< ಧರ್ಮೋಪದೇಶಕಾಂಡ 6 >

1 ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.
וְזֹ֣את הַמִּצְוָ֗ה הַֽחֻקִּים֙ וְהַמִּשְׁפָּטִ֔ים אֲשֶׁ֥ר צִוָּ֛ה יְהוָ֥ה אֱלֹהֵיכֶ֖ם לְלַמֵּ֣ד אֶתְכֶ֑ם לַעֲשׂ֣וֹת בָּאָ֔רֶץ אֲשֶׁ֥ר אַתֶּ֛ם עֹבְרִ֥ים שָׁ֖מָּה לְרִשְׁתָּֽהּ׃
2 ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.
לְמַ֨עַן תִּירָ֜א אֶת־יְהוָ֣ה אֱלֹהֶ֗יךָ לִ֠שְׁמֹר אֶת־כָּל־חֻקֹּתָ֣יו וּמִצְוֺתָיו֮ אֲשֶׁ֣ר אָנֹכִ֣י מְצַוֶּךָ֒ אַתָּה֙ וּבִנְךָ֣ וּבֶן־בִּנְךָ֔ כֹּ֖ל יְמֵ֣י חַיֶּ֑יךָ וּלְמַ֖עַן יַאֲרִכֻ֥ן יָמֶֽיךָ׃
3 ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.
וְשָׁמַעְתָּ֤ יִשְׂרָאֵל֙ וְשָׁמַרְתָּ֣ לַעֲשׂ֔וֹת אֲשֶׁר֙ יִיטַ֣ב לְךָ֔ וַאֲשֶׁ֥ר תִּרְבּ֖וּן מְאֹ֑ד כַּאֲשֶׁר֩ דִּבֶּ֨ר יְהוָ֜ה אֱלֹהֵ֤י אֲבֹתֶ֙יךָ֙ לָ֔ךְ אֶ֛רֶץ זָבַ֥ת חָלָ֖ב וּדְבָֽשׁ׃ פ
4 ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;
שְׁמַ֖ע יִשְׂרָאֵ֑ל יְהוָ֥ה אֱלֹהֵ֖ינוּ יְהוָ֥ה ׀ אֶחָֽד׃
5 ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
וְאָ֣הַבְתָּ֔ אֵ֖ת יְהוָ֣ה אֱלֹהֶ֑יךָ בְּכָל־לְבָבְךָ֥ וּבְכָל־נַפְשְׁךָ֖ וּבְכָל־מְאֹדֶֽךָ׃
6 ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.
וְהָי֞וּ הַדְּבָרִ֣ים הָאֵ֗לֶּה אֲשֶׁ֨ר אָנֹכִ֧י מְצַוְּךָ֛ הַיּ֖וֹם עַל־לְבָבֶֽךָ׃
7 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
וְשִׁנַּנְתָּ֣ם לְבָנֶ֔יךָ וְדִבַּרְתָּ֖ בָּ֑ם בְּשִׁבְתְּךָ֤ בְּבֵיתֶ֙ךָ֙ וּבְלֶכְתְּךָ֣ בַדֶּ֔רֶךְ וּֽבְשָׁכְבְּךָ֖ וּבְקוּמֶֽךָ׃
8 ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.
וּקְשַׁרְתָּ֥ם לְא֖וֹת עַל־יָדֶ֑ךָ וְהָי֥וּ לְטֹטָפֹ֖ת בֵּ֥ין עֵינֶֽיךָ׃
9 ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.
וּכְתַבְתָּ֛ם עַל־מְזוּזֹ֥ת בֵּיתֶ֖ךָ וּבִשְׁעָרֶֽיךָ׃ ס
10 ೧೦ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ
וְהָיָ֞ה כִּ֥י יְבִיאֲךָ֣ ׀ יְהוָ֣ה אֱלֹהֶ֗יךָ אֶל־הָאָ֜רֶץ אֲשֶׁ֨ר נִשְׁבַּ֧ע לַאֲבֹתֶ֛יךָ לְאַבְרָהָ֛ם לְיִצְחָ֥ק וּֽלְיַעֲקֹ֖ב לָ֣תֶת לָ֑ךְ עָרִ֛ים גְּדֹלֹ֥ת וְטֹבֹ֖ת אֲשֶׁ֥ר לֹא־בָנִֽיתָ׃
11 ೧೧ ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,
וּבָ֨תִּ֜ים מְלֵאִ֣ים כָּל־טוּב֮ אֲשֶׁ֣ר לֹא־מִלֵּאתָ֒ וּבֹרֹ֤ת חֲצוּבִים֙ אֲשֶׁ֣ר לֹא־חָצַ֔בְתָּ כְּרָמִ֥ים וְזֵיתִ֖ים אֲשֶׁ֣ר לֹא־נָטָ֑עְתָּ וְאָכַלְתָּ֖ וְשָׂבָֽעְתָּ׃
12 ೧೨ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.
הִשָּׁ֣מֶר לְךָ֔ פֶּן־תִּשְׁכַּ֖ח אֶת־יְהוָ֑ה אֲשֶׁ֧ר הוֹצִֽיאֲךָ֛ מֵאֶ֥רֶץ מִצְרַ֖יִם מִבֵּ֥ית עֲבָדִֽים׃
13 ೧೩ ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.
אֶת־יְהוָ֧ה אֱלֹהֶ֛יךָ תִּירָ֖א וְאֹת֣וֹ תַעֲבֹ֑ד וּבִשְׁמ֖וֹ תִּשָּׁבֵֽעַ׃
14 ೧೪ ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.
לֹ֣א תֵֽלְכ֔וּן אַחֲרֵ֖י אֱלֹהִ֣ים אֲחֵרִ֑ים מֵאֱלֹהֵי֙ הָֽעַמִּ֔ים אֲשֶׁ֖ר סְבִיבוֹתֵיכֶֽם׃
15 ೧೫ ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.
כִּ֣י אֵ֥ל קַנָּ֛א יְהוָ֥ה אֱלֹהֶ֖יךָ בְּקִרְבֶּ֑ךָ פֶּן־יֶ֠חֱרֶה אַף־יְהוָ֤ה אֱלֹהֶ֙יךָ֙ בָּ֔ךְ וְהִשְׁמִ֣ידְךָ֔ מֵעַ֖ל פְּנֵ֥י הָאֲדָמָֽה׃ ס
16 ೧೬ ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.
לֹ֣א תְנַסּ֔וּ אֶת־יְהוָ֖ה אֱלֹהֵיכֶ֑ם כַּאֲשֶׁ֥ר נִסִּיתֶ֖ם בַּמַּסָּֽה׃
17 ೧೭ ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.
שָׁמ֣וֹר תִּשְׁמְר֔וּן אֶת־מִצְוֺ֖ת יְהוָ֣ה אֱלֹהֵיכֶ֑ם וְעֵדֹתָ֥יו וְחֻקָּ֖יו אֲשֶׁ֥ר צִוָּֽךְ׃
18 ೧೮ ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
וְעָשִׂ֛יתָ הַיָּשָׁ֥ר וְהַטּ֖וֹב בְּעֵינֵ֣י יְהוָ֑ה לְמַ֙עַן֙ יִ֣יטַב לָ֔ךְ וּבָ֗אתָ וְיָֽרַשְׁתָּ֙ אֶת־הָאָ֣רֶץ הַטֹּבָ֔ה אֲשֶׁר־נִשְׁבַּ֥ע יְהוָ֖ה לַאֲבֹתֶֽיךָ׃
19 ೧೯ ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತುಕೊಟ್ಟನಲ್ಲವೇ.
לַהֲדֹ֥ף אֶת־כָּל־אֹיְבֶ֖יךָ מִפָּנֶ֑יךָ כַּאֲשֶׁ֖ר דִּבֶּ֥ר יְהוָֽה׃ ס
20 ೨೦ ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ
כִּֽי־יִשְׁאָלְךָ֥ בִנְךָ֛ מָחָ֖ר לֵאמֹ֑ר מָ֣ה הָעֵדֹ֗ת וְהַֽחֻקִּים֙ וְהַמִּשְׁפָּטִ֔ים אֲשֶׁ֥ר צִוָּ֛ה יְהוָ֥ה אֱלֹהֵ֖ינוּ אֶתְכֶֽם׃
21 ೨೧ ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.
וְאָמַרְתָּ֣ לְבִנְךָ֔ עֲבָדִ֛ים הָיִ֥ינוּ לְפַרְעֹ֖ה בְּמִצְרָ֑יִם וַיּוֹצִיאֵ֧נוּ יְהוָ֛ה מִמִּצְרַ֖יִם בְּיָ֥ד חֲזָקָֽה׃
22 ೨೨ ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,
וַיִּתֵּ֣ן יְהוָ֡ה אוֹתֹ֣ת וּ֠מֹפְתִים גְּדֹלִ֨ים וְרָעִ֧ים ׀ בְּמִצְרַ֛יִם בְּפַרְעֹ֥ה וּבְכָל־בֵּית֖וֹ לְעֵינֵֽינוּ׃
23 ೨೩ ತಾನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವುದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು.
וְאוֹתָ֖נוּ הוֹצִ֣יא מִשָּׁ֑ם לְמַ֙עַן֙ הָבִ֣יא אֹתָ֔נוּ לָ֤תֶת לָ֙נוּ֙ אֶת־הָאָ֔רֶץ אֲשֶׁ֥ר נִשְׁבַּ֖ע לַאֲבֹתֵֽינוּ׃
24 ೨೪ ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.
וַיְצַוֵּ֣נוּ יְהוָ֗ה לַעֲשׂוֹת֙ אֶת־כָּל־הַחֻקִּ֣ים הָאֵ֔לֶּה לְיִרְאָ֖ה אֶת־יְהוָ֣ה אֱלֹהֵ֑ינוּ לְט֥וֹב לָ֙נוּ֙ כָּל־הַיָּמִ֔ים לְחַיֹּתֵ֖נוּ כְּהַיּ֥וֹם הַזֶּֽה׃
25 ೨೫ ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.
וּצְדָקָ֖ה תִּֽהְיֶה־לָּ֑נוּ כִּֽי־נִשְׁמֹ֨ר לַעֲשׂ֜וֹת אֶת־כָּל־הַמִּצְוָ֣ה הַזֹּ֗את לִפְנֵ֛י יְהוָ֥ה אֱלֹהֵ֖ינוּ כַּאֲשֶׁ֥ר צִוָּֽנוּ׃ ס

< ಧರ್ಮೋಪದೇಶಕಾಂಡ 6 >