< ಧರ್ಮೋಪದೇಶಕಾಂಡ 34 >

1 ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,
И взошел Моисей с равнин Моавитских на гору Нево, на вершину Фасги, что против Иерихона, и показал ему Господь всю землю Галаад до самого Дана,
2 ನಫ್ತಾಲಿ ಪ್ರದೇಶ, ಎಫ್ರಾಯೀಮ್ ಮತ್ತು ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ,
и всю землю Неффалимову, и всю землю Ефремову и Манассиину, и всю землю Иудину, даже до самого западного моря,
3 ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,
и полуденную страну и равнину долины Иерихона, город Палм, до Сигора.
4 “ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.
И сказал ему Господь: вот земля, о которой Я клялся Аврааму, Исааку и Иакову, говоря: “семени твоему дам ее”; Я дал тебе увидеть ее глазами твоими, но в нее ты не войдешь.
5 ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.
И умер там Моисей, раб Господень, в земле Моавитской, по слову Господню;
6 ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.
и погребен на долине в земле Моавитской против Беф-Фегора, и никто не знает места погребения его даже до сего дня.
7 ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.
Моисею было сто двадцать лет, когда он умер; но зрение его не притупилось, и крепость в нем не истощилась.
8 ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.
И оплакивали Моисея сыны Израилевы на равнинах Моавитских у Иордана близ Иерихона тридцать дней. И прошли дни плача и сетования о Моисее.
9 ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.
И Иисус, сын Навин, исполнился духа премудрости, потому что Моисей возложил на него руки свои, и повиновались ему сыны Израилевы и делали так, как повелел Господь Моисею.
10 ೧೦ ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.
И не было более у Израиля пророка такого, как Моисей, которого Господь знал лицем к лицу,
11 ೧೧ ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.
по всем знамениям и чудесам, которые послал его Господь сделать в земле Египетской над фараоном и над всеми рабами его и над всею землею его,
12 ೧೨ ಅವನು ಇಸ್ರಾಯೇಲರ ಕಣ್ಣ ಮುಂದೆ ವಿಶೇಷವಾದ ಭುಜಪರಾಕ್ರಮವನ್ನೂ ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು.
и по руке сильной и по великим чудесам, которые Моисей совершил пред глазами всего Израиля.

< ಧರ್ಮೋಪದೇಶಕಾಂಡ 34 >