
Jak velice miluješ lidi! Všickni svatí jeho jsou v ruce tvé, oni také přivinuli se k nohám tvým, vezmouť prospěch z výmluvností tvých.
4 ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.
Zákon vydal nám Mojžíš, dědičný shromáždění Jákobovu,
5 ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.
(Nebo byl v Izraeli jako král, ) když přední z lidu shromáždili se, i všecka pokolení Izraelská.
6 “ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.
Buď živ Ruben a neumírej, a muži jeho ať jsou bez počtu.
7 “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.
Tolikéž požehnal i Judovi a řekl: Vyslyš, Hospodine, hlas Judův, a k lidu svému jej sprovozuj; ruce jeho budou bojovati za něj, a ty jemu spomáhati budeš proti nepřátelům jeho.
8 ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.
O Léví také řekl: Thumim tvé a urim tvé bylo, Pane, při muži svatém tvém, kteréhož jsi zkusil v pokušení, a kterýž podlé tebe měl nesnáz při vodách Meribah,
9 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
Kterýž řekl otci svému a matce své: Neohlédám se na vás; a bratří svých neznal, a o synech svých nevěděl; nebo ostříhají výmluvností tvých, a smlouvu tvou zachovávají.
10 ೧೦ ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
Vyučovati budou soudům tvým Jákoba, a zákonu tvému Izraele, a klásti budou kadidlo před tváří tvou, a obět zápalnou na oltáři tvém.
11 ೧೧ ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.
Požehnejž, Hospodine, rytěřování jeho, a v práci rukou jeho zalib se tobě. Zlomuj ledví nepřátel jeho a těch, kteříž ho nenávidí, aby nepovstali.
12 ೧೨ ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.
A o Beniaminovi řekl: Milý jest Hospodinu, bezpečně s ním bydliti bude; ochraňovati jej bude každého dne, a mezi rameny jeho přebývati.
13 ೧೩ ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
O Jozefovi pak řekl: Požehnaná země jeho od Hospodina pro nejlepší věci nebeské, pro rosu a vrchoviště zespod se prýštící,
14 ೧೪ ವರ್ಷ ವರ್ಷಕ್ಕೂ, ತಿಂಗಳು ತಿಂಗಳಿಗೂ ಆಗುವ ಬೆಳೆ,
A pro nejlepší úrody sluncem vyzralé, a pro nejlepší věci časem měsíců došlé,
15 ೧೫ ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,
I pro rozkoše hor nejstarších, a pro rozkoše pahrbků věčných,
16 ೧೬ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.
Pro nejlepší věci země i plnost její, vyplývající z milosti ve kři přebývajícího. Přijdiž to požehnání na hlavu Jozefovu, a na vrch hlavy odděleného z jiných bratří jeho.
17 ೧೭ ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.
Prvorozeného, vola toho krása veliká bude, a rohové jednorožce rohové jeho, jimiž on trkati bude národy napořád až do končin země. A toť jsou mnozí tisícové Efraimovi a tisícové Manassesovi.
18 ೧೮ ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.
O Zabulonovi také řekl: Vesel se Zabulon u vycházení svém, a Izachar v staních svých.
19 ೧೯ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು.
Lidi na horu Boží svolají, a budou obětovati oběti spravedlnosti; nebo hojnost mořskou ssáti budou, a skryté poklady v písku.
20 ೨೦ ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
Gádovi pak řekl: Požehnaný, kterýž rozšiřuje Gáda. Onť jakožto lev bydliti bude, a uchvátí rameno i s hlavou.
21 ೨೧ ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು.
Kterýž opatřil ho prvotinami; nebo tam podílem skrze vydavatele zákona ubezpečen jest. Protož pobéřeť se s knížaty lidu, a spravedlnost Hospodinovu i soudy jeho s Izraelem vykonávati bude.
22 ೨೨ ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು.
O Danovi pak řekl: Dan jako lvíče lvové vyskakovati bude z Bázan.
23 ೨೩ ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.
A Neftalímovi řekl: Ó Neftalíme, sytý přízní Páně, plný požehnání Hospodinova, západní a polední stranu přijmi za dědictví.
24 ೨೪ ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.
O Asserovi také řekl: Asser požehnaný nad jiné syny, budeť milý bratřím svým, omočí v oleji nohu svou.
25 ೨೫ ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.
Železo a měď pod šlepějemi tvými; pokudž trvati budou dnové tvoji, slovoutný budeš.
26 ೨೬ ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.
Neníť žádného, jako Bůh silný, ó Izraeli, kterýž se vznáší na nebesích ku pomoci tobě, a u velebnosti své na oblacích nejvyšších.
27 ೨೭ ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;
Ochrana tvá buď Bůh věčný, a zespod ramena věčnosti, kterýž vyžene nepřátely před tebou, aneb řekne: Vyhlaď je,
28 ೨೮ ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
Aby sám bezpečně bydlil Izrael, rodina Jákobova, a to v zemi obilím a vínem oplývající, jehož nebesa také i rosu vydávati budou.
29 ೨೯ “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.
Blahoslavený jsi, Izraeli. Kdo jest podobný tobě, lide vysvobozený skrze Hospodina, jenž jest pavéza spomožení tvého a meč důstojnosti tvé? Tvoji zajisté nepřátelé poníženi budou, ale ty po všech vyvýšenostech jejich šlapati budeš.

< ಧರ್ಮೋಪದೇಶಕಾಂಡ 33 >